ಆ್ಯಪ್ನಗರ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡಲು ಒತ್ತಾಯ

ಹುಬ್ಬಳ್ಳಿ: ಕುರುಬ ಸಮುದಾಯ ಎಸ್‌ಟಿ ವರ್ಗಕ್ಕೆ ಸೇರ್ಪಡೆ ಹೋರಾಟದ ಭಾಗವಾಗಿ ನ. 29ರ ಬಳಿಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಅವರ ಹೆಸರಿಡುವಂತೆ ಒತ್ತಾಯಿಸಿ ಇಲ್ಲಿನ ಚನ್ನಮ್ಮ ವೃತ್ತದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್‌ ರಾರ‍ಯಲಿ ನಡೆಸಲಾಗುವುದು ಎಂದು ಹೋರಾಟದ ಜಿಲ್ಲಾಉಸ್ತುವಾರಿ ಶಿವಾನಂದ ಮುತ್ತಣ್ಣವರ ಹೇಳಿದರು.

Vijaya Karnataka 25 Nov 2020, 5:00 am
ಹುಬ್ಬಳ್ಳಿ: ಕುರುಬ ಸಮುದಾಯ ಎಸ್‌ಟಿ ವರ್ಗಕ್ಕೆ ಸೇರ್ಪಡೆ ಹೋರಾಟದ ಭಾಗವಾಗಿ ನ. 29ರ ಬಳಿಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಅವರ ಹೆಸರಿಡುವಂತೆ ಒತ್ತಾಯಿಸಿ ಇಲ್ಲಿನ ಚನ್ನಮ್ಮ ವೃತ್ತದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್‌ ರಾರ‍ಯಲಿ ನಡೆಸಲಾಗುವುದು ಎಂದು ಹೋರಾಟದ ಜಿಲ್ಲಾಉಸ್ತುವಾರಿ ಶಿವಾನಂದ ಮುತ್ತಣ್ಣವರ ಹೇಳಿದರು.
Vijaya Karnataka Web Hubballi_Airport_new_Terminal

ನಗರದಲ್ಲಿಮಂಗಳವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಸಮುದಾಯವನ್ನು ಎಸ್‌ಟಿ ವರ್ಗಕ್ಕೆ ಸೇರ್ಪಡೆಗೆ ಒತ್ತಾಯಿಸಿ ನ. 29ರಂದು ಬೆಳಗಾವಿ ವಿಭಾಗ ಮಟ್ಟದ ಬೃಹತ್‌ ಸಮಾವೇಶ ಬಾಗಲಕೋಟೆಯಲ್ಲಿನಡೆಯಲಿದ್ದು, ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ. ಧಾರವಾಡದಿಂದ ಸುಮಾರು 25 ಸಾವಿರ ಜನರು ಪಾಲ್ಗೊಳ್ಳುವರು. ಈ ಹಿನ್ನೆಲೆಯಲ್ಲಿಜಿಲ್ಲೆಯ ಗ್ರಾಮಾಂತರ ಮತ್ತು ನಗರದ ಪದಾಧಿಕಾರಿಗಳ ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದರು.

ಇನ್ನು,ಫೆ. 7ರಂದು ಬೆಂಗಳೂರಲ್ಲಿ ನಡೆಯಲಿರುವ ಸಮಾವೇಶದಲ್ಲಿ10ಲಕ್ಷ ಜನ ಪಾಲ್ಗೊಳ್ಳಲಿದ್ದೇವೆ. ಇವೆಲ್ಲದರ ಹಿನ್ನೆಲೆಯಲ್ಲಿಧಾರವಾಡ ಪಶ್ವಿಮ ಕ್ಷೇತ್ರದ ಸಭೆ ನ.25 ಬೆಳಗ್ಗೆ ಧಾರವಾಡದ ನೌಕರರ ಭವನದಲ್ಲಿಹಾಗೂ ಮಧ್ಯಾಹ್ನ 4ಗಂಟೆಗೆ ಬ್ಯಾಹಟ್ಟಿಯಲ್ಲಿನಡೆಯಲಿದೆ. ಕುರುಬ ಸಮುದಾಯ ತೀರಾ ಹಿಂದುಳಿದಿದ್ದು, ಸಮಾಜದ ಅಭಿವೃದ್ಧಿಗಾಗಿ ಹೋರಾಟ ಅಗತ್ಯವಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ