ಆ್ಯಪ್ನಗರ

ಸೋಂಕಿತರ ಸ್ಥಳಾಂತರಕ್ಕೆ ಒತ್ತು

ಧಾರವಾಡ: ಕೋವಿಡ್‌ ಸೋಂಕಿತರ ಸ್ಥಳಾಂತರದ ಕಾರ್ಯನಿರ್ವಹಣೆಗೆ ಜಿಲ್ಲೆಯಲ್ಲಿಹನ್ನೊಂದು ಆಂಬ್ಯುಲೆನ್ಸ್‌ಗಳನ್ನು ಮೀಸಲಿಡಲಾಗಿದ್ದು, ಪ್ರತಿ ವಾಹನಕ್ಕೆ ಪ್ರತ್ಯೇಕವಾಗಿ ಓರ್ವ ನೋಡಲ್‌ ಅಧಿಕಾರಿಯನ್ನು ನೇಮಿಸಿ ಕರ್ತವ್ಯ ನಿರ್ವಹಿಸಬೇಕು. ಅಗತ್ಯಬಿದ್ದರೆ ಖಾಸಗಿ ಟ್ಯಾಕ್ಸಿಗಳನ್ನೂ ಕೂಡ ಬಾಡಿಗೆಗೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಹೇಳಿದರು.

Vijaya Karnataka 16 Jul 2020, 5:00 am
ಧಾರವಾಡ: ಕೋವಿಡ್‌ ಸೋಂಕಿತರ ಸ್ಥಳಾಂತರದ ಕಾರ್ಯನಿರ್ವಹಣೆಗೆ ಜಿಲ್ಲೆಯಲ್ಲಿಹನ್ನೊಂದು ಆಂಬ್ಯುಲೆನ್ಸ್‌ಗಳನ್ನು ಮೀಸಲಿಡಲಾಗಿದ್ದು, ಪ್ರತಿ ವಾಹನಕ್ಕೆ ಪ್ರತ್ಯೇಕವಾಗಿ ಓರ್ವ ನೋಡಲ್‌ ಅಧಿಕಾರಿಯನ್ನು ನೇಮಿಸಿ ಕರ್ತವ್ಯ ನಿರ್ವಹಿಸಬೇಕು. ಅಗತ್ಯಬಿದ್ದರೆ ಖಾಸಗಿ ಟ್ಯಾಕ್ಸಿಗಳನ್ನೂ ಕೂಡ ಬಾಡಿಗೆಗೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಹೇಳಿದರು.
Vijaya Karnataka Web emphasis is placed on the displacement of the infected
ಸೋಂಕಿತರ ಸ್ಥಳಾಂತರಕ್ಕೆ ಒತ್ತು


ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಬುಧವಾರ ಜಿಲ್ಲಾಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಸೋಂಕಿತರ ಸ್ಥಳಾಂತರಕ್ಕೆ ಹೆಚ್ಚು ಒತ್ತು ನೀಡಬೇಕಾಗಿದೆ. ಅದಕ್ಕಾಗಿ ರಚಿಸಿರುವ ತಂಡದೊಂದಿಗೆ ಜಿಲ್ಲೆಯ ಎಲ್ಲಾತಹಸೀಲ್ದಾರರು, ಪ್ರಾದೇಶಿಕ ಸಾರಿಗೆ ಇಲಾಖೆ, ವಾಕರಸಾಸಂ ಅಧಿಕಾರಿಗಳೂ ಕಾರ್ಯನಿರ್ವಹಿಸಬೇಕು. ಪ್ರತಿಯೊಂದು ಆಂಬ್ಯುಲೆನ್ಸ್‌ ವಾಹನಕ್ಕೆ ಓರ್ವ ನೋಡಲ್‌ ಅಧಿಕಾರಿಯನ್ನು ನೇಮಿಸಿ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸುವುದು ಹಾಗೂ ಗುಣಮುಖರಾದವರನ್ನು ಮನೆಗೆ ಮರಳಿ ಕಳುಹಿಸುವ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿಚಿಕಿತ್ಸೆ ಪಡೆಯುತ್ತಿರುವ ಲಕ್ಷಣರಹಿತ ಸೋಂಕಿತರಿಗೆ ದಿನಪತ್ರಿಕೆಗಳು,ಒಳಾಂಗಣ ಕ್ರೀಡಾ ಸಾಮಗ್ರಿಗಳನ್ನು ಪೂರೈಸಿ ಅವರನ್ನು ಉತ್ಸಾಹಶೀಲರನ್ನಾಗಿಡಬೇಕು ಇದಕ್ಕಾಗಿ ಪ್ರತ್ಯೇಕ ಕಾರ್ಯಪಡೆಗಳನ್ನು ರಚಿಸಿ ಕಾರ್ಯ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ಇಬ್ರಾಹಿಂ ಮೈಗೂರ, ಡಿಮ್ಹಾನ್ಸ್‌ ಮುಖ್ಯ ಆಡಳಿತಾಧಿಕಾರಿ ಷಣ್ಮುಖ, ಉಪವಿಭಾಗಾಧಿಕಾರಿ ಮಹ್ಮದ್‌ ಜುಬೇರ್‌, ಭೂ ದಾಖಲೆಗಳ ಉಪನಿರ್ದೇಶಕಿ ನಜ್ಮಾ ಪೀರಜಾದೆ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಶವಂತ್‌ ಮದೀನಕರ್‌, ಡಾ. ಲಕ್ಷಿತ್ರ್ಮೕಕಾಂತ ಲೋಕರೆ, ಇತರರು ಸಭೆಯಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ