ಆ್ಯಪ್ನಗರ

ವಿದ್ಯಾರ್ಥಿಗಳು ಪಠ್ಯದ ಜತೆ ಕೌಶಲ ಬೆಳೆಸಿಕೊಳ್ಳಲಿ

ಧಾರವಾಡ: ಪ್ರಸ್ತುತ ಅರ್ಥ ವ್ಯವಸ್ಥೆಯಲ್ಲಿವಾಣಿಜ್ಯ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯ. ವಿದ್ಯಾರ್ಥಿಗಳು ಪಠ್ಯಕ್ರಮದ ಅಭ್ಯಾಸದೊಂದಿಗೆ ಇತರ ಕೌಶಲಗಳನ್ನು ಅಳವಸಿಕೊಂಡರೇ ಮಾತ್ರ ಇಂದಿನ ಪರಿಸ್ಥಿತಿಯಲ್ಲಿಯಶಸ್ಸು ಕಾಣಬಹುದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ನಿವೃತ್ತ ಮುಖ್ಯ ವ್ಯವಸ್ಥಾಪಕ ಎಂ.ಕೆ.ಕೃಷ್ಣ ಹೇಳಿದರು.

Vijaya Karnataka 21 Oct 2019, 5:00 am
ಧಾರವಾಡ: ಪ್ರಸ್ತುತ ಅರ್ಥ ವ್ಯವಸ್ಥೆಯಲ್ಲಿವಾಣಿಜ್ಯ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯ. ವಿದ್ಯಾರ್ಥಿಗಳು ಪಠ್ಯಕ್ರಮದ ಅಭ್ಯಾಸದೊಂದಿಗೆ ಇತರ ಕೌಶಲಗಳನ್ನು ಅಳವಸಿಕೊಂಡರೇ ಮಾತ್ರ ಇಂದಿನ ಪರಿಸ್ಥಿತಿಯಲ್ಲಿಯಶಸ್ಸು ಕಾಣಬಹುದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ನಿವೃತ್ತ ಮುಖ್ಯ ವ್ಯವಸ್ಥಾಪಕ ಎಂ.ಕೆ.ಕೃಷ್ಣ ಹೇಳಿದರು.
Vijaya Karnataka Web let the students develop their skills with the text
ವಿದ್ಯಾರ್ಥಿಗಳು ಪಠ್ಯದ ಜತೆ ಕೌಶಲ ಬೆಳೆಸಿಕೊಳ್ಳಲಿ

ನಗರದ ಅಕ್ಕಿಹಾಳ ಮಹಾವಿದ್ಯಾಲಯದ ವಾಣಿಜ್ಯ ಸ್ನಾತಕೋತ್ತರ ವಿಭಾಗದಲ್ಲಿ ಶನಿವಾರ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿಅವರು ವಿಶೇಷ ಉಪನ್ಯಾಸ ನೀಡುತ್ತಾ, ಸಾಮಾಜಿಕ ಹೊಣೆಗಾರಿಕೆಯಲ್ಲಿಮಹಿಳೆಯರ ಪಾತ್ರ ಕೂಡ ಮುಖ್ಯ ಎಂದು ವಿಶ್ಲೇಷಿಸಿದರು. ಯಾವ ರೀತಿ ಕೌಶಲ ಬೆಳೆಸಿಕೊಳ್ಳಬೇಕು ಹಾಗೂ ಸಮಯದ ಸದ್ಬಳಕೆ ಮಾಡಿಕೊಳ್ಳಬೇಕು, ಹೇಗೆ ಸಂದರ್ಶನಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು ಎಂಬಿತ್ಯಾದಿ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.

ಇದೇ ವೇಳೆ ಅನುಪಮಾ ದೇಶಪಾಂಡೆ ಹಾಗೂ ಕವಿತಾ ಬುದ್ದಿನ್ನಿ ಅನಿಸಿಕೆ ಹಂಚಿಕೊಂಡರು. ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಡಾ.ಆರ್‌.ಜಿ.ಅಕ್ಕಿಹಾಳ ಸ್ವಾಗತಿಸಿದರು. ಪ್ರಾಂಶುಪಾಲ ವಿಜಯಕುಮಾರ ಅಕ್ಕಿಹಾಳ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ