ಆ್ಯಪ್ನಗರ

ಮಾಜಿ ಸಚಿವ ವಿನಯ ಕುಲಕರ್ಣಿಗೆ ಜಾಮೀನು ಕೋರಿ ಮತ್ತೆ ಅರ್ಜಿ

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್​ ಆದೇಶಿಸಿದ್ದು, ಡಿ.7ರವರೆಗೆ ನ್ಯಾಯಾಂಗ ಬಂಧನದಲ್ಲಿರಲು ಸೂಚಿಸಿದೆ. ಈ ಮಧ್ಯೆ ವಿನಯ ಕುಲಕರ್ಣಿ ಪರ ವಕೀಲರು ಗುರುವಾರ ಧಾರವಾಡದ ಮೂರನೇ ಹೆಚ್ಚುವರಿ ಜಿಲ್ಲಾ ಹಾಗೂ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಮತ್ತೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

Vijaya Karnataka Web 27 Nov 2020, 8:14 am
ಧಾರವಾಡ: ಜಿಪಂ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಪರ ವಕೀಲರು ಗುರುವಾರ ಧಾರವಾಡದ ಮೂರನೇ ಹೆಚ್ಚುವರಿ ಜಿಲ್ಲಾ ಹಾಗೂ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಮತ್ತೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
Vijaya Karnataka Web vinay kulkarni
Vinay Kulkarn


ಸ್ನೇಹಿತನ ಪತ್ನಿಯ ಜೊತೆ ಚೆಲ್ಲಾಟವಾಡಿದ ಕಿರಾತಕ ಆಕೆಯ ಗಂಡನನ್ನೇ ಮುಗಿಸಿ ಬಿಟ್ಟ..!

ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಲವು ಕಾರಣಗಳಿಂದ ವಾಪಸ್‌ ಪಡೆಯಲಾಗಿತ್ತು. ಇದೀಗ ಮತ್ತೆ ವಕೀಲರಾದ ಬಾಹುಬಲಿ ಅವರ ಮೂಲಕ ಮತ್ತೊಂದು ಹೊಸ ಜಾಮೀನು ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿ ಯಾವಾಗ ವಿಚಾರಣೆಗೆ ಬರುತ್ತದೆ. ಅದಕ್ಕೆ ಸಿಬಿಐ ಅಧಿಕಾರಿಗಳು ಯಾವ ರೀತಿಯ ತಕರಾರು ಅರ್ಜಿ ಸಲ್ಲಿಸುತ್ತಾರೆ ಎಂಬುದರ ಮೇಲೆ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯ ಭವಿಷ್ಯ ನಿರ್ಧಾರವಾಗಲಿದೆ.

ಟಿಂಗರೀಕರ್‌ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್

4 ವರ್ಷಗಳ ಹಿಂದೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಧಾರವಾಡ ಜಿಲ್ಲೆ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ.9ರಂದು ಜಿಲ್ಲಾ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ನ್ಯಾಯಾಂಗ ಬಂಧನದ ಮೊದಲ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಧಾರವಾಡ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿತು. ವಿಚಾರಣೆ ನಂತರ ವಿನಯ್ ಕುಲಕರ್ಣಿಗೆ ಮತ್ತೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಡಿ.7ರವರೆಗೆ ನ್ಯಾಯಾಂಗ ಬಂಧನದಲ್ಲಿರಲು ಸೂಚಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ