ಆ್ಯಪ್ನಗರ

ಡಿ.5 ಕ್ಕೆ ಡಿಸಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ

ಧಾರವಾಡ: ನರದಲ್ಲಿನ ಎನ್‌.ಎ. ಮುತ್ತಣ್ಣ ಪೊಲೀಸ್‌ ಮಕ್ಕಳ ವಸತಿ ಶಾಲೆಯ ಶಿಕ್ಷಕರ ವೇತನ ಬಿಡುಗಡೆ ಮಾಡುವಂತೆ ಹಾಗೂ ಖಾಸಗಿ ಶಾಲೆಗಳ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಡಿ. 5 ರಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

Vijaya Karnataka 22 Nov 2020, 5:00 am
ಧಾರವಾಡ: ನರದಲ್ಲಿನ ಎನ್‌.ಎ. ಮುತ್ತಣ್ಣ ಪೊಲೀಸ್‌ ಮಕ್ಕಳ ವಸತಿ ಶಾಲೆಯ ಶಿಕ್ಷಕರ ವೇತನ ಬಿಡುಗಡೆ ಮಾಡುವಂತೆ ಹಾಗೂ ಖಾಸಗಿ ಶಾಲೆಗಳ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಡಿ. 5 ರಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
Vijaya Karnataka Web basavaraj horatti


ನಗರದಲ್ಲಿಶನಿವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಧಾರವಾಡದಲ್ಲಿನ ಪೊಲೀಸ್‌ ವಸತಿ ಶಾಲೆಯ ಸಮಸ್ಯೆಗಳನ್ನು ಸರಿಪಡಿಸಲು ಹಲವು ಬಾರಿ ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗೆ ಮನವಿ ಮಾಡದರೂ ಸ್ಪಂದಿಸುತ್ತಿಲ್ಲ. ಸರ್ಕಾರ ಸ್ಪಂದಿಸಿಲ್ಲ. 2020-21ನೇ ಸಾಲಿನಲ್ಲಿ125 ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ್ದರ ಪೈಕಿ 80 ವಿದ್ಯಾರ್ಥಿಗಳು ಪ್ರವೇಶ ಪಡೆದು ಆನ್‌ಲೈನ್‌ ತರಗತಿಗಳಿಗೆ ಹಾಜರಾಗಿದ್ದಾರೆ. ಆದರೆ ಕಳೆದ 9 ತಿಂಗಳಿಂದ ಶಾಲೆಯ ಶಿಕ್ಷಕರಿಗೆ ವೇತನವೇ ನೀಡಿಲ್ಲಎಂದು ದೂರಿದರು.

ಈ ಶಾಲೆ ಉಳಿಸಲು ಸಿಎಂಗೆ ಭೇಟಿಯಾಗಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು ಹಾಗೂ ಶಾಲೆಯ ಅನುದಾನ ಬಿಡುಗಡೆ ಮಾಡಲು ಕೋರಿದರೂ ಈವರೆಗೂ ಸ್ಪಂದನೆ ಸಿಕ್ಕಿಲ್ಲ. ಈ ಕಾರಣದಿಂದ ಬೇಸತ್ತು ಡಿ. 5ರಂದ ಡಿಸಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಹೊಸ ಪಿಂಚಣಿ ರದ್ದುಗೊಳಿಸಿ
ಶಿಕ್ಷರ ಕಾಲ್ಪನಿಕ ವೇತನಕ್ಕಾಗಿ ನಮ್ಮ ನೇತೃತ್ವದಲ್ಲಿಸಮಗ್ರವಾಗಿ ಪರಿಶೀಲಿಸಿ ಸಿದ್ದಪಡಿಸಿ ಸರಕಾರಕ್ಕೆ ನೀಡಿರುವ ವರದಿಯನ್ನು ಜಾರಿಗೊಳಿಸಬೇಕು. ಹೊಸ ಪಿಂಚಣಿ ರದ್ದುಗೊಳಿಸಿ, ಹಳೆಯ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಅನುದಾನಿತ ಹಾಗೂ ಸರಕಾರಿ ಶಾಲೆಗಳಲ್ಲಿತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ಕೊಡಬೇಕು. 1995ರ ನಂತರ ಆರಂಭವಾದ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ನೌಕರರಿಗೂ ವಿಸ್ತರಿಸಬೇಕು. ಶಿಕ್ಷಕರ ಮತ್ತು ಮಕ್ಕಳ ಅನುಪಾತವನ್ನು ಪ್ರೌಢಶಾಲೆಗಳಲ್ಲಿ1:50ಕ್ಕೆ ಜಾರಿ ಮಾಡಬೇಕು. ಈ ಎಲ್ಲಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ನೇತೃತ್ವದಲ್ಲಿಹೋರಾಟಕ್ಕೆ ಅಣಿಯಾಗಿದ್ದೇವೆ ಎಂದರು.

ಮುಂದಿನ ಅಧಿವೇಶನದಲ್ಲಿಈ ಬಗ್ಗೆ ಗಮನ ಸೆಳೆಯುತ್ತೇನೆ. ಈ ಬಗ್ಗೆ ಶಿಕ್ಷಣ ಸಚಿವರ ಗಮನಕ್ಕೆ ತಂದಿದ್ದರೂ ಈ ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದು ಈಡೇರಿಸುವ ಶಕ್ತಿ ಶಿಕ್ಷಣ ಸಚಿವರಿಗಿಲ್ಲಎಂದು ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಹೇಳಿದರು.

ಮಾಜಿ ಶಾಸಕ ಎನ್‌.ಎಚ್‌. ಕೋನರೆಡ್ಡಿ, ಜಿ.ಆರ್‌. ಭಟ್‌, ಶಾಮ ಮಲ್ಲನಗೌಡ್ರ, ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ