ಆ್ಯಪ್ನಗರ

ಸ್ಪರ್ಧಾತ್ಮಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಧಾರವಾಡ : ಜೂ.8, 9 ಮತ್ತು 16 ರಂದು ರಾಜ್ಯದ ವಿವಿಧ ನ್ಯಾಯಾಂಗ ಘಟಕಗಳಲ್ಲಿನ ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳ ನಿಮಿತ್ತ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Vijaya Karnataka 8 Jun 2019, 5:00 am
ಧಾರವಾಡ : ಜೂ.8, 9 ಮತ್ತು 16 ರಂದು ರಾಜ್ಯದ ವಿವಿಧ ನ್ಯಾಯಾಂಗ ಘಟಕಗಳಲ್ಲಿನ ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳ ನಿಮಿತ್ತ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
Vijaya Karnataka Web competitive examination prohibition enforcement
ಸ್ಪರ್ಧಾತ್ಮಕ ಪರೀಕ್ಷೆ: ನಿಷೇಧಾಜ್ಞೆ ಜಾರಿ


ಹುಬ್ಬಳ್ಳಿ-ಧಾರವಾಡ ನಗರದ ವ್ಯಾಪ್ತಿಯಲ್ಲಿ 65 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಕ್ರಮ ಚಟುವಟಿಕೆ ಹಾಗೂ ಅಹಿತಕರ ಘಟನೆ ಸಂಭವಿಸದಂತೆ ತಡೆಗಟ್ಟಲು ಮತ್ತು ಪರೀಕ್ಷೆಯನ್ನು ಶಾಂತಿಯುತ, ಪಾರದರ್ಶಕ ಮತ್ತು ಸುಗಮ ನಡೆಸಲು ಅನುಕೂಲವಾಗುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಸಿಆರ್‌ಪಿಸಿ ಕಲಂ 144 ಹಾಗೂ 20ರ ಪ್ರಕಾರ ಅಧಿಕಾರ ಚಲಾಯಿಸಿ ಹು-ಧಾ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಮತ್ತು ಪೊಲೀಸ್‌ ಕಮೀಷನರ್‌ ಎಂ.ಎನ್‌. ನಾಗರಾಜ್‌ ಪರೀಕ್ಷಾ ಕೇಂದ್ರ ಸುತ್ತಲೂ 200 ಮೀಟರ ಪ್ರದೇಶವನ್ನು ನಿರ್ಭಂದಿತ ಪ್ರದೇಶವೆಂದು ಘೋಷಿಸಿದ್ದಾರೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಧ್ವನಿವರ್ಧಕ ನಿರ್ಭಂದಿಸಿ, ಪರೀಕ್ಷಾ ಕೇಂದ್ರಗಳ ಸಮೀಪವಿರುವ ಝರಾಕ್ಸ್‌ ಅಂಗಡಿಗಳು ಪರೀಕ್ಷಾ ಸಮಯದಲ್ಲಿ ಕಾರ್ಯನಿರ್ವಹಿಸದಂತೆ ಆದೇಶಿಸಿ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ