ಆ್ಯಪ್ನಗರ

ಡಿಸಿ ಕಚೇರಿ ಎದುರು ಪ್ರತಿಭಟನೆ

ಧಾರವಾಡ : ಕೊಲ್ಕತ್ತಾದ ಎನ್‌.ಆರ್‌.ಎಸ್‌.ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯ ಡಾ.ಪರಿಬಾಹ ಮುಖರ್ಜಿ ಮೇಲೆ ನಡೆದಿರುವ ಹಲ್ಲೆ ಖಂಡಿಸಿ ಧಾರವಾಡದ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

Vijaya Karnataka 15 Jun 2019, 5:00 am
ಧಾರವಾಡ : ಕೊಲ್ಕತ್ತಾದ ಎನ್‌.ಆರ್‌.ಎಸ್‌.ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯ ಡಾ.ಪರಿಬಾಹ ಮುಖರ್ಜಿ ಮೇಲೆ ನಡೆದಿರುವ ಹಲ್ಲೆ ಖಂಡಿಸಿ ಧಾರವಾಡದ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.
Vijaya Karnataka Web DRW-14RANGA05
ಕೊಲ್ಕತ್ತಾದ ಎನ್‌.ಆರ್‌.ಎಸ್‌.ವೈಧ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ವೈದ್ಯ ಡಾ.ಪರಿಬಾಹ ಮುಖರ್ಜಿ ಮೇಲೆ ನಡೆದಿರುವ ಹಲ್ಲೆ ಖಂಡಿಸಿ ಧಾರವಾಡದ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದರು ಪ್ರತಿಭಟನೆ ನಡೆಸಿದರು.


ಈ ಘಟನೆ ಕೊಲ್ಕತ್ತಾದಲ್ಲಿ ಘಟಿಸಿರಬಹುದು ಮುಂದೆ ಕರ್ನಾಟಕದಲ್ಲೂ ಆಗಬಹುದು. ಹೀಗಾಗಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗುವ ಮೂಲಕ ವೈದ್ಯರ ಮೇಲೆ ಹಲ್ಲೆ ಆದಾಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ವೈದ್ಯರ ಮೇಲೆ ನಿರಂತರ ಹಲ್ಲೆಗಳು ನಡೆದಾಗ ಸರಕಾರ ಕ್ರಮ ಕೈಗೊಳ್ಳದಿದ್ದರೆ ಇಡೀ ವೈದ್ಯ ಸಮೂದಾಯ ವೃತ್ತಿಗೆ ವಿದಾಯ ಹೇಳಿ ಹೋಗುವ ಸಂದರ್ಭ ಬರಬಹುದು. ಹೀಗಾಗಿ ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಡಾ.ಮೇಟಿ, ಡಾ.ಶ್ರೀನಿವಾಸ ಎಸ್‌. ಸೇರಿದಂತೆ ಇತರ ವೈದ್ಯರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ