ಆ್ಯಪ್ನಗರ

ಕಲಾ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ

ಧಾರವಾಡ : ಮಕ್ಕಳಲ್ಲಿನ ಸಾಂಸ್ಕೃತಿಕ ಮನಸ್ಸು ಜಾಗೃತಗೊಳಿಸುವ ದಿಸೆಯಲ್ಲಿ ಪ್ರತಿಭಾಕಾರಂಜಿ ಪೂರಕ ಎಂದು ಜಿಪಂ ಸದಸ್ಯ ಕರಿಯಪ್ಪ ಮಾದರ ಹೇಳಿದರು.

Vijaya Karnataka 9 Sep 2019, 5:00 am
ಧಾರವಾಡ : ಮಕ್ಕಳಲ್ಲಿನ ಸಾಂಸ್ಕೃತಿಕ ಮನಸ್ಸು ಜಾಗೃತಗೊಳಿಸುವ ದಿಸೆಯಲ್ಲಿ ಪ್ರತಿಭಾಕಾರಂಜಿ ಪೂರಕ ಎಂದು ಜಿಪಂ ಸದಸ್ಯ ಕರಿಯಪ್ಪ ಮಾದರ ಹೇಳಿದರು.
Vijaya Karnataka Web DRW-08RANGA06
ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಸರಕಾರಿ ಶಾಲೆಯಲ್ಲಿ ನಡೆದ ನರೇಂದ್ರ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲಾ ಉತ್ಸವ ಕಾರ್ಯಕ್ರಮದಲ್ಲಿ ಶಿಕ್ಷ ಕರನ್ನು ಸನ್ಮಾನಿಸಲಾಯಿತು.


ತಾಲೂಕಿನ ನರೇಂದ್ರ ಗ್ರಾಮದ ಸರಕಾರಿ ಶಾಲೆಯಲ್ಲಿ ನಡೆದ ನರೇಂದ್ರ ಕ್ಲಸ್ಟರ್‌ ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲಾ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳು ಪಠ್ಯಕ್ರಮದಲ್ಲಿ ಸತತ ತಲ್ಲೀನರಾಗುವುದು ಎಷ್ಟು ಮುಖ್ಯವೋ ಮಾನಸಿಕವಾಗಿ ಸದೃಢತೆ ಹೊಂದುವುದು ಸಹ ಮುಖ್ಯ. ಈ ನಿಟ್ಟಿನಲ್ಲಿ ಶಿಕ್ಷ ಣ ಇಲಾಖೆ ಆಯೋಜಿಸುವ ಪ್ರತಿಭಾಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದರು.

ಮಳೆಪ್ಪಜ್ಜನ ಮಠದ ಶ್ರೀ ಸಂಗಮೇಶ ದೇವರು ಸಾನ್ನಿಧ್ಯ ವಹಿಸಿದ್ದರು. ಎಸ್‌ಡಿಎಂಸಿ ಅಧ್ಯಕ್ಷ ಈಶ್ವರ ಆಯಗಾರ ಅಧ್ಯಕ್ಷ ತೆ ವಹಿಸಿದ್ದರು.

ಗ್ರಾಪಂ ಅಧ್ಯಕ್ಷ ಈರಪ್ಪ ಗಂಟಿ, ಎಪಿಎಂಸಿ ಸದಸ್ಯ ಚೆನ್ನವೀರಗೌಡ ಪಾಟೀಲ, ಸೇವಾದಳದ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ತಿರ್ಲಾಪೂರ, ಕನ್ನಡ ಗಂಡು ಮಕ್ಕಳ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಅಶೋಕ ಕಲ್ಲಪ್ಪ ಗಬ್ಬೂರ, ಗ್ರಾಪಂ ಸದಸ್ಯರು, ಕ್ಲಸ್ಟರ್‌ಮಟ್ಟದ ಮುಖ್ಯೋಪಾಧ್ಯಾಯರು, ಶಿಕ್ಷ ಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಕ್ಷ ಕ ಜಿ.ಎಂ.ಗುಂಜಾಳ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ