ಆ್ಯಪ್ನಗರ

ಬಿಜೆಪಿಯವರಿಗೆ ಕೆಲಸವಿಲ್ಲ, 24 ಗಂಟೆಯಲ್ಲಿ ಸರಕಾರ ಬಿದ್ದು ಹೋಗುತ್ತೆ ಎಂಬುದು ಶುದ್ಧ ಸುಳ್ಳ: ಸಿದ್ದರಾಮಯ್ಯ

ಮೈತ್ರಿ ಸರಕಾರ ಸುಭದ್ರವಾಗಿದ್ದು, ಪೂರ್ಣ ಅಧಿಕಾರಾವಧಿ ಪೂರೈಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Vijaya Karnataka Web 27 Dec 2018, 3:02 pm
ಹುಬ್ಬಳ್ಳಿ: 24 ಗಂಟೆಯಲ್ಲಿ ಸರಕಾರ ಬಿದ್ದು ಹೋಗುತ್ತೆ ಎಂಬುದು ಶುದ್ಧ ಸುಳ್ಳ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಅದರಲ್ಲೂ ಉಮೇಶ್ ಕತ್ತಿ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Vijaya Karnataka Web siddaramaiah


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರಕಾರ ಸುಭದ್ರವಾಗಿದ್ದು, ಪೂರ್ಣ ಅಧಿಕಾರಾವಧಿ ಪೂರೈಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯವರು ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಯತ್ನಿಸಿದ್ದಾರೆ. ಆದರೆ, ಅದು ಫಲ ನೀಡದು ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ಮೂಲತಃ ಕಾಂಗ್ರೆಸ್ ವ್ಯಕ್ತಿಯಾಗಿದ್ದು, ಪಕ್ಷದಲ್ಲಿಯೇ ಇರುತ್ತಾರೆ. ಸಂಪುಟದಿಂದ ಕೈಬಿಟ್ಟಿದ್ದಕ್ಕೆ ಸಹಜವಾಗಿ ಬೇಸರಗೊಂಡಿದ್ದಾರೆ. ಮುಂದೆ ಇದೆಲ್ಲ ಸರಿ ಹೋಗುತ್ತದೆ ಎಂದರು.

'ನನ್ನ ಹಾಗೂ ಡಾ.ಜಿ.ಪರಮೇಶ್ವರ್ ನಡುವೆ ಭಿನ್ನಾಭಿಪ್ರಾಯವಿಲ್ಲ. ನಾವೆಲ್ಲ ಒಟ್ಟಾಗಿಯೇ ಇದ್ದೇವೆ. ನೂತನ ಸಚಿವರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೇ ಖಾತೆ ಹಂಚಿಕೆ ಮಾಡಲಿದ್ದಾರೆ. ಗೃಹ ಖಾತೆ ಇಂತವರಿಗೆ ನೀಡಬೇಕೆಂದು ಪಟ್ಟು ಹಿಡಿದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿಯೂ ಜೆಡಿಎಸ್ ಜತೆ ಹೊಂದಾಣಿಕೆ ಮುಂದುವರೆಸುತ್ತೇವೆ. ಆದರೆ, ಯಾರಿಗೆ ಎಷ್ಟು ಟಿಕೆಟ್ ನೀಡಬೇಕೆಂದು ತೀರ್ಮಾನವಾಗಿಲ್ಲ. ಜೆಡಿಎಸ್-ಕಾಂಗ್ರೆಸ್ ಮುಖಂಡರ ಜತೆ ಸಭೆ ನಡೆಸಿ ಬಳಿಕ ಟಿಕೆಟ್ ಹಂಚಿಕೆ ತೀರ್ಮಾನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ