ಆ್ಯಪ್ನಗರ

ಆ.17 ಕ್ಕೆ ಭೂತಾನ್‌ನಲ್ಲಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ

ಧಾರವಾಡ : ವಿಶ್ವ ಶಾಂತಿ ಪ್ರತಿಷ್ಠಾನ, ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಸಮಿತಿ ಮತ್ತು ಮಂಗಳೂರಿನ ಎಂಇ ಟ್ರಸ್ಟ್‌ನ ಸಹಯೋಗದಲ್ಲಿ ಆ. 17ರಂದು ಭೂತಾನ್‌ ದೇಶದಲ್ಲಿ ಸಾಂಸ್ಕೃತಿಕ ಸೌರಭ ಮತ್ತು ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಲಾವಿಧ ಪ್ರಭು ಹಂಚಿನಾಳ ಹೇಳಿದರು.

Vijaya Karnataka 20 Jul 2019, 5:00 am
ಧಾರವಾಡ : ವಿಶ್ವ ಶಾಂತಿ ಪ್ರತಿಷ್ಠಾನ, ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಸಮಿತಿ ಮತ್ತು ಮಂಗಳೂರಿನ ಎಂಇ ಟ್ರಸ್ಟ್‌ನ ಸಹಯೋಗದಲ್ಲಿ ಆ. 17ರಂದು ಭೂತಾನ್‌ ದೇಶದಲ್ಲಿ ಸಾಂಸ್ಕೃತಿಕ ಸೌರಭ ಮತ್ತು ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಲಾವಿಧ ಪ್ರಭು ಹಂಚಿನಾಳ ಹೇಳಿದರು.
Vijaya Karnataka Web cultural solar program in bhutan
ಆ.17 ಕ್ಕೆ ಭೂತಾನ್‌ನಲ್ಲಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು 21ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭವಾಗಿದೆ. 2008 ರಿಂದ 15ಕ್ಕೂ ಹೆಚ್ಚು ದೇಶಗಳಲ್ಲಿ 20 ಸಮಾವೇಶಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಜಾಗತಿಕ ಮಟ್ಟದಲ್ಲಿ ಸಾಂಸ್ಕೃತಿಕ ಕಲಾ ಪ್ರದರ್ಶನದ ಮೂಲಕ ಶಾಂತಿ, ಸೌಹಾರ್ದ ಮತ್ತು ಮಿತೃತ್ವ ಭಾವನೆ ಮೂಡಿಸುವುದು ಈ ಸಮಾವೇಶದ ಉದ್ದೇಶವಾಗಿದೆ. ಈಗಾಗಲೇ ಥಾಯ್ಲಾಂಡ್‌, ಇಂಡೋನೇಶಿಯಾ, ಕುವೈತ್‌, ಶ್ರೀಲಂಕಾ, ಮಾಲ್ಡೀವ್ಸ್‌, ಕೀನ್ಯಾ ಸಿಂಗಾಪೂರ ಸೇರಿದಂತೆ ಇತರ ಕಡೆಗಳಲ್ಲಿ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಭಾರತದ ವಿವಿಧ ರಾಜ್ಯಗಳ 50ಕ್ಕೂ ಹೆಚ್ಚು ಕಲಾವಿದರು, ಸಾಹಿತಿಗಳು, ಮತ್ತು ಸಂಪನ್ಮೂಲ ವ್ಯಕ್ತಿಗಳು ಸಮಾವೇಶದಲ್ಲಿ ಭಾಗಿಯಾಗುವರು. ಭೂತಾನ್‌ ದೇಶದ ಕಲಾವಿದರು ತಮ್ಮ ಜಾನಪದ ನೃತ್ಯಪ್ರಕಾರಗಳನ್ನು ಸಹ ಪ್ರದರ್ಶಿಸಲಿದ್ದು, ಸಮಾವೇಶದಲ್ಲಿ ಭಾಗವಹಿಸಲು ಆಸಕ್ತ ಕಲಾವಿದರು ಮೊ.9886510087ಗೆ ಜು.21ರೊಳಗೆ ಸಂಪರ್ಕಿಸಿ ತಮ್ಮ ಹೆಸರು ನೊಂದಯಿಸಿಕೊಳ್ಳಬೇಕು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಹಾಸ್ಯ ಕಲಾವಿದ ಮಹಾದೇವ ಸತ್ತಿಗೇರಿ, ಕಿರಣ ಸಿದ್ದಾಪೂರ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ