ಆ್ಯಪ್ನಗರ

ಲಾಕ್‌ಡೌನ್‌ 2.0 ಆದೇಶವನ್ನು ಕಡ್ಡಾಯವಾಗಿ ಪಾಲಿಸಿ; ಆರೋಗ್ಯ ಕಾಪಾಡಿಕೊಳ್ಳಿ: ಶೆಟ್ಟರ್

ಕೊರೊನಾ ವೈರಸ್‌ ಸೋಂಕಿತರ ಸಂಖ್ಯೆ ದೇಶದಲ್ಲಿ ಹೆಚ್ಚುತ್ತಿರುವ ಹಾಗೆ ದೇಶದಲ್ಲಿ ಲಾಕ್‌ಡೌನ್‌ ಮತ್ತೆ ವಿಸ್ತರಿಸಲಾಗಿದೆ. ಜನರ ಆರೋಗ್ಯಕ್ಕಾಗಿ ಇದರ ಪಾಲನೆಯಾಗಬೇಕು ಎಂದು ಸಚಿವ ಜಗದೀಶ್‌ ಶೆಟ್ಟರ್ ಹೇಳಿದರು.

Vijaya Karnataka Web 15 Apr 2020, 3:03 pm
ಹುಬ್ಬಳ್ಳಿ: ಕೊರೋನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಮೇ 3ರವರೆಗೂ ಲಾಕ್‌ಡೌನ್‌ ಜಾರಿಯಾಗಿದೆ. ದೇಶದ ನಾಗರಿಕರ ಆರೋಗ್ಯದ ಹಿತದೃಷ್ಟಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಘೋಷಣೆ ಮಾಡಿರುವ ಲಾಕ್‌ಡೌನ್‌ ಆದೇಶವನ್ನು ಎಲ್ಲರೂ ಪಾಲಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಮನವಿ ಮಾಡಿದರು.
Vijaya Karnataka Web Jagadish Shettar


ಹುಬ್ಬಳ್ಳಿ ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಗದೀಶ್‌ ಶೆಟ್ಟರ್, ದೇಶಾದ್ಯಂತ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಹರಡುವಿಕೆ ಹೆಚ್ಚಾಗಿದೆ. ಅಲ್ಲದೆ ಸಾವಿನ ಸಂಖ್ಯೆ ಕೂಡ ಅಧಿಕವಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಆದರೆ, ಪ್ರಪಂಚದ ಅಂಕಿ ಅಂಶಗಳನ್ನು ಗಮನಿಸಿದರೆ ಭಾರತ ಒಂದು ಕಡೆಯಲ್ಲಿ ನಿಯಂತ್ರಣದಲ್ಲಿದೆ ಎಂದು ಅನಿಸುತ್ತದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಘೋಷಣೆ ಮಾಡಿರುವ ಲಾಕ್‌ಡೌನ್‌ 2.0 ಅನ್ನು ದೇಶದ ನಾಗರಿಕರು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಶೆಟ್ಟರ್ ಮನವಿ ಮಾಡಿದರು.

ಕೋವಿಡ್‌-19 ವರದಿಗೆ ಕಾದು ಜಾಂಡೀಸ್‌ಗೆ ಚಿಕಿತ್ಸೆ ಕೊಡಲಿಲ್ಲ, ಹುಬ್ಬಳ್ಳಿಯ ಯುವ ಎಂಜಿನಿಯರ್‌ ಸಾವು!

ಇನ್ನು, ಈಗಾಗಲೇ ಕೃಷಿ ಚಟುವಟಿಕೆಗಳಿಗೆ ಸರಕಾರ ವಿನಾಯಿತಿ ನೀಡಿದ್ದು, ಕೈಗಾರಿಕೆಗಳ ಕುರಿತು ಕೇಂದ್ರ ಸಚಿವರ ಜೊತೆಗೆ ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಿದರು. ಜತೆಗೆ, ಸಾರ್ವಜನಿಕರು ಪ್ರಧಾನ ಮಂತ್ರಿಯವರ ಆದೇಶವನ್ನು ಪಾಲಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಮಾಧ್ಯಮದ ಮೂಲಕ ಹುಬ್ಬಳ್ಳಿಯಲ್ಲಿ ಸಚಿವ ಜಗದೀಶ್‌ ಶೆಟ್ಟರ್ ವಿನಂತಿ ಮಾಡಿದರು.

ಹುಬ್ಬಳ್ಳಿಯಲ್ಲಿ ಮತ್ತೆ 4 ಮಂದಿಗೆ ಕೊರೊನಾ ಸೋಂಕು ದೃಢ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ