ಆ್ಯಪ್ನಗರ

'ಮಹದಾಯಿ ವಿಚಾರದಲ್ಲಿ ಉ. ಕರ್ನಾಟಕಕ್ಕೆ ಅನ್ಯಾಯ ಆಗಲ್ಲ': ಸಚಿವ ಸಿಸಿ ಪಾಟೀಲ್ ಭರವಸೆ

‘ಮಹದಾಯಿ ಹೋರಾಟ ಪ್ರಾರಂಭ ಮಾಡಿದವರೇ ಬಿಜೆಪಿಯವರು. ಕೇಂದ್ರ ಸಚಿವರೊಂದಿಗೆ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಚರ್ಚೆ ಮಾಡಿದ್ದಾರೆ. ಕೇಂದ್ರದಿಂದ ಮಹದಾಯಿ ಹೋರಾಟಗಾರರಿಗೆ ಮತ್ತು ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗದು' - ಸಿಸಿ ಪಾಟೀಲ್

Vijaya Karnataka Web 22 Dec 2019, 6:28 pm
ಧಾರವಾಡ: ಕಳಸಾ-ಬಂಡೂರಿ ಹಾಗೂ ಮಹದಾಯಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗಲ್ಲ ಎಂದು ಸಚಿವ ಸಿ.ಸಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಪ್ರಕಾಶ್ ಜಾವೇಡಕರ್ ಕರ್ನಾಟಕಕ್ಕೆ ಸಿಹಿ ಸುದ್ದಿ ಕೊಡ್ತೀನಿ ಎಂದಿದ್ದಾರೆ, ಅವರ ಮಾತಿನಲ್ಲಿ ನಂಬಿಕೆ ಇದೆ ಎಂದು ಪಾಟೀಲ್ ಹೇಳಿದ್ದಾರೆ.
Vijaya Karnataka Web ಮಹದಾಯಿ ವಿಚಾರದಲ್ಲಿ ಉ. ಕರ್ನಾಟಕಕ್ಕೆ ಅನ್ಯಾಯ ಆಗಲ್ಲ: ಸಚಿವ ಸಿಸಿ ಪಾಟೀಲ್ ಭರವಸೆ


ಧಾರವಾಡ ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಹದಾಯಿ ಹೋರಾಟ ಪ್ರಾರಂಭ ಮಾಡಿದವರೇ ಬಿಜೆಪಿಯವರು. ಕೇಂದ್ರ ಸಚಿವರೊಂದಿಗೆ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಚರ್ಚೆ ಮಾಡಿದ್ದಾರೆ. ಕೇಂದ್ರದಿಂದ ಮಹದಾಯಿ ಹೋರಾಟಗಾರರಿಗೆ ಮತ್ತು ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗದು’ ಎಂದು ಪಾಟೀಲ್ ಸ್ಪಷ್ಟನೆ ನೀಡಿದರು.

ಇದೇ ವೇಳೆ, ಸಚಿವ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಸಿ ಪಾಟೀಲ್, ‘ಖಾತೆ ಹಂಚಿಕೆ ಮುಖ್ಯಮಂತ್ರಿ ಪರಮಾಧಿಕಾರ. ಈಗಾಗಲೇ ಹೆಚ್ಚುವರಿಯಾಗಿ ಒಂದೊಂದು ಖಾತೆ ಕೊಡಲಾಗಿದೆ. ನನಗೆ ಗಣಿ ಮತ್ತು ಭೂ ವಿಜ್ಞಾನ ಖಾತೆ ಜತೆಗೆ ಪರಿಸರ ಖಾತೆ ಕೊಟ್ಟಿದ್ದಾರೆ. ಇದೀಗ ಯಾರಿಗೆ ಯಾವ ಖಾತೆ ಕೊಡಬೇಕೆಂದು ಸಿಎಂ ನಿರ್ಧರಿಸುತ್ತಾರೆ’ ಎಂದು ಹೇಳಿದರು.

ಮಹದಾಯಿ ವಿಷಯದಲ್ಲಿ ರಾಜ್ಯಕ್ಕೆ ಮೋಸವಾಗಲು ಬಿಡುವುದಿಲ್ಲ: ಯಡಿಯೂರಪ್ಪ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ