ಆ್ಯಪ್ನಗರ

11ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ದರೋಡೆ, ವೃದ್ಧ ನ ಕೊಲೆ

ಹುಬ್ಬಳ್ಳಿ : ಮಂಗಳವಾರ ಬೆಳ್ಳಂಬೆಳಗ್ಗೆ ವಯೋವೃದ್ಧ ದಂಪತಿ ವಾಸವಿರುವ ಮನೆಗೆ ನುಗ್ಗಿದ ಐವರು ಮುಸುಕುಧಾರಿ ದರೋಡೆಕೋರರ ತಂಡ ಅವರ ಮೇಲೆ ಮಾರಣಾಂತಿ ಹಲ್ಲೆ ನಡೆಸಿ 11 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿಕೊಂಡು ಪರಾರಿಯಾಗಿದ್ದಾರೆ. ಘಟನೆಯಲ್ಲಿ ವೃದ್ಧ ಪತಿ ಸ್ಥಳದಲ್ಲಿ ಮೃತಪಟ್ಟಿದ್ದರೆ, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Vijaya Karnataka 23 Jan 2019, 5:00 am
ಹುಬ್ಬಳ್ಳಿ : ಮಂಗಳವಾರ ಬೆಳ್ಳಂಬೆಳಗ್ಗೆ ವಯೋವೃದ್ಧ ದಂಪತಿ ವಾಸವಿರುವ ಮನೆಗೆ ನುಗ್ಗಿದ ಐವರು ಮುಸುಕುಧಾರಿ ದರೋಡೆಕೋರರ ತಂಡ ಅವರ ಮೇಲೆ ಮಾರಣಾಂತಿ ಹಲ್ಲೆ ನಡೆಸಿ 11 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿಕೊಂಡು ಪರಾರಿಯಾಗಿದ್ದಾರೆ. ಘಟನೆಯಲ್ಲಿ ವೃದ್ಧ ಪತಿ ಸ್ಥಳದಲ್ಲಿ ಮೃತಪಟ್ಟಿದ್ದರೆ, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
Vijaya Karnataka Web DRW-22MANJU3B


ರಾಜನಗರದ ಎಸ್‌ಬಿಐ ಕ್ವಾಟರ್ಸ್‌ ಹಿಂಭಾಗದಲ್ಲಿರುವ ವೆಂಕಣ್ಣ ಬಣವಿ(70) ದುಷ್ಕರ್ಮಿಗಳ ಹಲ್ಲೆಗೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅವರ ಪತ್ನಿ ವನಮಾಲಾ ಬಣವಿ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಲಾಗಿದೆ.

ಅಮಾನುಷ ಥಳಿತ : ಮಂಗಳವಾರ ನಸುಕಿನ ಜಾವ 3.30ರ ಸುಮಾರಿಗೆ ಮನೆಯ ಕಿಟಕಿ ಮುರಿದು ಒಳ ಪ್ರವೇಶಿಸಿದ ಐವರು ಮುಸುಕುಧಾರಿ ದರೋಡೆಕೋರರ ತಂಡ ಮನೆ ವೃದ್ಧ ದಂಪತಿಯನ್ನು ಅಮಾನುಷವಾಗಿ ಥಳಿಸಿದ್ದಾರೆ. ವಯೋವೃದ್ಧರ ಕೈ, ಕಾಲು ಹಾಗೂ ಬಾಯಿಗೆ ಬಟ್ಟೆ ಕಟ್ಟಿದ್ದಾರೆ. ನಂತರ ಕಟ್ಟಿಗೆ ಕಬ್ಬಿಣದ ರಾಡ್‌ನಿಂದ ಇಬ್ಬರನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಇದರ ಪರಿಣಾಮ ವೆಂಕಣ್ಣ ಬಣವಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.

ಚಿನ್ನಾಭರಣ ಕಳುವು : ಹಲ್ಲೆ ನಡೆಸಿದ ದುಷ್ಕರ್ಮಿಗಳು ವೃದ್ಧ ದಂಪತಿ ಮಲಗಿದ್ದ ಬೆಡ್‌ ರೂಂ ಪಕ್ಕದಲ್ಲಿದ್ದ ಕಬ್ಬಿಣ ಕಪಾಟಿನಲ್ಲಿದ್ದ 1 ಲಕ್ಷ ರೂ. ಮೌಲ್ಯದ ನಾಲ್ಕು ವಜ್ರದ ಉಂಗುರುಗಳು, 1 ಲಕ್ಷ ರೂ. ಮೌಲ್ಯದ 50 ಗ್ರಾಂ ಐದು ಎಳೆಯುಳ್ಳ ಬಂಗಾರದ ಸರ, 40 ಸಾವಿರ ರೂ. ಮೌಲ್ಯದ 20 ಗ್ರಾಂ ತೂಕದ ಬಂಗಾರದ ರುದ್ರಾಕ್ಷಿ ಮಾಲೆ, 2.5 ಲಕ್ಷ ರೂ. ಮೌಲ್ಯದ ಡೈಮಂಡ್‌ ನಕ್ಲೇಸ್‌, 1 ಲಕ್ಷ ರೂ. ಮೌಲ್ಯದ ಡೈಮೆಂಡ್‌ ಕಿವಿಯೋಲೆಗಳು, 1 ಲಕ್ಷ ರೂ. ಮೌಲ್ಯದ ನಾಲ್ಕು ಬಂಗಾರದ ಕಿವಿಯೋಲೆ ಹಾಗೂ 25 ಸಾವಿರ ರೂ. ನಗದು ಕಳುವು ಮಾಡಿಕೊಂಡು ಪರಾರಿಯಾಗಿದ್ದಾರೆ.

ದರೋಡೆಕೋರರು ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬಾಯಿಯನ್ನು ಬಟ್ಟೆಯಿಂದ ಬಿಗಿಯಾಗಿ ಕಟ್ಟಿದ್ದರು. ಇದರ ಪರಿಣಾಮ ತೀವ್ರ ಹಲ್ಲೆಗೊಳಗಾಗಿದ್ದ ವೆಂಕಣ್ಣ ಅವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪತ್ನಿ ವನಮಾಲಾ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಅಶೋಕನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಮಕ್ಕಳೆಲ್ಲ ವಿದೇಶದಲ್ಲಿ : ವಯೋವೃದ್ಧ ದಂಪತಿಗೆ ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ. ಆದರೆ, ಅವರ ಮೂವರು ಮಕ್ಕಳು ವಿದೇಶದಲ್ಲಿ ವಾಸವಾಗಿದ್ದಾರೆ. ಹಬ್ಬ-ಹರಿದಿನ ಸಂದರ್ಭದಲ್ಲಿ ಮಾತ್ರ ಇವರ ಮಕ್ಕಳು ಮನೆಗೆ ಬರುತ್ತಿದ್ದರು. ಹೀಗಾಗಿ ಅಂತಹ ದೊಡ್ಡ ಮನೆಯಲ್ಲಿ ಹಲವು ವರ್ಷಗಳಿಂದ ವಯೋವೃದ್ಧರಿಬ್ಬರು ವಾಸವಾಗಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ