ಆ್ಯಪ್ನಗರ

ಕೃಷಿ ವಿವಿ ಶಿಕ್ಷಕರ ಬೇಡಿಕೆ ಈಡೇರಿಕೆಗೆ ಕೂಡಲೇ ಕ್ರಮ: ರಾಜ್ಯಪಾಲ ಗೆಹ್ಲೊಟ್‌

10 ರಿಂದ 12 ದಿನಗಳೊಳಗೆ ಕೃಷಿ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ, ಶಿಕ್ಷಕರ ಕಲ್ಯಾಣ ಸಂಘದ ಪ್ರತಿನಿಧಿಗಳು,ರಾಜ್ಯ ಸರಕಾರ ಹಾಗೂ ಯುಜಿಸಿಯ ಅಧಿಕಾರಿಗಳ ಜಂಟಿ ಸಭೆ ಆಯೋಜಿಸಿ ,ಕಾನೂನು ಪರಿಧಿಯೊಳಗೆ ನಿಶ್ಚಿತವಾಗಿ ಈ ನಿಟ್ಟಿನಲ್ಲಿ ಪರಿಹಾರ ಕಂಡುಕೊಳ್ಳಲಾಗುವುದು.

Vijaya Karnataka Web 18 Oct 2021, 4:57 pm
ಧಾರವಾಡ: ಕೃಷಿ ವಿಶ್ವವಿದ್ಯಾಲಯದ ಶಿಕ್ಷಕರ ಕಲ್ಯಾಣ ಸಂಘದ ಬೇಡಿಕೆಗಳನ್ನು ಪರಿಗಣಿಸಿ ,ಕಾನೂನು ಚೌಕಟ್ಟಿನಲ್ಲಿ ಅವುಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು.10 ರಿಂದ 12 ದಿನಗಳ ಅವಧಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಈ ಕುರಿತು ಪರಿಹಾರಕ್ಕೆ ಸೂತ್ರ ಒದಗಿಸಲಾಗುವುದು ಎಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹೇಳಿದರು.
Vijaya Karnataka Web ಥಾವರ್‌ಚಂದ್‌ ಗೆಹ್ಲೋಟ್
ಥಾವರ್‌ಚಂದ್‌ ಗೆಹ್ಲೋಟ್


ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆಡಳಿತ ಭವನದ ಎದುರು ಶಿಕ್ಷಕರ ಕಲ್ಯಾಣ ಸಂಘ ನಡೆಸುತ್ತಿರುವ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿ, ಧರಣಿ ನಿರತರ ಬೇಡಿಕೆಗಳನ್ನು ಸಹಾನುಭೂತಿಯಿಂದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಆಲಿಸಿದರು.

ಧಾರವಾಡದ ಟೀಚರ್‌ ವಿಡಿಯೋ ಈಗ ಸಖತ್‌ ವೈರಲ್‌..! ಇವರ ಪಾಠಕ್ಕೆ ವಿದ್ಯಾರ್ಥಿಗಳು ಫಿದಾ

10 ರಿಂದ 12 ದಿನಗಳೊಳಗೆ ಕೃಷಿ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ, ಶಿಕ್ಷಕರ ಕಲ್ಯಾಣ ಸಂಘದ ಪ್ರತಿನಿಧಿಗಳು,ರಾಜ್ಯ ಸರಕಾರ ಹಾಗೂ ಯುಜಿಸಿಯ ಅಧಿಕಾರಿಗಳ ಜಂಟಿ ಸಭೆ ಆಯೋಜಿಸಿ ,ಕಾನೂನು ಪರಿಧಿಯೊಳಗೆ ನಿಶ್ಚಿತವಾಗಿ ಈ ನಿಟ್ಟಿನಲ್ಲಿ ಪರಿಹಾರ ಕಂಡುಕೊಳ್ಳಲಾಗುವುದು, ಕಳೆದ ತಿಂಗಳು ವಿ.ವಿ.ಗೆ ಭೇಟಿ ನೀಡಿದ ಸಂದರ್ಭದಲ್ಲಿಯೇ ಈ ಕುರಿತು ಮಾಹಿತಿ ನೀಡಿದ್ದಾರೆ.

ಈ ಹೊತ್ತಿಗೆ ಸಮಸ್ಯೆಗೆ ಪರಿಹಾರ ದೊರೆತಿರುತ್ತಿತ್ತು. ಸಂಘವು ತಕ್ಷಣ ಮುಷ್ಕರ ಕೈ ಬಿಡಬೇಕು, ಶಿಕ್ಷಕರ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದನೆ ಸಿಗಲಿದೆ ಎಂದರು.

ಬೆಳಗಾವಿ ವಿಭಾಗದ ನೌಕರರಿಗಿಲ್ಲ ಬಡ್ತಿ ಭಾಗ್ಯ: ಸರಕಾರ ಒಪ್ಪಿಗೆ ಕೊಟ್ಟರೂ ನಡೆಯದ ಪ್ರಕ್ರಿಯೆ

ಬಡ್ತಿ,ಜೇಷ್ಠತಾ ಪಟ್ಟಿ, ಪಿಂಚಣಿ, ಇತರೆ ವಿಶ್ವವಿದ್ಯಾಲಯಗಳಲ್ಲಿ ಸಲ್ಲಿಸಿದ ಸೇವೆ ಪರಿಗಣನೆ, ನಿವೃತ್ತಿ ವಯೋಮಿತಿ ಏರಿಕೆ, ಜ್ಯೋತಿ ಸಂಜೀವಿನಿ ಯೋಜನೆ ವ್ಯಾಪ್ತಿಗೆ ಒಳಪಡಿಸುವುದು ಸೇರಿದಂತೆ ಹಲವು ಬೇಡಿಕೆಗಳ ಕುರಿತು ಶಿಕ್ಷಕರ ಕಲ್ಯಾಣ ಸಂಘದ ಡಾ.ಐ.ಕೆ. ಕಾಳಪ್ಪನವರ, ಡಾ.ಮಹಾಂತೇಶ ನಾಯಕ, ಡಾ.ರಾಮನಗೌಡ ಪಾಟೀಲ, ಡಾ.ಆರ್.ಎಚ್. ಪಾಟೀಲ ಮೊದಲಾದವರು ರಾಜ್ಯಪಾಲರಿಗೆ ಮನವಿ ಮಾಡಿದರು.

ರಾಜ್ಯಪಾಲರ ಭೇಟಿ ಮತ್ತು ಬೇಡಿಕೆಗಳ ಈಡೇರಿಕೆ ಕುರಿತ ಭರವಸೆಯನ್ನು ಗೌರವಿಸಿ ಶಿಕ್ಷಕರ ಕಲ್ಯಾಣ ಸಂಘದ ಸದಸ್ಯರು ಕಳೆದ ಅಕ್ಟೋಬರ್ 4 ರಿಂದ ನಡೆಸುತ್ತಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ