ಆ್ಯಪ್ನಗರ

ಬಿಎಸ್‌ವೈ ಡೈರಿ ಪ್ರಕರಣ ಲೋಕಪಾಲ್‌ಗೆ ಒಪ್ಪಿಸಿ: ಸಿದ್ದು

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ ಯಡಿಯೂಪ್ಪ ಡೈರಿ ಪ್ರಕರಣವನ್ನು ಲೋಕಪಾಲ್‌ಗೆ ನೀಡಿ ತಪ್ಪು ಮಾಡಿಲ್ಲ ಎಂದ ಮೇಲೆ ನಿಮಗೇಕೆ ಹೆದರಿಕೆ...

Vijaya Karnataka 24 Mar 2019, 3:15 pm
ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂಪ್ಪ ಡೈರಿ ಪ್ರಕರಣವನ್ನು ಲೋಕಪಾಲ್‌ಗೆ ನೀಡಿ. ತಪ್ಪು ಮಾಡಿಲ್ಲ ಎಂದ ಮೇಲೆ ನಿಮಗೇಕೆ ಹೆದರಿಕೆ. ಕಳ್ಳ ಮನಸ್ಸು ಇರೋದರಿಂದಲೇ ಸಂಬಂಧವಿಲ್ಲ ಎಂಬ ಹೇಳಿಕೆಯನ್ನು ಬಿಜೆಪಿಯವರು ನೀಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
Vijaya Karnataka Web bsy


ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಯಾವುದೇ ಪಕ್ಷದಲ್ಲಿ ಟಿಕೆಟ್‌ ಹಂಚಿಕೆಯಾದ ನಂತರದಲ್ಲಿ ಆಯಾ ಸ್ಥಳೀಯ ನಾಯಕರಲ್ಲಿ ಅಸಮಾಧಾನ ಸಹಜ. ಅದರಂತೆ ತುಮಕೂರು ಸಂಸದ ಮುದ್ದುಹನುಮೇಗೌಡ ಸಹ ಅಸಮಾಧಾನಗೊಂಡಿದ್ದಾರೆ. ಈ ಬಗ್ಗೆ ಅವರ ಜತೆ ಮಾತುಕತೆ ನಡೆಸಿ ಬಗೆಹರಿಸಲಾಗುವುದು'' ಎಂದು ತಿಳಿಸಿದರು.

ತುಮಕೂರು ಸಂಸದ ಮುದ್ದುಹನುಮೇಗೌಡರ ಜತೆ ಚರ್ಚಿಸಿ ಅಸಮಾಧಾನ ಶಮನಗೊಳಿಸಲು ಪ್ರಯತ್ನಿಸುತ್ತೇವೆ. ಸದ್ಯ ಮೈತ್ರಿ ಸರಕಾರ ಇರುವ ಕಾರಣ ಈ ಗೊಂದಲ ಉಂಟಾಗಿದೆ.
-ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ (ಹುಬ್ಬಳ್ಳಿಯಲ್ಲಿ ಹೇಳಿದ್ದು)

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ