ಆ್ಯಪ್ನಗರ

ನಾಡೋಜ ಪಾಟೀಲ ಪುಟ್ಟಪ್ಪರಿಗೆ ಬಸವ ರಾಷ್ಟ್ರೀಯ ಪುರಸ್ಕಾರ ಶೀಘ್ರ ಪ್ರದಾನ: ಸಿಎಂ ಬಿಎಸ್​ವೈ ಭರವಸೆ

ನಾಡೋಜ ಪಾಟೀಲ ಪುಟ್ಟಪ್ಪನವರಿಗೆ ಕರ್ನಾಟಕ ರಾಜ್ಯ ಸರಕಾರದಿಂದ 2017 ನೇ ಸಾಲಿಗಾಗಿ ಘೋಷಿಸಿದ್ದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿಯನ್ನು ಶೀಘ್ರದಲ್ಲಿ ಸರಕಾರದಿಂದ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Vijaya Karnataka Web 15 Mar 2020, 3:22 pm
ಹುಬ್ಬಳ್ಳಿ: ನಾಡೋಜ ಪಾಟೀಲ ಪುಟ್ಟಪ್ಪನವರಿಗೆ ಕರ್ನಾಟಕ ರಾಜ್ಯ ಸರಕಾರದಿಂದ 2017 ನೇ ಸಾಲಿಗಾಗಿ ಘೋಷಿಸಿದ್ದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿಯನ್ನು ಶೀಘ್ರದಲ್ಲಿ ಸರಕಾರದಿಂದ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
Vijaya Karnataka Web yadiyurappa

ಅವರು ಇಂದು ಮಧ್ಯಾಹ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ, ಮಾತನಾಡಿದರು.

ರಾಷ್ಟ್ರೀಯ ಬಸವ ಪುರಸ್ಕಾರದೊಂದಿಗೆ ನಗದು ಹತ್ತು ಲಕ್ಷ ರೂ.ಗಳನ್ನು ಮತ್ತು ಡಾ.ಪಾಟೀಲ ಪುಟ್ಟಪ್ಪ ಅವರ ಆರೋಗ್ಯ ಚಿಕಿತ್ಸೆ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ನಾಡೋಜ ಡಾ.ಪುಟ್ಟಪ್ಪನವರು ಈಗ ಸದ್ಯ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಇದ್ದು, ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಅವರು ಹೇಳಿದರು.

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ( ಕಿಮ್ಸ್ ) ಯಲ್ಲಿ ಕಳೆದ ಫೆ.10 ರಿಂದ ಚಿಕಿತ್ಸೆ ಪಡೆಯುತ್ತಿರುವ , ಹಿರಿಯ ಪತ್ರಕರ್ತ, ರಾಜ್ಯಸಭೆ ಮಾಜಿ ಸದಸ್ಯ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರ ಆರೋಗ್ಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಖುದ್ದಾಗಿ ಭೇಟಿ ನೀಡಿ ವಿಚಾರಿಸಿದರು. ಕಿಮ್ಸ್ ನಲ್ಲಿ ಪಾಟೀಲ ಪುಟ್ಟಪ್ಪನವರಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿದೆ. ಸಾಧ್ಯವಾದಷ್ಟು ಇನ್ನೂ ಹೆಚ್ಚಿನ ಪ್ರಯತ್ನ ಮಾಡಿ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಿಮ್ಸ್ ಭೇಟಿ: ನಾಡೋಜ ಪಾಟೀಲ ಪುಟ್ಟಪ್ಪರ ಆರೋಗ್ಯ ವಿಚಾರಣೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ