ಆ್ಯಪ್ನಗರ

ವಿದ್ಯಾರ್ಥಿಗಳಿಗೆ ತಾಳ್ಮೆ ಮುಖ್ಯ: ಶಿವಕುಮಾರ

ಹುಬ್ಬಳ್ಳಿ : ವಿದ್ಯಾರ್ಥಿ ಜೀವನದಲ್ಲಿ ಪರಿಶ್ರಮ, ತಾಳ್ಮೆ ಅತೀ ಮುಖ್ಯ. ಸ್ಪರ್ಧಾತ್ಮಕ ಜಗತ್ತಿಗೆ ಅನುಗುಣವಾಗಿ ವಿದ್ಯಾರ್ಥಿಗಳು ಮಾನಸಿಕ ಸಿದ್ದರಾಗಿ ಅಭ್ಯಾಸ ಮಾಡಬೇಕು ಎಂದು ಸಿಂಡಿಕೇಟ್‌ ಬ್ಯಾಂಕ್‌ ಕ್ಷೇತ್ರೀಯ ಪ್ರಬಂಧಕ ಕೆ. ಶಿವಕುಮಾರ ಹೇಳಿದರು.

Vijaya Karnataka 13 Jan 2019, 5:00 am
ಹುಬ್ಬಳ್ಳಿ : ವಿದ್ಯಾರ್ಥಿ ಜೀವನದಲ್ಲಿ ಪರಿಶ್ರಮ, ತಾಳ್ಮೆ ಅತೀ ಮುಖ್ಯ. ಸ್ಪರ್ಧಾತ್ಮಕ ಜಗತ್ತಿಗೆ ಅನುಗುಣವಾಗಿ ವಿದ್ಯಾರ್ಥಿಗಳು ಮಾನಸಿಕ ಸಿದ್ದರಾಗಿ ಅಭ್ಯಾಸ ಮಾಡಬೇಕು ಎಂದು ಸಿಂಡಿಕೇಟ್‌ ಬ್ಯಾಂಕ್‌ ಕ್ಷೇತ್ರೀಯ ಪ್ರಬಂಧಕ ಕೆ. ಶಿವಕುಮಾರ ಹೇಳಿದರು.
Vijaya Karnataka Web patience is important for students shivakumar
ವಿದ್ಯಾರ್ಥಿಗಳಿಗೆ ತಾಳ್ಮೆ ಮುಖ್ಯ: ಶಿವಕುಮಾರ


ಸಿಂಡಿಕೇಟ್‌ ಬ್ಯಾಂಕ್‌ ಕ್ಷೇತ್ರೀಯ ಕಾರ್ಯಾಲಯ ಮತ್ತು ಸಮೃದ್ಧಿ ಚಾರಿಟೇಬಲ್‌ ಟ್ರಸ್ಟ್‌ ಆಶ್ರಯದಲ್ಲಿ ಶನಿವಾರ ಆರ್‌.ಎನ್‌. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ನಡೆದ 2017-18ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಗೆ ಅಗ್ರಸ್ಥಾನ ಪಡೆದ ಕನ್ನಡ ಮತ್ತು ಆಂಗ್ಲ ಮಾಧ್ಯಮದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸದ್ಯದ ಪರಿಸ್ಥಿತಿ ತುಂಬಾ ಕಠಿಣವಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಭವಿಷ್ಯವನ್ನು ಉತ್ತಮಪಡಿಸಿಕೊಳ್ಳಲು ವಿದ್ಯಾರ್ಥಿಗಳು ಹೆಚ್ಚು ಪರಿಶ್ರಮ ವಹಿಸಬೇಕು. ವಿದ್ಯಾರ್ಥಿಗಳು ಈಗಿನಿಂದಲೇ ಹೆಚ್ಚೆಚ್ಚು ಅಭ್ಯಾಸ ಮಾಡುವುದನ್ನು ರೂಢಿ ಮಾಡಿಕೊಳ್ಳುವುದರ ಜತೆæಗೆ ಗುರು-ಹಿರಿಯರನ್ನು ಗೌರವಿಸಬೇಕು ಎಂದು ಹೇಳಿದರು.

ಅಧ್ಯಕ್ಷ ತೆ ವಹಿಸಿದ್ದ ಸಮೃದ್ಧಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಜಿ. ಎಲ್‌. ನಾಗೇಂದ್ರಪ್ಪ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಸಿಂಡಿಕೇಟ್‌ ಬ್ಯಾಂಕ್‌ ಸಹಯೋಗದೊಂದಿಗೆ ಟ್ರಸ್ಟ್‌ ಸಾಮಾಜಿಕ ಚಟುವಟಿಕೆ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ, ಆರೋಗ್ಯ ತಪಾಸಣಾ ಶಿಬಿರ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹೀಗೆ ಹಲವು ಸಮಾಜಮುಖಿ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ ಎಂದರು.

ಮುಂಬರುವ ದಿನಗಳಲ್ಲಿ ಸಮಾಜದ ಬಡಜನರ ಕಲ್ಯಾಣಕ್ಕಾಗಿ ಸಾಮೂಹಿಕ ವಿವಾಹ ಏರ್ಪಡಿಸುವ ಯೋಜನೆ ಮತ್ತು ಅನಾಥ ಮಕ್ಕಳಿಗೆ ಶಿಕ್ಷಣ ನೀಡುವುದು ಹೀಗೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಓದಿಗೆ ಅಷ್ಟೇ ಅಲ್ಲದೇ ಹೆಚ್ಚು ಅಂಕ ಪಡೆಯಲು ಸ್ಪೂರ್ತಿ ನೀಡಲಿದೆ ಎಂದು ತಿಳಿಸಿದರು.

ಸಿಂಡಿಕೇಟ್‌ ಬ್ಯಾಂಕ್‌ ದುರ್ಗದಬೈಲ್‌ ಶಾಖೆಯ ಮುಖ್ಯ ಪ್ರಬಂಧಕ ಗೋವಿಂದ ನಾಯ್ಕ ಮಾತನಾಡಿ, ಸಮಾಜದಲ್ಲಿ ಸಂಘ-ಸಂಸ್ಥೆಗಳು ಪ್ರಶಸ್ತಿ ಪುರಸ್ಕಾರ ನೀಡಿ ಪ್ರೋತ್ಸಾಹಿಸಿದರೆ ವಿದ್ಯಾರ್ಥಿಗಳ ಬದುಕಿಗೆ ಹೊಸ ನೆಲೆಯನ್ನು ಕಲ್ಪಿಸಿದಂತಾಗುತ್ತದೆ ಎಂದರು.

ಮಹೇಶ ಶಾನಭಾಗ ಪ್ರಾರ್ಥಿಸಿದರು. ಎನ್‌.ಎಚ್‌. ನರೇಗಲ್‌ ಸ್ವಾಗತಿಸಿದರು. ಸಿ.ಎಂ. ಚನ್ನಬಸಪ್ಪ ನಿರೂಪಿಸಿ, ವಂದಿಸಿದರು.

ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು

ಕುಂದಗೋಳ ತಾಲೂಕಿನ ಇಂಗಳಗಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಾದ ವಿಜಯಲಕ್ಷ್ಮೀ ಭದ್ರಾಪೂರ, ಪ್ರಮೋದಕುಮಾರ ತಂಬೂರ, ಹಿರೇಹರಕುಣಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಚೈತ್ರಾ ಮಡ್ಲಿ, ಅಳ್ನಾವರ ನ್ಯೂ ಇಂಗ್ಲಿಷ ಕಂಪೋಜಿಟ್‌ ಕಾಲೇಜಿನ ವಿದ್ಯಾರ್ಥಿ ನಂದೀಶ್ವರ ಬಳ್ಳಾರಿ, ಧಾರವಡದ ಪವನ ಇಂಗ್ಲಿಷ ಮಾಧ್ಯಮ ಶಾಲೆ ವಿದ್ಯಾರ್ಥಿ ಅಮೀತ ತಳವಾರ, ಹುಬ್ಬಳ್ಳಿಯ ಶ್ರೀಮತಿ ನಿರ್ಮಲಾ ಠಕ್ಕಟರ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಾದ ಅರ್ಚನಾ ಕೊಟಗಿ, ನಜ್ಮಾ ಕಮ್ಮಾರ ಹಾಗೂ ಧಾರವಾಡದ ಕರ್ನಾಟಕ ಹೈಸ್ಕೂಲ್‌ ವಿದ್ಯಾರ್ಥಿ ಮುಝಮಿಲ್‌ ಹುಸೇನ್‌ ಅಬುಬಕರ ಶಾಂತಗಿರಿ ಅವರನ್ನು ಸನ್ಮಾನಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ