ಆ್ಯಪ್ನಗರ

ಪೌರ ಕಾರ್ಮಿಕರ ಬೇಡಿಕೆ ಈಡೇರಿಸದಿದ್ದರೆ ಚಳವಳಿ: ಗುಂಟ್ರಾಳ

ಹುಬ್ಬಳ್ಳಿ :ಪೌರ ಕಾರ್ಮಿಕರಿಗೆ ನೇರ ವೇತನ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೆರಿಸಬೇಕು ಇಲ್ಲದೆ ಇದ್ದರೆ ಮುಂದಿನ ದಿನಗಳಲ್ಲಿ ದಲಿತ ಪರ, ಕಾರ್ಮಿಕರ ಪರ ಹಾಗೂ ವಿವಿಧ ಸಂಘಟಣೆಗಳ ಸಹಾಯದೊಂದಿಗೆ ಪಾಲಿಕೆ ವಿರುದ್ಧ ಚಳುವಳಿ ಮಾಡಲಾಗುವುದೆಂದು ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರ ಕಾರ್ಮಿಕರ ಮತ್ತು ನೌಕರರ ಸಂಘದ ಜಿಲ್ಲಾಧ್ಯಕ್ಷ ವಿಜಯ ಗುಂಟ್ರಾಳ ಎಚ್ಚರಿಕೆ ನೀಡಿದರು.

Vijaya Karnataka 1 Jul 2018, 5:00 am
ಹುಬ್ಬಳ್ಳಿ :ಪೌರ ಕಾರ್ಮಿಕರಿಗೆ ನೇರ ವೇತನ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೆರಿಸಬೇಕು ಇಲ್ಲದೆ ಇದ್ದರೆ ಮುಂದಿನ ದಿನಗಳಲ್ಲಿ ದಲಿತ ಪರ, ಕಾರ್ಮಿಕರ ಪರ ಹಾಗೂ ವಿವಿಧ ಸಂಘಟಣೆಗಳ ಸಹಾಯದೊಂದಿಗೆ ಪಾಲಿಕೆ ವಿರುದ್ಧ ಚಳುವಳಿ ಮಾಡಲಾಗುವುದೆಂದು ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರ ಕಾರ್ಮಿಕರ ಮತ್ತು ನೌಕರರ ಸಂಘದ ಜಿಲ್ಲಾಧ್ಯಕ್ಷ ವಿಜಯ ಗುಂಟ್ರಾಳ ಎಚ್ಚರಿಕೆ ನೀಡಿದರು.
Vijaya Karnataka Web movement if the demand for civic workers is not fulfilled guntra
ಪೌರ ಕಾರ್ಮಿಕರ ಬೇಡಿಕೆ ಈಡೇರಿಸದಿದ್ದರೆ ಚಳವಳಿ: ಗುಂಟ್ರಾಳ

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ವರ್ಷಗಳಿಂದ ಪೌರ ಕಾರ್ಮಿಕರು ಹೋರಾಟ ಮಾಡಿದ್ದರಿಂದ ನ್ಯಾಯಾಲಯವು ಗುತ್ತಿಗೆ ಪದ್ದತಿ ರದ್ದು ಮಾಡಿ ಪೌರ ಕಾರ್ಮಿಕರಿಗೆ ವೇತನ ನೀಡಬೇಕು ಎಂದು ಸರಕಾರಕ್ಕೆ ಸೂಚಿಸಿತ್ತು. ಸರಕಾರವು ಆದೇಶ ಹೊರಡಿಸಿ 3 ತಿಂಗಳು ಕಳೆದರೂ ಪಾಲಿಕೆ ಅಧಿಕಾರಿ ಹಾಗೂ ಸದಸ್ಯರು ಪೌರ ಕಾರ್ಮಿಕರಿಗೆ ನೇರ ವೇತನ ನೀಡುತ್ತಿಲ್ಲ ಎಂದು ದೂರಿದರು.

ಇತ್ತೀಚೆಗೆ ಪೌರ ಕಾರ್ಮಿಕರು ಪಾಲಿಕೆ ಸದಸ್ಯರ ಮನೆಯಲ್ಲಿ ಕಾರ್ಯ ನಿರ್ವಹಿಸಿದ್ದರ ಕುರಿತು ಹಾಗೂ ಪಾಲಿಕೆ ಸದಸ್ಯರು ಕಾರ್ಮಿಕರ ವಿರುದ್ಧ ದೌರ್ಜನ್ಯ ನಡೆಸುತ್ತಿರುವ ಕುರಿತು ಪೌರ ಕಾರ್ಮಿಕರು ಮಾಧ್ಯಮದವರ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದರು. ಇದರಿಂದ ಈ ವಿಷಯ ತುಂಬಾ ಗಂಭಿರ ಸ್ವರೂಪ ಪಡೆದುಕೊಂಡಿತ್ತು. ಸದಸ್ಯರನ್ನು ಈ ಪ್ರಕರಣದಿಂದ ರಕ್ಷಿಸಲು ಅಧಿಕಾರಿಗಳು ಪೌರ ಕಾರ್ಮಿಕರಿಂದ ಖಾಲಿ ಹಾಳೆಯ ಮೇಲೆ ಒತ್ತಾಯವಾಗಿ ಸಹಿ ಪಡೆದುಕೊಂಡು ಸದಸ್ಯರ ರಕ್ಷಣೆಗೆ ವಾಮ ಮಾರ್ಗ ಅನುಸರಿಸಿದ್ದಾರೆ ಎಂದು ಆರೋಪಿಸಿದರು.

ಪಾಲಿಕೆಯ ವ್ಯಾಪ್ತಿಯಲ್ಲಿ ನಕಲಿ ಪೌರ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿಂದೆ ಪಾಲಿಕೆ ಆಯುಕ್ತರಾಗಿದ್ದ ಮೇಜರ್‌ ಸಿದ್ದಲಿಂಗಯ್ಯ ಹಿರೇಮಠ ಅವರು ಕಾರ್ಯಚರಣೆ ನಡೆಸಿ ನಕಲಿ ಕಾರ್ಮಿಕರನ್ನು ಪತ್ತೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಾಲಿಕೆಯ ವಲಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ನಿಜವಾದ ಪೌರ ಕಾರ್ಮಿಕರಿಗೆ ಅನ್ಯಾಯವಾಗಲಿದೆ. ಅಲ್ಲದೆ ಪೌರ ಕಾರ್ಮಿಕರ ನೇಮಕಾತಿಯಲ್ಲಿ ನಕಲಿ ಪೌರ ಕಾರ್ಮಿರನ್ನು ನೇಮಕ ಮಾಡಲು ಹುನ್ನಾರ ನಡೆದಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಲಕ್ಷ್ಮೀ ಗುರಣ್ಣವರ, ದಲಿತ ಮುಖಂಡ ಪಿತಾಂಬರಪ್ಪ ಬಿಳಾರ, ಲಕ್ಷ್ಮೀ, ನೀಲಾ ಬಳೊಟಗಿ, ಶಿವಾನಂದ ಕಾಳೆ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ