ಆ್ಯಪ್ನಗರ

ಮಳೆಗಾಲಕ್ಕೂ ಮುನ್ನ ಕಾಮಗಾರಿ ಪೂರ್ಣಗೊಳಿಸಿ

ಹುಬ್ಬಳ್ಳಿ : ಅವಳಿ ನಗರದಲ್ಲಿಪಿಡಬ್ಲ್ಯಡಿ ಇಲಾಖೆ, ಸಿಆರ್‌ಎಫ್‌ ಹಾಗೂ ವಿಶೇಷ ಅನುದಾನದಡಿ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿಗಳನ್ನು ಮಳೆಗಾಲಕ್ಕೂ ಮುನ್ನ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಉಸ್ತವಾರಿ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು.

Vijaya Karnataka 19 May 2020, 5:00 am
ಹುಬ್ಬಳ್ಳಿ : ಅವಳಿ ನಗರದಲ್ಲಿಪಿಡಬ್ಲ್ಯಡಿ ಇಲಾಖೆ, ಸಿಆರ್‌ಎಫ್‌ ಹಾಗೂ ವಿಶೇಷ ಅನುದಾನದಡಿ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿಗಳನ್ನು ಮಳೆಗಾಲಕ್ಕೂ ಮುನ್ನ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಉಸ್ತವಾರಿ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು.
Vijaya Karnataka Web 18 SANTOSH-8_21
ಹುಬ್ಬಳ್ಳಿ ರಾಜೀವನಗರದಲ್ಲಿ5 ಕೋಟಿ ರೂ. ಅನುದಾನದಡಿ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿಯನ್ನು ಸಚಿವ ಜಗದೀಶ ಶೆಟ್ಟರ್‌ ಪರಿಶೀಲಿಸಿದರು.


ರಾಜೀವ ನಗರದಲ್ಲಿಲೋಕೋಪಯೋಗಿ ಇಲಾಖೆ 5 ಕೋಟಿ ರೂ. ಅನುದಾನದಡಿ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿ ವೀಕ್ಷಿಸಿ ಮಾತನಾಡಿದರು.

ಲೋಕೋಪಯೋಗಿ ಇಲಾಖೆಯ 35 ಕೋಟಿ ರೂ. ಅನುದಾನದಲ್ಲಿಹುಬ್ಬಳ್ಳಿ ನಗರದ ಪ್ರಮುಖ ಏರಿಯಾಗಳ ಒಳ ರಸ್ತೆಗಳನ್ನು ಮುಖ್ಯ ರಸ್ತೆಗೆ ಸಂಪರ್ಕಿಸುವ ಕಾರ್ಯ ಮಾಡಲಾಗುತ್ತಿದೆ. ನೆರೆಯಲ್ಲಿಹಾನಿಯಾದ ಸೇತುವೆಗಳ ನಿರ್ಮಾಣಕ್ಕಾಗಿ 8 ಕೋಟಿ ವಿಶೇಷ ಅನುದಾನ ಸಹ ನೀಡಲಾಗಿದೆ. ಇದರಲ್ಲಿ3 ಸೇತುವೆಗಳ ಕಾರ್ಯ ಪೂರ್ಣಗೊಂಡಿದೆ. ವಾರ್ಡ್‌ ನಂರ್ಬ 35 ರಲ್ಲಿ15 ಕೋಟಿ ವೆಚ್ಚದಲ್ಲಿಎಲ್ಲಾ ರಸ್ತೆಗಳ ನಿರ್ಮಾಣ, ಡಾಂಬರೀಕರಣ ಹಾಗೂ ಕಾಂಕ್ರೀಟಿಕರಣಕ್ಕೆ ಚಾಲನೆ ನೀಡಲಾಗಿದೆ. ನಗರವನ್ನು ಸಂಪರ್ಕಿಸುವ ಮುಖ್ಯ ರಸ್ತೆಗಳ ಅಗಲೀಕರಣ, ವರ್ತಲ ರಸ್ತೆ ಕಾಮಗಾರಿಗಳು ಬಹುತೇಕ ಮುಗಿಯುವ ಹಂತಕ್ಕೆ ಬಂದಿವೆ. ಪ್ಲೈ ಓವರ್‌ ಹಾಗೂ ಓವರ್‌ ಬ್ರಿಡ್ಜ… ಗಳ ನಿರ್ಮಾಣ ಬಾಕಿ ಇವೆ ಎಂದರು.

ಚನ್ನಮ್ಮ ವೃತ್ತದ ಫ್ಲೈ ಓವರ್‌ ನಿರ್ಮಾಣಕ್ಕೆ ಟೆಂಡರ್‌
ಕೇಂದ್ರ ಸರಕಾರ ಹುಬ್ಬಳ್ಳಿ ರಾಣಿ ಚನ್ನಮ್ಮ ವೃತ್ತದ ಫ್ಲೈ ಓವರ್‌ ನಿರ್ಮಾಣಕ್ಕೆ ಹಸಿರು ನಿಶಾನೆ ತೊರಿಸಿದ್ದು, 350 ಕೋಟಿ ರೂ. ನೀಡಿದ್ದು, ಅಂದಾಜು 850 ರಿಂದ 900 ಕೋಟಿ ವೆಚ್ಚದ ಈ ಕಾಮಗಾರಿಗೆ ಟೆಂಡರ್‌ ಕರೆಯಲಾಗಿದೆ. ಹುಬ್ಬಳ್ಳಿ ಧಾರವಾಡ ಮಧ್ಯದ 2 ಪಥದ ಹೆದ್ದಾರಿಯನ್ನು ಆರು ಪಥದ ರಸ್ತೆಯನ್ನಾಗಿಸಲು ಯೋಜನೆ ರೂಪಿಸಲಾಗಿದೆ ಎಂದರು. ಎಂಜಿನಿಯರ್‌, ಸಿ.ವಿ.ಪಾಟೀಲ…, ಪಾಲಿಕೆ ಮಾಜಿ ಸದಸ್ಯ ಮಹೇಶ್‌ ಬುರ್ಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ