ಆ್ಯಪ್ನಗರ

ಕೇಂದ್ರ-ರಾಜ್ಯ ಸರಕಾರವನ್ನು ಜೈಲಿಗೆ ಹಾಕಬೇಕು: ರೈತ ಸಂಘ

ಳಸಾ-ಬಂಡೂರಿ ಯೋಜನೆ ಅನುಷ್ಠಾನ ಆಗುತ್ತಿಲ್ಲ. ಮಹದಾಯಿ ನ್ಯಾಯಾಧಿಕರಣ ನೀಡಿರುವ ಆದೇಶದಂತೆ ‌ಕೂಡಲೇ ನಾಲ್ಕು ಟಿಎಮ್‌ಸಿ ನೀರನ್ನು ಮಲಪ್ರಭಗೆ ಹರಿಸಬೇಕು ಎಂದು ಆಗ್ರಹಿಸಿದರು.

Vijaya Karnataka Web 13 Jan 2019, 3:03 pm
ಹುಬ್ಬಳ್ಳಿ: ಕಳಸಾ-ಬಂಡೂರಿ ಹೋರಾಟಗಾರರು ಫೆ.13 ರಂದು ವಿಧಾನಸೌದಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಎ.ಲಕ್ಷ್ಮೀನಾರಾಯಣಗೌಡ ಹೇಳಿದರು.
Vijaya Karnataka Web fo


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಸಾ-ಬಂಡೂರಿ ಯೋಜನೆ ಅನುಷ್ಠಾನ ಆಗುತ್ತಿಲ್ಲ. ಮಹದಾಯಿ ನ್ಯಾಯಾಧಿಕರಣ ನೀಡಿರುವ ಆದೇಶದಂತೆ ‌ಕೂಡಲೇ ನಾಲ್ಕು ಟಿಎಮ್‌ಸಿ ನೀರನ್ನು ಮಲಪ್ರಭಗೆ ಹರಿಸಬೇಕು ಎಂದು ಆಗ್ರಹಿಸಿದರು.

ಬರಗಾಲದಿಂದ ಉತ್ತರ ‌ಕರ್ನಾಟಕ ಜನ ಸಂಕಷ್ಟದಲ್ಲಿದ್ದಾರೆ. ರೈತರ ಸಾಲ ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಫಸಲ ಭೀಮಾ ಯೋಜನೆ ಇದು ಹಗಲು ದರೋಡೆ ಯೋಜನೆ. ರೈತರ ಬೆಳೆಗಳಿಗೆ ಯೋಗ್ಯ ಬೆಲೆ ನೀಡಬೇಕು. ರೈತರ ಜತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರಕಾರವನ್ನು ಮೊದಲು ಜೈಲಿಗೆ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳಸಾ-ಬಂಡೂರಿ ಹಾಗೂ ರೈತರ ಸಾಲಮನ್ನಾ ವಿಚಾರವನ್ನಿಟ್ಟುಕೊಂಡು ವಿಧಾನಸೌಧಕ್ಕೆ ಮುತ್ತಿಗೆ ಹಾಗೂ ಅನಿರ್ದಿಷ್ಟಾವಧಿ ಹೋರಟಕ್ಕೆ ನಿರ್ಧರಿಸಿದ್ದೇವೆ. ಸರಕಾರ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ