ಆ್ಯಪ್ನಗರ

ಟಿಂಗರೀಕರ್‌ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್

ಪೊಲೀಸ್‌ ತನಿಖಾಧಿಕಾರಿಯಾಗಿದ್ದ ಇನ್ಸ್‌ಪೆಕ್ಟರ್‌ ಚನ್ನಕೇಶವ ಟಿಂಗರೀಕರ್ ಅವರು ಯೋಗೀಶ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ‌ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೋಮವಾರ ಧಾರವಾಡ ಹೈಕೋರ್ಟ್‌ ಪೀಠದಲ್ಲಿ ನಡೆದಿದ್ದು, ಪ್ರಕರಣದ ಕುರಿತು ಇನ್ನೂ ಹೆಚ್ಚಿನ ವಿಚಾರಣೆಗೆ ಹಾಗೂ ಸಿಬಿಐ ಪರ ವಕೀಲರ ವಾದ ಕೇಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ ನ. 30ಕ್ಕೆ ವಿಚಾರಣೆ ಮುಂದೂಡಿದೆ.

Vijaya Karnataka Web 24 Nov 2020, 10:03 am
ಧಾರವಾಡ: ಯೋಗೀಶ ಗೌಡ ಹತ್ಯೆ ಪ್ರಕರಣದಲ್ಲಿ ಪೊಲೀಸ್‌ ತನಿಖಾಧಿಕಾರಿಯಾಗಿದ್ದ ಇನ್ಸ್‌ಪೆಕ್ಟರ್‌ ಚನ್ನಕೇಶವ ಟಿಂಗರೀಕರ್‌ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೋಮವಾರ ಧಾರವಾಡ ಹೈಕೋರ್ಟ್‌ ಪೀಠದಲ್ಲಿ ನಡೆಯಿತು.
Vijaya Karnataka Web dharwad high court


ಏಕಸದಸ್ಯ ಪೀಠದ ಎದುರು ವಿಚಾರಣೆ ಆರಂಭಗೊಳ್ಳುತ್ತಿದ್ದಂತೆ ಸಿಬಿಐ ಪರ ವಕೀಲರು ನಿರೀಕ್ಷಣಾ ಜಾಮೀನಿಗೆ ತಕರಾರು ಸಲ್ಲಿಸಿದರು. ಈ ವೇಳೆ ಟಿಂಗರೀಕರ್‌ ಪರ ವಕೀಲರು ವಾದ ಮಂಡಿಸಿ, ಯೋಗೀಶ ಗೌಡ ಹತ್ಯೆ ನಡೆದ ಬಳಿಕ ಅರ್ಜಿದಾರರು ದೂರು ದಾಖಲಿಸಿಕೊಂಡು ಕಾನೂನು ಅಡಿ ತನಿಖೆ ಮಾಡಿದ್ದಾರೆ. ಇನ್ನು ತನಿಖೆ ನಡೆಯುತ್ತಿರುವಾಗಲೇ ಉಪನಗರ ಠಾಣೆಯಿಂದ ಅರ್ಜಿದಾರರ ವರ್ಗಾವಣೆ ಆಯಿತು.

ಧಾರವಾಡದ 4 ಬಿಜೆಪಿ ಜಿಪಂ ಸದಸ್ಯರು ಅನರ್ಹ..! ಚುನಾವಣಾ ಆಯೋಗದ ಆದೇಶ ಎತ್ತಿಹಿಡಿದ ಕೋರ್ಟ್‌

ನಂತರ ಬಂದ ತನಿಖಾಧಿಕಾರಿ ತನಿಖೆ ಮುಂದುವರಿಸಿ ಅಂತಿಮವಾಗಿ ಅವರೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೀಗಾಗಿ ಇದರಲ್ಲಿ ಅವರ ಪಾತ್ರ ಏನೂ ಇಲ್ಲ. ಆದರೂ ಸಿಬಿಐ ಅಧಿಕಾರಿಗಳು ಅರ್ಜಿದಾರರನ್ನು (ಟಿಂಗರೀಕರ್‌) ಬಂಧಿಸಲು ಸರಕಾರದಿಂದ ಅನುಮತಿ ಪಡೆದಿದ್ದಾರೆ. ಹೀಗಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಠಾಣಾ ತನಿಖಾಧಿಕಾರಿಯಾಗಿದ್ದ ಚೆನ್ನಕೇಶವ ಟಿಂಗರಿಕರ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ಕುರಿತು ಇನ್ನೂ ಹೆಚ್ಚಿನ ವಿಚಾರಣೆಗೆ ಹಾಗೂ ಸಿಬಿಐ ಪರ ವಕೀಲರ ವಾದ ಕೇಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು ನ. 30ಕ್ಕೆ ವಿಚಾರಣೆ ಮುಂದೂಡಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ