ಆ್ಯಪ್ನಗರ

ಧಾರವಾಡ: 2 ದಿನದಲ್ಲಿ 204 ಜನರಿಗೆ ಸೋಂಕು

ಸೋಂಕು ದೃಢಪಟ್ಟಿರುವ 182 ಜನರಲ್ಲಿ 25 ಜನ ಕಾಲೇಜಿನ ಸಿಬ್ಬಂದಿ ಮತ್ತು ವೈದ್ಯರಿದ್ದಾರೆ. ಎಲ್ಲರಿಗೂ ಸೂಕ್ತ ಚಿಕಿತ್ಸೆ ದೊರೆಯುತ್ತಿದೆ. ಆಸ್ಪತ್ರೆ ಹಾಗೂ ಕಾಲೇಜಿನಲ್ಲಿ ಸೇವೆ ಸಲ್ಲಿಸುವ ಎಲ್ಲ 3500 ಜನರ ಕೋವಿಡ್‌ ತಪಾಸಣೆ ಮಾಡಲಾಗುತ್ತಿದೆ.

Vijaya Karnataka 26 Nov 2021, 11:18 pm
ಧಾರವಾಡ:ಸತ್ತೂರಿನ ಎಸ್‌ಡಿಎಂ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯಲ್ಲಿ ಕಳೆದ ಎರಡು ದಿನಗಳಿಂದ 182 ಹಾಗೂ ಹೊಸದಾಗಿ 22 ಸೇರಿ ಒಟ್ಟು 204 ಜನರಲ್ಲಿ ಕೋವಿಡ್‌ ಸೋಂಕು ಕಂಡುಬಂದಿದೆ. ಹೀಗಾಗಿ ಎಸ್‌ಡಿಎಂ ಆಸ್ಪತ್ರೆಯ ಹೊರರೋಗಿಗಳ ವಿಭಾಗದ ಸೇವೆಗಳು ಹಾಗೂ ಹೊಸ ರೋಗಿಗಳ ಪ್ರವೇಶವನ್ನು ಭಾನುವಾರದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಹೇಳಿದರು.
Vijaya Karnataka Web ಕೊರೊನಾ ವೈರಸ್‌
ಕೊರೊನಾ ವೈರಸ್‌


ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಡಿಎಂ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಸೇವೆಗಳು ಮಾತ್ರ ಮುಂದುವರಿಯಲಿವೆ. ಆಸ್ಪತ್ರೆ ಆವರಣಕ್ಕೆ ಸಾರ್ವಜನಿಕರ ಪ್ರವೇಶ ಕೂಡ ನಿರ್ಬಂಧಿಸಲಾಗಿದೆ ಎಂದರು.

ಧಾರವಾಡದ SDM ಮೆಡಿಕಲ್‌ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್!

ಎಸ್‌ಡಿಎಂ ಆಸ್ಪತ್ರೆಗೆ ಧಾರವಾಡ ಹಾಗೂ ಸುತ್ತಮುತ್ತಲಿನ 6 ರಿಂದ 8 ಜಿಲ್ಲೆಗಳ ರೋಗಿಗಳು ಪ್ರತಿದಿನ ಸಾಮಾನ್ಯ ಚಿಕಿತ್ಸೆಗೆ ಬರಲಿದ್ದಾರೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈಗ ಆಸ್ಪತ್ರೆಯಲ್ಲಿಇದ್ದವರ ಚಿಕಿತ್ಸೆ ಉಂದುವರಿದ್ದು, ರೋಗಿಗಳ ಅಟೆಂಡರ್‌ಗಳ ಪ್ರವೇಶ ನಿಷೇಧಿಸಲಾಗಿದೆ. ಜತೆಗೆ ಆಸ್ಪತ್ರೆ ಸುತ್ತಲಿನ 500 ಮೀಟರ್‌ ವ್ಯಾಪ್ತಿಯಲ್ಲಿನ ಶಾಲಾ, ಕಾಲೇಜು, ಅಂಗನವಾಡಿಗಳಿಗೂ ರಜೆ ಘೋಷಿಸಲಾಗಿದೆ ಎಂದರು.

ಸ್ವಾಬ್‌ ಸಂಗ್ರಹಕ್ಕೆ 11 ತಂಡ

ಸೋಂಕು ದೃಢಪಟ್ಟಿರುವ 182 ಜನರಲ್ಲಿ 25 ಜನ ಕಾಲೇಜಿನ ಸಿಬ್ಬಂದಿ ಮತ್ತು ವೈದ್ಯರಿದ್ದಾರೆ. ಎಲ್ಲರಿಗೂ ಸೂಕ್ತ ಚಿಕಿತ್ಸೆ ದೊರೆಯುತ್ತಿದೆ. ಆಸ್ಪತ್ರೆ ಹಾಗೂ ಕಾಲೇಜಿನಲ್ಲಿ ಸೇವೆ ಸಲ್ಲಿಸುವ ಎಲ್ಲ 3500 ಜನರ ಕೋವಿಡ್‌ ತಪಾಸಣೆ ಮಾಡಲಾಗುತ್ತಿದೆ. ಜೊತೆಗೆ ಇಂದು 200ಕ್ಕೂ ಹೆಚ್ಚು ರೋಗಿಗಳ ಸ್ವಾಬ್‌ ಸಂಗ್ರಹಿಸಲಾಗಿದೆ. ಸ್ವಾಬ್‌ ಸಂಗ್ರಹಕ್ಕೆ ಹುಬ್ಬಳ್ಳಿಯ 5, ಧಾರವಾಡದ 6 ಸೇರಿ ಒಟ್ಟು 11 ತಂಡಗಳನ್ನು ಜಿಲ್ಲಾಡಳಿತ ನಿಯೋಜಿಸಿದೆ ಎಂದು ಹೇಳಿದರು.

ಚಿಕಿತ್ಸೆಗೆ ಪರ್ಯಾಯ ವ್ಯವಸ್ಥೆ

ಎಸ್‌ಡಿಎಂ ಆಸ್ಪತ್ರೆಯ ಓಪಿಡಿ ವಿಭಾಗದ ಸೇವೆಗಳನ್ನು ಸ್ಥಗಿತಗೊಳಿಸಿರುವುದರಿಂದ ಹುಬ್ಬಳ್ಳಿಯ ಕಿಮ್ಸ..., ಧಾರವಾಡ ಜಿಲ್ಲಾಆಸ್ಪತ್ರೆಗಳಲ್ಲಿಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಎಸ್‌ಡಿಎಂ ಆಸ್ಪತ್ರೆಗೆ ಶಿಫಾರಸು ಮಾಡುವ ಸುತ್ತಲಿನ ಜಿಲ್ಲೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಎಸ್‌ಡಿಎಂ ಆಸ್ಪತ್ರೆಯಲ್ಲಿಕೋವಿಡ್‌ ಸೋಂಕು ನಿಯಂತ್ರಣ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳಾಧಿಯಾಗಿ ಸಚಿವರು, ಎಲ್ಲಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದರು.

ಧಾರವಾಡದಲ್ಲಿ ಕೊರೊನಾ ಅಬ್ಬರ; ಎಸ್.ಡಿ.ಎಂ ಮೆಡಿಕಲ್ ಕಾಲೇಜಿನಲ್ಲಿ ಮತ್ತೆ 116 ಮಂದಿಯಲ್ಲಿ ಕೋವಿಡ್ ದೃಢ!

ವಿದ್ಯಾರ್ಥಿ, ಪೋಷಕರಿಗೂ ಟೆಸ್ಟ್‌

ನವೆಂಬರ್‌ 17 ಮಾತ್ರವಲ್ಲಅದಕ್ಕೂ 3 ದಿನ ಮೊದಲೇ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿವೆ. ಅಲ್ಲಿಅನೇಕ ವಿದ್ಯಾರ್ಥಿಗಳ ಪಾಲಕರೂ ಬಂದಿದ್ದರು. ಹೀಗಾಗಿ ಪೋಷಕರನ್ನೂ ಕೋವಿಡ್‌ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆ. ಬಹುತೇಕ ಯುಜಿ ವಿದ್ಯಾರ್ಥಿಗಳು ಆಸ್ಪತ್ರೆ ಜತೆ ಸಂಪರ್ಕಕಕ್ಕೆ ಬರುವುದಿಲ್ಲ. ಫೈನ್‌ಲ್‌ ವರ್ಷದ ವಿದ್ಯಾರ್ಥಿಗಳು ಬರಲಿದ್ದಾರೆ. ಆದರೆ, ಎಲ್ಲ ವಿದ್ಯಾರ್ಥಿಗಳು ಒಂದೇ ಕಡೆ ಊಟ ಮಾಡುವ ವ್ಯವಸ್ಥೆ ಇದ್ದಿದ್ದರಿಂದ ಆಸ್ಪತ್ರೆಯಲ್ಲಿ ರೋಗಿಗಳ ಸಂಪರ್ಕ ಕುರಿತಂತೆಯೂ ಮಾಹಿತಿ ಪಡೆಯಲಾಗುತ್ತಿದೆ ಎಂದು ಡಿಸಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ