ಆ್ಯಪ್ನಗರ

ಖಾಸಗಿ ಕಚೇರಿಯಲ್ಲಿ ಕಾರ್ಮಿಕ ಇಲಾಖೆ ಕಿಟ್‌, ಕ್ರಮಕ್ಕೆ ಒತ್ತಾಯ

ಧಾರವಾಡ: ಕಾರ್ಮಿಕರಿಗೆ ವಿತರಿಸಲು ನೀಡಿದ ಆಹಾರ ಧಾನ್ಯದ ಕಿಟ್‌ಗಳನ್ನು ಸ್ಥಳೀಯ ಶಾಸಕರ ಖಾಸಗಿ ಕಚೇರಿಯಲ್ಲಿದಾಸ್ತಾನು ಮಾಡುವ ಮೂಲಕ ನಿಯಮ ಉಲ್ಲಂಘಿಸಲಾಗಿದೆ ಎಂದು ಕಲಘಟಗಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮಂಜುನಾಥಗೌಡ ಮುರಳ್ಳಿ ಗಂಭೀರ ಆರೋಪ ಮಾಡಿದ್ದಾರೆ.

Vijaya Karnataka 21 May 2020, 5:00 am
ಧಾರವಾಡ: ಕಾರ್ಮಿಕರಿಗೆ ವಿತರಿಸಲು ನೀಡಿದ ಆಹಾರ ಧಾನ್ಯದ ಕಿಟ್‌ಗಳನ್ನು ಸ್ಥಳೀಯ ಶಾಸಕರ ಖಾಸಗಿ ಕಚೇರಿಯಲ್ಲಿದಾಸ್ತಾನು ಮಾಡುವ ಮೂಲಕ ನಿಯಮ ಉಲ್ಲಂಘಿಸಲಾಗಿದೆ ಎಂದು ಕಲಘಟಗಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮಂಜುನಾಥಗೌಡ ಮುರಳ್ಳಿ ಗಂಭೀರ ಆರೋಪ ಮಾಡಿದ್ದಾರೆ.
Vijaya Karnataka Web labor department kit in private office demanding action
ಖಾಸಗಿ ಕಚೇರಿಯಲ್ಲಿ ಕಾರ್ಮಿಕ ಇಲಾಖೆ ಕಿಟ್‌, ಕ್ರಮಕ್ಕೆ ಒತ್ತಾಯ

ಈ ಕುರಿತಂತೆ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್‌ ಅವರಿಗೆ ಪತ್ರ ಬರೆದಿರುವ ಮಂಜುನಾಥಗೌಡ ಈ ಕುರಿತಂತೆ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಲಾಕ್‌ಡೌನ್‌ ಹಿನ್ನೆಲೆ ರಾಜ್ಯ ಸರಕಾರ ಅಸಂಘಟಿತ ಕಾರ್ಮಿಕರಿಗೆ ಆಹಾರ ಧಾನ್ಯ ಮತ್ತು ದಿನಸಿ ಕಿಟ್‌ಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ. ಅದರಂತೆ ಕಲಘಟಗಿ ತಾಲೂಕಿಗೂ ಕಿಟ್‌ಗಳನ್ನು ಹಂಚಿಕೆ ಮಾಡಲಾಗಿದೆ. ಅವುಗಳನ್ನು ಕಾರ್ಮಿಕ ಇಲಾಖೆ ವಶದಲ್ಲಿಇಡದೇ ಶಾಸಕರ ಖಾಸಗಿ ಕಚೇರಿಯಲ್ಲಿದಾಸ್ತಾನು ಮಾಡಿರುವುದು ಎಷ್ಟು ಸರಿ ಎಂದವರು ಪ್ರಶ್ನಿಸಿದ್ದಾರೆ.

ಇದು ಕೋವಿಡ್‌ ಮಾರ್ಗಸೂಚಿಯ ಸ್ಪಷ್ಟ ಉಲ್ಲಂಘನೆ ಆಗಿದೆ. ಹೀಗಾಗಿ ಕೂಡಲೇ ಕಾರ್ಮಿಕ ಇಲಾಖೆ ಅವುಗಳನ್ನು ವಶಕ್ಕೆ ಪಡೆದು ನಿಯಮಾನುಸಾರ ಕಾರ್ಮಿಕರಿಗೆ ವಿತರಣೆ ಮಾಡಬೇಕು ಎಂದು ಸಚಿವರಿಗೆ ಬರೆದ ಪತ್ರದಲ್ಲಿಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ