ಆ್ಯಪ್ನಗರ

ಸಂಭ್ರಮದ ರಂಜಾನ್‌ ಆಚರಣೆ

ಹುಬ್ಬಳ್ಳಿ/ಧಾರವಾಡ : ಕಳೆದ ಒಂದು ತಿಂಗಳಿನಿಂದ ಉಪವಾಸ ಮಾಡುತ್ತಿದ್ದ ಮುಸ್ಲಿಂ ಬಾಂಧವರು ಬುಧವಾರ ಹುಬ್ಬಳ್ಳಿ-ಧಾರವಾಡ ಅವಳಿನಗರ ಸೇರಿದಂತೆ ಜ್ಲಿಲಾದ್ಯಂತ ರಂಜಾನ ಹಬ್ಬವನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಿದರು.

Vijaya Karnataka 6 Jun 2019, 5:00 am
ಹುಬ್ಬಳ್ಳಿ/ಧಾರವಾಡ : ಕಳೆದ ಒಂದು ತಿಂಗಳಿನಿಂದ ಉಪವಾಸ ಮಾಡುತ್ತಿದ್ದ ಮುಸ್ಲಿಂ ಬಾಂಧವರು ಬುಧವಾರ ಹುಬ್ಬಳ್ಳಿ-ಧಾರವಾಡ ಅವಳಿನಗರ ಸೇರಿದಂತೆ ಜಿಲ್ಲಾದ್ಯಂತ ರಂಜಾನ ಹಬ್ಬವನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಿದರು.
Vijaya Karnataka Web DRW-5MANJU1F


ಹುಬ್ಬಳ್ಳಿ ಹಾಗೂ ಧಾರವಾಡದ ಈದ್ಗಾ ಮೈದಾನದಲ್ಲಿ ಸೇರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮುಸ್ಲಿಂ ಸಮುದಾಯದವರು ಮಂಗಳವಾರ ಸಂಜೆ ಚಂದ್ರ ದರ್ಶನವಾಗುತ್ತಿದ್ದಂತೆ ಬುಧವಾರ ರಂಜಾನ್‌ ಆಚರಣೆಗಾಗಿ ನಿರ್ಧಾರ ಕೈಗೊಂಡರು. ಜಿಲ್ಲೆಯ ಎಲ್ಲ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ, ಪರಸ್ಪರ ಶುಭಾಶಯ ವಿನಿಮಯ ನಡೆಯಿತು. ಮಧ್ಯಾಹ್ನ ವಿಶೇಷ ಖಾದ್ಯವಾದ ಸುರಕುರಮಾ ಸವಿದು ಹಬ್ಬ ಆಚರಿಸಿದರು. ಮೌಲ್ವಿಗಳು ಶಾಂತಿ, ಸಮೃದ್ಧಿ, ಉತ್ತಮ ಮಳೆ ಹಾಗೂ ಬೆಳೆಗಾಗಿ ಬೇಡಿಕೊಂಡರು. ಬಡವರ ಮನೆಗಳಿಗೆ ತೆರಳಿದ ಜನರು ಬಟ್ಟೆ, ಹಣ ನೀಡಿ ಹಬ್ಬದ ಶುಭಾಶಯ ಕೋರಿದರು. ಪ್ರಾರ್ಥನೆ ನಂತರ ನಾನಾ ಧರ್ಮೀಯರಿಗೆ ಶುಭ ಕೋರಿದ ಮುಸ್ಲಿಂ ಸಮುದಾಯದವರು ಅಪ್ಪುಗೆಯ ಮೂಲಕ ಈದ್‌ ಮುಬಾರಕ್‌ ಎಂದರು.

ಅಂಗಡಿಗಳಲ್ಲಿ ಅತ್ತರ್‌, ಶ್ಯಾವಿಗೆ, ಬಟ್ಟೆಗಳು, ಗೃಹಾಲಂಕಾರ ವಸ್ತುಗಳ ಮಾರಾಟ ಜೋರಾಗಿತ್ತು. ಪುರುಷರು, ಮಹಿಳೆಯರು ಹಾಗೂ ಮಕ್ಕಳು ಹೊಸ ಬಟ್ಟೆ ಧರಿಸಿ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಮಧ್ಯಾಹ್ನ ಮನೆ ಮನೆಗಳಲ್ಲಿ ಶ್ಯಾವಿಗೆಯ ವಿಶೇಷ ಖಾದ್ಯ ಸುರಕುರಮಾ ಸಿದ್ಧಪಡಿಸಲಾಯಿತು. ಬಂಧುಗಳು, ಸ್ನೇಹಿತರನ್ನು ಆಹ್ವಾನಿಸಿ ಔತಣಕೂಟ ಆಯೋಜಿಸಲಾಗಿತ್ತು. ಸಂಜೆ ಇಫ್ತಾರ್‌ ಕೂಟದ ಮೂಲಕ ವಿಶೇಷ ಖಾದ್ಯಗಳ ಔತಣಕೂಟ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ