ಆ್ಯಪ್ನಗರ

ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

ಧಾರವಾಡ: ನಗರದ ವಿದ್ಯಾರಣ್ಯ ಪದವಿ ಪೂರ್ವ ಕಾಲೇಜಿನ 2019-20ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳ ಸತ್ಕಾರ ಸಮಾರಂಭ ಜರುಗಿತು. ಬಹುಮಾನ ವಿತರಿಸಿ ಮಾತನಾಡಿದ ಅತಿಥಿ ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ, ಭಾರತದಲ್ಲಿಪ್ರತಿಭೆಗಳಿಗೆ ಕೊರತೆ ಇಲ್ಲ. ಸರಿಯಾದ ಪ್ರೋತ್ಸಾಹ,

Vijaya Karnataka 10 Dec 2019, 5:00 am
ಧಾರವಾಡ: ನಗರದ ವಿದ್ಯಾರಣ್ಯ ಪದವಿ ಪೂರ್ವ ಕಾಲೇಜಿನ 2019-20ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳ ಸತ್ಕಾರ ಸಮಾರಂಭ ಜರುಗಿತು.
Vijaya Karnataka Web identify and encourage talent
ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

ಬಹುಮಾನ ವಿತರಿಸಿ ಮಾತನಾಡಿದ ಅತಿಥಿ ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ, ಭಾರತದಲ್ಲಿಪ್ರತಿಭೆಗಳಿಗೆ ಕೊರತೆ ಇಲ್ಲ. ಸರಿಯಾದ ಪ್ರೋತ್ಸಾಹ, ಅವಕಾಶ ಹಾಗೂ ಸೌಲಭ್ಯಗಳು ಸಿಗದೇ ಇರುವುದರಿಂದ ಪ್ರತಿಭಾ ಪಲಾಯಣವಾಗುತ್ತಿದೆ. ಪ್ರತಿಭೆ ಗುರುತಿಸಿ ಅವರನ್ನು ಪ್ರೋತ್ಸಾಹಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಗವರ್ನಿಂಗ್‌ ಕೌನ್ಸಿಲ್‌ ಅಧ್ಯಕ್ಷ ಎಸ್‌.ಎಂ.ಛಬ್ಬಿ ಮಾತನಾಡಿ, ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯ ಇರುವ ಎಲ್ಲಸೌಲಭ್ಯ ಸಂಸ್ಥೆಯಿಂದ ಒದಗಿಸಲಾಗುವುದು. ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಉತ್ತಮ ವ್ಯಾಸಂಗ ಮಾಡಬೇಕು ಎಂದರು.

ಡಾ.ಶರಣಮ್ಮ ಎ. ಗೊರೇಬಾಳ ಸ್ವಾಗತಿಸಿದರು. ಉಪನ್ಯಾಸಕ ಎಂ.ಎಂ.ಕುರುಬರ, ಶ್ವೇತಾ ನಾಯಕ ಪರಿಚಯಿಸಿದರು. ಉಪನ್ಯಾಸಕಿ ಸವಿತಾ ಕುಸುಗಲ್‌ ನಿರೂಪಿಸಿದರು. ಉಪನ್ಯಾಸಕ ಎಚ್‌. ಸತೀಶ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ