ಆ್ಯಪ್ನಗರ

ಮಳೆ ಸಂತ್ರಸ್ತರಿಗೆ ಶಾಸಕರಿಂದ ಚೆಕ್‌ ವಿತರಣೆ

ಅಣ್ಣಿಗೇರಿ : ನವಲಗುಂದ ಮತಕ್ಷೇತ್ರ ವ್ಯಾಪ್ತಿಯ ಪ್ರವಾಹಕ್ಕೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಹಾಗೂ ಶಾಸಕ ಶಂಕರಪಾಟೀಲ ಮುನೇನಕೊಪ್ಪ ಗುರುವಾರ ಗುಡಿಸಾಗರ ಗ್ರಾಮದಲ್ಲಿ ಅತಿವೃಷ್ಟಿಯಿಂದ ಹಾನಿಯಿಂದ ಮನೆಗಳನ್ನು ಕಳೆದುಕೊಂಡ ನಿರಾಶ್ರಿತರಿಗೆ ಪರಿಹಾರಧನ ಚೆಕ್‌ ವಿತರಿಸಿದರು.

Vijaya Karnataka 10 Aug 2019, 5:00 am
ಅಣ್ಣಿಗೇರಿ : ನವಲಗುಂದ ಮತಕ್ಷೇತ್ರ ವ್ಯಾಪ್ತಿಯ ಪ್ರವಾಹಕ್ಕೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಹಾಗೂ ಶಾಸಕ ಶಂಕರಪಾಟೀಲ ಮುನೇನಕೊಪ್ಪ ಗುರುವಾರ ಗುಡಿಸಾಗರ ಗ್ರಾಮದಲ್ಲಿ ಅತಿವೃಷ್ಟಿಯಿಂದ ಹಾನಿಯಿಂದ ಮನೆಗಳನ್ನು ಕಳೆದುಕೊಂಡ ನಿರಾಶ್ರಿತರಿಗೆ ಪರಿಹಾರಧನ ಚೆಕ್‌ ವಿತರಿಸಿದರು.
Vijaya Karnataka Web DRW-9ANG1
ಅಣ್ಣಿಗೇರಿ ಸಮೀಪದ ಗುಡಿಸಾಗರ ಗ್ರಾಮದಲ್ಲಿ ಅತೀವೃಷ್ಠಿಯಿಂದ ಹಾನಿಗೊಂಡಿರುವ ಮನೆಗಳನ್ನು ವೀಕ್ಷಿಸಿದ ಶಾಸಕರು ನಿರಾಶ್ರಿತರಿಗೆ ಪರಿಹಾರದ ಚೆಕ್‌ ವಿತರಿಸಿದರು.

ಈ ಸಂದರ್ಭದಲ್ಲಿ ನಿರಾಶ್ರಿತರಿಗೆ ಸ್ವಾಂತನ ಮತ್ತು ಧೈರ್ಯ ತುಂಬಿದ ಶಾಸಕರು, ಮಳೆಯ ಅವಾಂತರ ಹೆಚ್ಚಾಗಿದ್ದು ಅತಿವೃಷ್ಟಿಯಿಂದ ನಿರಾಶ್ರಿತರಾದ ಜನರಿಗೆ ಸರಕಾರದಿಂದ ತಕ್ಷ ಣವೇ ಎಲ್ಲ ರೀತಿಯ ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಹಾಗೂ ಯಾವುದೇ ಅವಘಡ ಸಂಭವಿಸದಂತೆ ಮುಂಜಾಗ್ರತೆ ವಹಿಸಬೇಕು. ಜನ, ಜಾನುವಾರುಗಳ ಪ್ರಾಣಹಾನಿ, ಮನೆಗಳಿಗೆ ಹಾನಿಯಾದ ಬಗ್ಗೆ ಪ್ರತಿದಿನ ವರದಿ ಸಲ್ಲಿಸಲು ಹಾಗೂ 24 ಗಂಟೆಗಳಲ್ಲಿ ಸರಕಾರದ ಪರಿಹಾರಧನ ತಲುಪಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ