ಆ್ಯಪ್ನಗರ

ಟಿಂಗರಿಕರ್‌ಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದ ಧಾರವಾಡ ಹೈಕೋರ್ಟ್

ಅರ್ಜಿದಾರರು ಕಳೆದ ಕೆಲ ತಿಂಗಳಿಂದ ತಲೆಮರೆಸಿಕೊಂಡಿದ್ದಾರೆ. ಹೀಗಾಗಿ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ ಎಂದು ನ್ಯಾಯಪೀಠದ ಗಮನಕ್ಕೆ ಸಿಬಿಐ ಪರ ವಕೀಲರು ತಂದರು. ಅರ್ಜಿದಾರರ ಈ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ಹಾಗಾದರೆ ಅರ್ಜಿದಾರರು (ಟಿಂಗರೀಕರ್‌) ಸಿಬಿಐ ಎದುರು ಒಂದು ವಾರದಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತು.

Vijaya Karnataka Web 1 Dec 2020, 7:59 am
ಧಾರವಾಡ: ಜಿಪಂ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣದ ಪೊಲೀಸ್‌ ತನಿಖಾಧಿಕಾರಿಯಾಗಿದ್ದ ಇನ್ಸ್‌ಪೆಕ್ಟರ್‌ ಚನ್ನಕೇಶವ ಟಿಂಗರಿಕರ್‌ಗೆ ಧಾರವಾಡ ಹೈಕೋರ್ಟ್‌ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
Vijaya Karnataka Web dharwad high court


2016ರಲ್ಲಿ ಯೋಗೀಶಗೌಡ ಕೊಲೆಯಾದಾಗ ಉಪನಗರ ಠಾಣೆ ಇನ್ಸ್‌ಪೆಕ್ಟರ್‌ ಆಗಿದ್ದ ಟಿಂಗರಿಕರ್‌ ಈ ಕೊಲೆ ಪ್ರಕರಣದ ತನಿಖಾಧಿಕಾರಿಯೂ ಆಗಿದ್ದರು. ಪ್ರಕರಣ ಸಿಬಿಐಗೆ ಹಸ್ತಾಂತರಗೊಂಡ ನಂತರ ಟಿಂಗರಿಕರ್‌ ಮೇಲೆ ಸಾಕ್ಷ್ಯನಾಶ ಆರೋಪ ಕೇಳಿ ಬಂದಿತ್ತು. ಹೀಗಾಗಿ ಸಿಬಿಐ ತಮ್ಮನ್ನು ಬಂಧಿಸಬಹುದು ಎಂದು ನಿರೀಕ್ಷಣಾ ಜಾಮೀನು ಕೋರಿ ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿತ್ತು.

ಸರ್ವರ್‌ ಸಮಸ್ಯೆಯಿಂದ ಸೊರಗಿದ ಬಾಪೂಜಿ ಸೇವಾ ಕೇಂದ್ರ; ಸೇವೆ ಸ್ಥಗಿತ, ಅಲೆದಾಟ ಖಚಿತ

ಟಿಂಗರಿಕರ್‌ ಮತ್ತೆ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ಮಾಡಿದ ಹೈಕೋರ್ಟ್‌ ಏಕ ಸದಸ್ಯ ಪೀಠ ವಾದ-ಪ್ರತಿವಾದ ಆಲಿಸಿತು. ಯೋಗೀಶಗೌಡ ಕೊಲೆ ಪ್ರಕರಣದ ತನಿಖೆಯನ್ನು ಅರ್ಜಿದಾರರು ಆರಂಭದಲ್ಲಿ ಮಾತ್ರ ಮಾಡಿದ್ದಾರೆ. ಹೀಗಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿತು. ನಂತರ ಅರ್ಜಿದಾರರು 1 ವಾರದಲ್ಲಿ ಸಿಬಿಐ ಎದುರು ವಿಚಾರಣೆಗೆ ಹಾಜರಾಗಬೇಕು. 2 ಲಕ್ಷ ರೂ. ವೈಯಕ್ತಿಕ ಶೂರಿಟಿ ಬಾಂಡ್‌ ನೀಡಬೇಕು, ಪಾಸ್‌ಪೋರ್ಟ್‌ ಒಪ್ಪಿಸಬೇಕು, ನ್ಯಾಯಾಲಯ ವ್ಯಾಪ್ತಿ ಬಿಟ್ಟು ಹೋಗುವಂತಿಲ್ಲ, ಯಾವುದೇ ಸಾಕ್ಷಿ ನಾಶ ಪಡಿಸಬಾರದು ಹಾಗೂ ಇತರ ಷರತ್ತುಗಳನ್ನು ವಿಧಿಸಿ ನ್ಯಾಯಪೀಠ ನಿರೀಕ್ಷಣಾ ಜಾಮೀನು ನೀಡಿದೆ.

ಸಚಿವ ಸುರೇಶ್ ಕುಮಾರ್ ಹೇಳಿಕೆ ಖಂಡಿಸಿ ಡಿ. 2ಕ್ಕೆ ಧಾರವಾಡದಲ್ಲಿ ಪ್ರತಿಭಟನೆ

ವಾರದಲ್ಲಿ ಸಿಬಿಐ ಎದುರು ಹಾಜರಾಗಿ ಜಾಮೀನು ಅರ್ಜಿ ವಿಚಾರಣೆ ವೇಳೆ ಸಿಬಿಐ ಪರ ವಕೀಲರು, ಅರ್ಜಿದಾರರು ಕಳೆದ ಕೆಲ ತಿಂಗಳಿಂದ ತಲೆಮರೆಸಿಕೊಂಡಿದ್ದಾರೆ. ಹೀಗಾಗಿ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಅರ್ಜಿದಾರರ ಈ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ಹಾಗಾದರೆ ಅರ್ಜಿದಾರರು (ಟಿಂಗರೀಕರ್‌) ಸಿಬಿಐ ಎದುರು ಒಂದು ವಾರದಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ