ಆ್ಯಪ್ನಗರ

ಪತ್ರಿಕಾ ದಿನಾಚರಣೆ, ಪ್ರಶಸ್ತಿ ವಿತರಣೆ

ಹುಬ್ಬಳ್ಳಿ : ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜು.28ರಂದು ಬೆಳಗ್ಗೆ 11ಕ್ಕೆ ದೇಶಪಾಂಡೆನಗರದ ಸವಾಯಿಗಂಧರ್ವ ಹಾಲ್‌ದಲ್ಲಿ ಪತ್ರಿಕಾ ದಿನಾಚರಣೆ, ಪ್ರಶಸ್ತಿ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ.

Vijaya Karnataka 27 Jul 2019, 5:00 am
ಹುಬ್ಬಳ್ಳಿ : ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜು.28ರಂದು ಬೆಳಗ್ಗೆ 11ಕ್ಕೆ ದೇಶಪಾಂಡೆನಗರದ ಸವಾಯಿಗಂಧರ್ವ ಹಾಲ್‌ದಲ್ಲಿ ಪತ್ರಿಕಾ ದಿನಾಚರಣೆ, ಪ್ರಶಸ್ತಿ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ.
Vijaya Karnataka Web press release award distribution
ಪತ್ರಿಕಾ ದಿನಾಚರಣೆ, ಪ್ರಶಸ್ತಿ ವಿತರಣೆ


ಹು-ಧಾ ಪೂರ್ವ ಶಾಸಕ,ಲಿಡಕರ್‌ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಉದ್ಘಾಟಿಸಲಿದ್ದು, ಮುಖ್ಯ ಉಪನ್ಯಾಸಕರಾಗಿ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ ಆಗಮಿಸುವರು. ಅತಿಥಿಗಳಾಗಿ ಪೊಲೀಸ್‌ ಆಯುಕ್ತ ಎಂ.ಎನ್‌.ನಾಗರಾಜ, ಹು-ಧಾ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ ಪಾಲ್ಗೊಳ್ಳುವರು.

ಇದೇ ಸಂದರ್ಭದಲ್ಲಿ ಸಂಘದಿಂದ ಕೊಡಮಾಡುವ ಮೂರನೇ ಜೀವಮಾನ ಸಾಧನೆ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತರಾದ ಪಿ.ಆರ್‌.ಪಂಢರಿಯವರಿಗೆ ಪ್ರದಾನ ಮಾಡಲಾಗುವುದು.ಪುರಸ್ಕಾರವು 11 ಸಾವಿರ ರೂ.ನಗದು,ಪ್ರಶಸ್ತಿ ಫಲಕ ಒಳಗೊಂಡಿದೆ. ವಿವಿಧ ವಿಭಾಗಗಳಲ್ಲಿ ನೀಡಲಾಗುವ ಪ್ರಶಸ್ತಿ ಹಾಗೂ ಪ್ರತಿಭಾ ಪುರಸ್ಕಾರ ವಿತರಿಸಲಾಗುವುದು.ಸಂಘದ ಅಧ್ಯಕ್ಷ ಗಣಪತಿ ಗಂಗೊಳ್ಳಿ ಅಧ್ಯಕ್ಷ ತೆ ವಹಿಸುವರು ಎಂದು ಪ್ರಧಾನ ಕಾರ್ಯದರ್ಶಿ ಸುಶೀಲೇಂದ್ರ ಕುಂದರಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ