ಆ್ಯಪ್ನಗರ

ವಿಶ್ವದಲ್ಲೇ ಬಹುದೊಡ್ಡ ಆರ್ಥಿಕ ಶಕ್ತಿಯಾಗಲಿದೆ ಭಾರತ : ಅನುರಾಗ್ ಠಾಕೂರ್

ಕೇಂದ್ರ ವಿತ್ತ ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ವಿಶ್ವದಲ್ಲೇ ಭಾರತ ಬಹುದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. 2024 ರ ವೇಳೆಗೆ 5 ಟ್ರಿಲಿಯನ್ ಡಾಲರ್ ಆರ್ಥಿಕ ಶಕ್ತಿಯಾಗುವುದರಲ್ಲಿ ಸಂಶಯ ಬೇಡ ಎಂದಿದ್ದಾರೆ.

Vijaya Karnataka Web 28 Sep 2019, 4:42 pm
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಭಾರತ ಜಗತ್ತಿನ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಹೇಳಿಕೆ ನೀಡಿದ್ದಾರೆ.
Vijaya Karnataka Web anurag taqur


ಆರ್ಥಿಕ ಸದೃಢ ರಾಜ್ಯಕ್ಕೆ ಕೇಂದ್ರದ ನೆರವು ಅನಿವಾರ್ಯವಲ್ಲ: ತೇಜಸ್ವಿ ಸೂರ್ಯ

ನಗರದಲ್ಲಿ ಶನಿವಾರ ಬಿಜೆಪಿಯ ಜನ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನರೇಂದ್ರ ಮೋದಿಯವರ ನೇತ್ರತ್ವದಲ್ಲಿ‌ ಆರ್ಥಿಕ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ್ದೇವೆ. ಭಾರತ 2024 ರ ವೇಳೆಗೆ 5 ಟ್ರಿಲಿಯನ್ ಡಾಲರ್ ಆರ್ಥಿಕ ಶಕ್ತಿಯಾಗುವುದರಲ್ಲಿ ಅನುಮಾನವೇ ಇಲ್ಲ. ಈ ಬಗ್ಗೆ ಈಗಾಗಲೇ ಕೈಗಾರಿಕೋದ್ಯಮಿಗಳ ಜೊತೆ ಚರ್ಚೆ ನಡೆಸಿ ಯೋಜನೆ ಹಾಕಿಕೊಳ್ಳಲಾಗಿದೆ ಎಂದಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ನೆರೆ ಸಂತ್ರಸ್ತರ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕು: ಎಚ್ ಕೆ ಪಾಟೀಲ್

ಉದ್ಯಮಿಗಳು, ವ್ಯಾಪಾರಸ್ಥರಿಗೆ ಅನುಕೂಲವಾಗುವ ರೀತಿಯಲ್ಲಿ ಜಿಎಸ್‌ಟಿ ಜಾರಿಗೆ ತರಲಾಗಿದ್ದು,
ಜನಾಭಿಪ್ರಾಯ ಪಡೆದು ತೆರಿಗೆ ಪ್ರಮಾಣದಲ್ಲಿ ಹಲವು ಸುಧಾರಣೆಗಳನ್ನು ಮಾಡಲಾಗುತ್ತಿದೆ. ಇದರ ಜೊತೆಗೆ ಆರ್ಥಿಕ ಅಪರಾಧ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ನಾವು ಕೇವಲ ಮಾತಾಡುತ್ತಿಲ್ಲ, ಕೆಲಸ ಮಾಡಿ ತೋರಿಸುತ್ತಿದ್ದೇವೆ ಎಂದು ಹೇಳಿದರು.

ದೇಶಾದ್ಯಂತ ಬಿಜೆಪಿ ಅಭಿಯಾನ

ಪ್ರವಾಹ ಪೀಡಿತ ಕರ್ನಾಟಕಕ್ಕೆ ಕೇಂದ್ರದಿಂದ ಪರಿಹಾರ ನೀಡುವುದು ವಿಳಂಬವಾಗುತ್ತಿರುವುದಕ್ಕೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅನುರಾಗ್ ಠಾಕೂರ್, ಕೆಲ ಪ್ರಕ್ರಿಯೆಗಳು ಪೂರ್ಣವಾದ ಬಳಿಕ ಎಲ್ಲಾರೀತಿಯ ನೆರವು ಕೊಡಲಾಗುವುದು. ಆದಷ್ಟು ಬೇಗ ಕರ್ನಾಟಕ ರಾಜ್ಯಕ್ಕೆ ಸಿಗಬೇಕಾದ ಪರಿಹಾರ ಕೇಂದ್ರದಿಂದ ಬಿಡುಗಡೆಯಾಗಲಿದೆ ಎಂದು ಭರವಸೆ ನೀಡಿದರು.

ದೇಶದಲ್ಲಿ ಈ ಬಾರಿ ಪ್ರವಾಹಕ್ಕೆ ನಲುಗಿರುವ ಎಲ್ಲಾ ರಾಜ್ಯಗಳನ್ನು ಸಮಾನ ದೃಷ್ಟಿಯಿಂದ ನೋಡಲಾಗುತ್ತಿದೆ. ಈ ಬಗ್ಗೆ ಕೇಂದ್ರ ಸರಕಾರ ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ