ಆ್ಯಪ್ನಗರ

ಕೊರೊನಾ ಹೆಚ್ಚಾಗುತ್ತಿದೆ, ಸರಕಾರ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದೆ, ಜನತೆ ಕೂಡ ಜವಾಬ್ದಾರಿ ಅರಿಯಬೇಕು: ಪ್ರಹ್ಲಾದ್‌ ಜೋಶಿ

ಇದೀಗ ಕೋವಿಡ್ ನಿಯಂತ್ರಣಕ್ಕೆ ಕೆಲಸ ಮಾಡುವ ಸಮಯ. ಇದು ರಾಜಕೀಯ ಮಾಡುವ ಸಮಯವಲ್ಲ. ಈ ಬಗ್ಗೆ ನಾನೇನು ಪ್ರತಿಕ್ರಿಯೆ ನೀಡಲಾರೆ ಎಂದು ಪ್ರಹ್ಲಾದ್‌ ಜೋಶಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Vijaya Karnataka Web 7 Jul 2020, 6:40 pm
ಧಾರವಾಡ: ರಾಜ್ಯದಲ್ಲಿ ಕೊರೊನಾ ಮಹಾಮಾರಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಇದರ ನಿಯಂತ್ರಣಕ್ಕೆ ಸರಕಾರ ಎಲ್ಲ ಕ್ರಮ ಕೈಗೊಂಡಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರದ ಗಣಿ, ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.
Vijaya Karnataka Web ಪ್ರಹ್ಲಾದ್‌ ಜೋಶಿ
ಪ್ರಹ್ಲಾದ್‌ ಜೋಶಿ


ನಗರದಿಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 ಆತಂಕಕಾರಿಯಾಗಿ ಬೆಳೆಯುತ್ತಿದೆ. ಸೋಂಕು ಹತೋಟಿಗಾಗಿ ಈಗಾಗಲೇ ಸರಕಾರಗಳು ತಮ್ಮ ಕೆಲಸವನ್ನು ಮಾಡುತ್ತಿವೆ. ಎಲ್ಲವನ್ನೂ ಸರಕಾರವೇ ಮಾಡಲೆಂದು ಸುಮ್ಮನೆ ಕುಳಿತಕೊಳ್ಳದೆ, ಜನತೆ ಮಾಸ್ಕ್ ಧಾರಣೆ, ಸ್ಯಾನಿಟೈಜರ್ ಬಳಕೆ ಸೇರಿ ಸಾಮಾಜಿಕ ಅಂತರ ಕಾಯುವ ಬಗ್ಗೆ ಸಾರ್ವಜನಿಕರು ತಮ್ಮ ಜವಾಬ್ದಾರಿ ಅರಿತು ನಡೆಯಬೇಕು ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ ಕೊರೊನಾ ಕೈಮೀರಿ ಹೋಗಿದೆಂಬ ಸಚಿವ ಮಾಧಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಜೋಶಿ, ಅವರು ಹಾಗೆ ಹೇಳಬಾರದಿತ್ತು. ಯಾವ ಅರ್ಥದಲ್ಲಿ ಹೇಳಿದ್ದಾರೆಂಬುದು ನನಗೆ ಗೊತ್ತಿಲ್ಲ ಎಂದು ಕೇಂದ್ರ ಸಚಿವರು ಉತ್ತರಿಸಿದರು.

ಇದೀಗ ಕೋವಿಡ್ ನಿಯಂತ್ರಣಕ್ಕೆ ಕೆಲಸ ಮಾಡುವ ಸಮಯ. ಇದು ರಾಜಕೀಯ ಮಾಡುವ ಸಮಯವಲ್ಲ. ಈ ಬಗ್ಗೆ ನಾನೇನು ಪ್ರತಿಕ್ರಿಯೆ ನೀಡಲಾರೆ ಎಂದು ಪ್ರಹ್ಲಾದ್‌ ಜೋಶಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ