ಆ್ಯಪ್ನಗರ

ಉಪಚುನಾವಣೆ ಬಳಿಕ ಸಂಪುಟಕ್ಕೆ ಸರ್ಜರಿ: ಸಿದ್ದರಾಮಯ್ಯ

ಉಪಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Vijaya Karnataka Web 15 Oct 2018, 7:38 pm
ಹುಬ್ಬಳ್ಳಿ: ರಾಜ್ಯದಲ್ಲಿ ನಡೆಯಲಿರುವ ಲೋಕಸಭೆ ಹಾಗೂ ವಿಧಾನಸಭೆಯ ಉಪಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Vijaya Karnataka Web siddu


ಬಾಗಲಕೋಟೆಯ ಜಮಖಂಡಿಯಲ್ಲಿ ಆನಂದ ನ್ಯಾಮಗೌಡ ನಾಮಪತ್ರ ಸಲ್ಲಿಸಲು ತೆರಳುವ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಉಪಚುನಾವಣೆಗಳ ಟಿಕೆಟ್ ಹಂಚಿಕೆ ಸಂಬಂಧ ಸಮ್ಮಿಶ್ರ ಸರಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಅವರು ಮೊದಲು ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯಗಳನ್ನು ಶಮನ ಗೊಳಿಸಲಿ. ಆಮೇಲೆ ಮತ್ತೊಂದು ಪಕ್ಷದ ಭಿನ್ನಮತದ ಬಗ್ಗೆ ಮಾತನಾಡುವುದು ಒಳಿತು. ಬಳ್ಳಾರಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಡಿ.ಕೆ. ಶಿವಕುಮಾರ ಮತ್ತು ತಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವೂ ಇಲ್ಲ, ಅಸಮಾಧಾನವೂ ಇಲ್ಲ. ಎಲ್ಲರ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ. ಕೋಮುವಾದಿ ಪಕ್ಷವನ್ನು ಸೋಲಿಸುವುದೇ ನಮ್ಮ ಗುರಿ ಎಂದಿದ್ದಾರೆ.

ಜೆಡಿಎಸ್-ಕಾಂಗ್ರೆಸ ಮೈತ್ರಿಕೂಟ ಉಪಚುನಾವಣೆಯಲ್ಲೂ ಗೆಲುವು ಸಾಧಿಸಲಿದೆ ಎಂದ ಅವರು, ಈ ನಿಟ್ಟಿನಲ್ಲಿ ಜೆಡಿಎಸ್-ಕಾಂಗ್ರೆಸ್ ನಾಯಕರು ಒಟ್ಟಾಗಿ ಚುನಾವಣೆ ಪ್ರಚಾರ ಮಾಡುವ ಮೂಲಕ ಮೈತ್ರಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ