ಆ್ಯಪ್ನಗರ

ಎರಡೂ ಕ್ಷೇತ್ರಗಳಲ್ಲಿ ನಮ್ಮದೇ ಗೆಲುವು: ಬಿಎಸ್‌ವೈ

ಹುಬ್ಬಳ್ಳಿ: ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು 10 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Vijaya Karnataka 20 May 2019, 5:00 am
ಹುಬ್ಬಳ್ಳಿ: ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು 10 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
Vijaya Karnataka Web our victory in both fields by
ಎರಡೂ ಕ್ಷೇತ್ರಗಳಲ್ಲಿ ನಮ್ಮದೇ ಗೆಲುವು: ಬಿಎಸ್‌ವೈ


ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ರಾಜ್ಯದಲ್ಲಿ ಬಿಜೆಪಿ ಪರ ಉತ್ತಮ ವಾತಾವರಣವಿದೆ. ಹೀಗಾಗಿ ಈ ಎರಡು ಉಪಚುನಾವಣೆಯಲ್ಲಿ ಬಿಜೆಪಿ ನೂರಕ್ಕೆ ನೂರರಷ್ಟು ಗೆಲ್ಲುತ್ತದೆ. ಚುನಾವಣೆಯಲ್ಲಿ ಹೆಚ್ಚು ಮತದಾನವಾದಷ್ಟು ಬಿಜೆಪಿಗೆ ಅನುಕೂಲವಾಗಲಿದೆ'' ಎಂದರು.

''ಕುಮಾರಸ್ವಾಮಿ ಹತಾಶೆಯಿಂದ ಮಾಧ್ಯಮಗಳ ವಿರುದ್ಧ ಮಾತನಾಡುತ್ತಿದ್ದಾರೆ. ಇತ್ತೀಚೆಗೆ ಅವರು ಸಂಯಮ ಕಳೆದುಕೊಳ್ಳುತ್ತಿದ್ದಾರೆ. ಮಾಧ್ಯಮದವರ ಮೇಲೆ ಆ ರೀತಿ ಮಾತನಾಡುವುದು ಸರಿಯಲ್ಲ. ಮಾಧ್ಯಮದೆದುರು ಮಾತನಾಡಲು ಆಗದಿದ್ದರೆ ಪ್ರತಿಕ್ರಿಯೆ ಕೊಡಲ್ಲ ಎಂದು ಹೇಳಬೇಕು. ಹತಾಶೆಯಿಂದ ಮಾತನಾಡುವುದರಿಂದ ಗೌರವ ಕಳೆದುಕೊಳ್ಳುತ್ತಾರೆ'' ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ