ಆ್ಯಪ್ನಗರ

ಸಚಿವರಿಂದ ಪಾಲಿಕೆ ಅಧಿಕಾರಿಗಳಿಗೆ ಕ್ಲಾಸ್‌

ಹುಬ್ಬಳ್ಳಿ : ಅವಳಿ ನಗರದಲ್ಲಿ ತೀವ್ರವಾಗಿ ಹದಗೆಟ್ಟಿರುವ ಕಸ ವಿಲೇವಾರಿ ಕುರಿತು ಮತ್ತು ಘನತಾಜ್ಯ ನಿರ್ವಹಣೆ ಕಾಮಗಾರಿಗಳ ವಿಳಂಬ ಆಗುತ್ತಿರುವ ಬಗ್ಗೆ ಸಂಸದ ಪ್ರಹ್ಲಾದ ಜೋಶಿ ಪಾಲಿಕೆ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

Vijaya Karnataka 25 Aug 2019, 5:00 am
ಹುಬ್ಬಳ್ಳಿ : ಅವಳಿ ನಗರದಲ್ಲಿ ತೀವ್ರವಾಗಿ ಹದಗೆಟ್ಟಿರುವ ಕಸ ವಿಲೇವಾರಿ ಕುರಿತು ಮತ್ತು ಘನತಾಜ್ಯ ನಿರ್ವಹಣೆ ಕಾಮಗಾರಿಗಳ ವಿಳಂಬ ಆಗುತ್ತಿರುವ ಬಗ್ಗೆ ಸಂಸದ ಪ್ರಹ್ಲಾದ ಜೋಶಿ ಪಾಲಿಕೆ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
Vijaya Karnataka Web HBL-2308-2-3-23 JOSHI HDMC
ಘನತ್ಯಾಜ್ಯ ನಿರ್ವಹಣೆ ಕುರಿತು ಪಾಲಿಕೆ ಆಯುಕ್ತ ಸುರೇಶ ಇಟ್ನಾಳ್‌ ಅವರಿಂದ ಸಂಸದ ಪ್ರಹ್ಲಾದ ಜೋಶಿ ಮಾಹಿತಿ ಪಡೆದರು.


ಸಮರ್ಪಕವಾಗ ಕಸ ವಿಲೇವಾರಿ ಮಾಡದೇ ಇರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿವೆ. ಸ್ವಚ್ಛತೆ ಬಗ್ಗೆ ಗಮನ ಕೊಡದಿದ್ದರೆ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಅಧಿಕಾರಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧವೂ ಕ್ರಮಕೈಗೊಳ್ಳಿ ಎಂದು ಸೂಚಿಸಿದರು.

ಕಾಂಪ್ಯಾಕ್ಟರ್‌ ಸ್ಟೇಷನ್‌ ಕಾಮಗಾರಿ ನಿಧಾನ ಗತಿಯಲ್ಲಿ ಸಾಗುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಸಂಸದರು, ಘನತ್ಯಾಜ್ಯ ವಿಭಾಗದ ಎಂಜಿನಿಯರ್‌ಗಳು ಕೆಲಸ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿದರು. ಈ ಮಧ್ಯೆ ಸ್ಟೇಶನ್‌ಗೆ ತಕರಾರು ಇರುವ ಬಗ್ಗೆ ಆಯುಕ್ತ ಸುರೇಶ ಇಟ್ನಾಳ ಗಮನ ಸೆಳೆದರು. ಇದನ್ನು ಬಗೆಹರಿಸುವುದಾಗಿ ಸಂಸದರು ಭರವಸೆ ನೀಡಿದರು.

ಟೆಂಡರ್‌, ಮಳೆ ಅದು ಇದು ಅಂತ ನಾನಾ ಸಬೂಬು ಹೇಳುತ್ತಿದ್ದ ಅಧಿಕಾರಿಗಳಿಗೆ ಸಂಸದರು, ಅದನ್ನೆಲ್ಲ ನೆಪ ಬಿಡಿ ಯೋಜನೆಗಳನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸುವತ್ತ ಗಮನ ಹರಿಸಿ ಎಂದು ತಿಳಿಸಿದರು.

ಸಭೆಯಲ್ಲಿ ಆಯುಕ್ತ ಸುರೇಶ ಇಟ್ನಾಳ್‌, ಅಧೀಕ್ಷಕ ಎಂಜಿನಿಯರ್‌ ಮಹೇಶ ಹಾಗೂ ಮಾಜಿ ಮೇಯರ್‌ ಸುಧೀರ್‌ ಸರಾಫ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ