ಆ್ಯಪ್ನಗರ

ರೈತ ನೋಂದಣಿಗೆ ಅವಧಿ ವಿಸ್ತರಣೆ

ಧಾರವಾಡ : ಧಾರವಾಡ, ಹುಬ್ಬಳ್ಳಿ, ಕುಂದಗೋಳ, ಅಣ್ಣಿಗೇರಿ ಎಪಿಎಂಸಿಗಳ ಮುಖ್ಯ ಮಾರುಕಟ್ಟೆ ಪ್ರಾಂಗಣ ಹಾಗೂ ನವಲಗುಂದ ಉಪಮಾರುಕಟ್ಟೆ ಪ್ರಾಂಗಣದಲ್ಲಿ ತೆರೆದ ಖರೀದಿ ಕೇಂದ್ರಗಳಲ್ಲಿ ಜೂ.17ರವರೆಗೆ ರೈತ ನೋಂದಣಿಗೆ ಕಾಲಾವಧಿ

Vijaya Karnataka 8 Jun 2019, 5:00 am
ಧಾರವಾಡ : ಧಾರವಾಡ, ಹುಬ್ಬಳ್ಳಿ, ಕುಂದಗೋಳ, ಅಣ್ಣಿಗೇರಿ ಎಪಿಎಂಸಿಗಳ ಮುಖ್ಯ ಮಾರುಕಟ್ಟೆ ಪ್ರಾಂಗಣ ಹಾಗೂ ನವಲಗುಂದ ಉಪಮಾರುಕಟ್ಟೆ ಪ್ರಾಂಗಣದಲ್ಲಿ ತೆರೆದ ಖರೀದಿ ಕೇಂದ್ರಗಳಲ್ಲಿ ಜೂ.17ರವರೆಗೆ ರೈತ ನೋಂದಣಿಗೆ ಕಾಲಾವಧಿ ಹಾಗೂ ನೋಂದಣಿಯಾದ ರೈತರಿಂದ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿಸುವ ಕಾಲಾವಧಿ ಜೂ.27ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.
Vijaya Karnataka Web expansion of extension to farmer registration
ರೈತ ನೋಂದಣಿಗೆ ಅವಧಿ ವಿಸ್ತರಣೆ


ಈ ಹಿಂದೆ ಸರಕಾರ ಮೇ 31 ಆದೇಶದಲ್ಲಿ 2018-19 ನೇ ಸಾಲಿನಲ್ಲಿ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ 4,620ರೂ.ಗಳಂತೆ ಜಿಲ್ಲೆಯ ರೈತರಿಂದ ಮಾತ್ರ ಖರೀದಿಸಲು ಅನುಮತಿ ನೀಡಲಾಗಿತ್ತು. ಸದ್ಯ ಕಡಲೆಕಾಳು ಬೆಳೆದ ಜಿಲ್ಲೆಯ ರೈತರು ಆದಷ್ಟು ಬೇಗ ಅಗತ್ಯ ದಾಖಲಾತಿಗಳೊಂದಿಗೆ ಈ ಮೇಲಿನ ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಟಾಸ್ಕ್‌ಪೋರ್ಸ್‌ ಸಮಿತಿಯ ಅಧ್ಯಕ್ಷೆ, ಜಿಲ್ಲಾಧಿಕಾರಿ ದೀಪಾ ಎಂ.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ