ಆ್ಯಪ್ನಗರ

ಉ.ಕ.ದಲ್ಲಿ ಚೀನಾ ಮಾದರಿ ಕೈಗಾರಿಕೆ ಸ್ಥಾಪನೆ: ಸಚಿವ ಕೆ.ಜೆ. ಜಾರ್ಜ್

ನಮಗೆ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎನ್ನುವ ತಾರತಮ್ಯವಿಲ್ಲ. ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಒತ್ತು ಕೊಡುತ್ತಿದ್ದೇವೆ ಎಂದು ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

Vijaya Karnataka Web 17 Jul 2018, 6:19 pm
ಧಾರವಾಡ: ನಮಗೆ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎನ್ನುವ ತಾರತಮ್ಯವಿಲ್ಲ. ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಒತ್ತು ಕೊಡುತ್ತಿದ್ದೇವೆ ಎಂದು ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.
Vijaya Karnataka Web K J George


ರಾಯಪೂರದ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಹಿಂದುಳಿದಿರುವ ಪ್ರದೇಶದಲ್ಲಿ ಚೀನಾ ಮಾದರಿಯಲ್ಲಿ ಕೈಗಾರಿಕೆ ಅಭಿವೃದ್ಧಿ ಪಡಿಸಲಾಗುವುದು. ರಾಜ್ಯದಲ್ಲಿ ಕೈಗಾರಿಕಾ ಪ್ರದೇಶವನ್ನು ಕೆಜಿಪಿ ಮಾಡಲು ಆಡಿಟ್‌ ಮಾಡಲಾಗುವುದು. ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದ್ದಾರೆ.

ಮಹಿಳೆ ಉದ್ದಿಮೆಗಳಿಗೆ ಅನುಕೂಲ ಆಗಲು ಮಹಿಳಾ ಉದ್ಯಮ ಪಾರ್ಕ್ ಸ್ಥಾಪನೆಗೆ ಪ್ರೋತ್ಸಾಹ ಕೊಡಲಾಗುವುದು. ಆಂದ್ರಪ್ರದೇಶ ಹಾಗೂ ತೆಲಗಾಂಣಕ್ಕಿಂತ ಕರ್ನಾಟಕ ಕೈಗಾರಿಕೆಗೆ ಉತ್ತಮವಾಗಿದೆ. ಬಹಳಷ್ಟು ದೊಡ್ಡ ದೊಡ್ಡ ಕೈಗಾರಿಕೆಗಳು ಕರ್ನಾಟಕಕ್ಕೆ ಬರುತ್ತಿವೆ ಎಂದು ಜಾರ್ಜ್ ತಿಳಿಸಿದ್ದಾರೆ.

ಪ್ರತ್ಯೇಕ ರಾಜ್ಯದ ಕೂಗು ಯಾಕೆ ಸುಮ್ಮನೆ ಹೇಳ್ತಾರೆ. ಸಮಸ್ಯೆಗಳಿಗೆ ಸ್ಪಂದನೆ ಸಿಕ್ಕಿಲ್ಲಾ ಅನ್ನುವುದು ಇದರ ಹಿಂದೆ ಇದೆ. ರಾಜ್ಯದ ಅಖಂಡತೆಯನ್ನು ಸರ್ಕಾರ ನೋಡುತ್ತದೆ. ಸಿಎಂ ಕುಮಾರಸ್ವಾಮಿ ಜನರ ನೋವಿಗೆ ಕಣ್ಣೀರು ಹಾಕುತ್ತಿದ್ದಾರೆ. ಅದರ ಹೊರತು ಬೇರೇನೂ ಇಲ್ಲ ಎಂದು ಜಾರ್ಜ್‌ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ