ಆ್ಯಪ್ನಗರ

ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

ಧಾರವಾಡ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ವತಿಯಿಂದ ಬುಧವಾರ ಸಾಂಕೇತಿಕ ಧರಣಿ ನಡೆಸಲಾಯಿತು.

Vijaya Karnataka 18 Jul 2019, 5:00 am
ಧಾರವಾಡ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ವತಿಯಿಂದ ಬುಧವಾರ ಸಾಂಕೇತಿಕ ಧರಣಿ ನಡೆಸಲಾಯಿತು.
Vijaya Karnataka Web DRW-17SM-1
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.


ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಕೇಂದ್ರ ಸಂಘದ ಪದಾಧಿಕಾರಿಗಳು ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಗ್ರಾಮ ಲೆಕ್ಕಾಧಿಕಾರಿಗಳ ಸಮಸ್ಯೆ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನ ಆಗಿಲ್ಲ ಎಂದು ಸರಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ಲೆಕ್ಕಾಧಿಕಾರಿಗಳ ಕುಂದುಕೊರತೆ, ಮುಂಬಡ್ತಿಯಲ್ಲಿ ನಿರಂತರವಾಗಿ ಅನ್ಯಾಯವಾಗುವುದನ್ನು ತಪ್ಪಿಸಬೇಕು. ಅನ್ಯ ಇಲಾಖೆಯ ಕೆಲಸದ ಒತ್ತಡವನ್ನು ಗ್ರಾಮ ಲೆಕ್ಕಾಧಿಕಾರಿಗಳ ಮೇಲೆ ಹಾಕುವುದನ್ನು ಕಡಿಮೆ ಮಾಡಬೇಕು. ರಜಾ ದಿನಗಳಲ್ಲಿ ಇಲಾಖಾ ಕೆಲಸದ ಒತ್ತಡ ಹೇರುವುದನ್ನು ನಿಷೇಧಿಸಬೇಕು. ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಮತ್ತು ಗ್ರಾಮಲೆಕ್ಕಿಗರ ಜೇಷ್ಠತೆಗಳನ್ನು ಒಟ್ಟುಗೂಡಿಸಿ ಪದ ನವೀಕರಿಸಬೇಕು. ಗ್ರಾಮ ಲೆಕ್ಕಾಧಿಕಾರಿಗಳಿಗೆ ಜಾಬ್‌ಚಾರ್ಟ್‌ ನೀಡುವ ಬಗ್ಗೆ ತೀರ್ಮಾನಿಸಿದ್ದು, ಈ ಕೂಡಲೇ ಪರಿಷ್ಕೃತ ಜಾಬ್‌ಚಾರ್ಟ್‌ ನೀಡಬೇಕು ಎಂದು ಒತ್ತಾಯಿಸಿದರು.

ಗ್ರಾಮಲೆಕ್ಕಾಧಿಕಾರಿಗಳ ಪ್ರಯಾಣ ಭತ್ಯೆ ದರವನ್ನು 1000 ರೂ.ಗಳಿಗೆ ಹೆಚ್ಚಿಸಬೇಕು. ಗ್ರಾಮ ಸಹಾಯಕರ ಹುದ್ದೆಗಳನ್ನು ಕಾಯಂಗೊಳಿಸಬೇಕು. ಒಂದು ವೇಳೆ ಬೇಡಿಕೆ ಈಡೇರಿಸದೇ ಇದ್ದರೆ ಬರುವ ದಿನಗಳಲ್ಲಿ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಕುಟುಂಬ ಸಮೇತರಾಗಿ ಮಾಡಲಾಗುತ್ತದೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಜಿಲ್ಲಾಧ್ಯಕ್ಷ ಎಸ್‌.ಎಫ್‌. ಸಿದ್ದನಗೌಡ್ರ, ಪರಮಾನಂದ ಶಿವಳ್ಳಿಮಠ,ಮಹೇಶ ನಾಗವ್ವನವರ, ಕುಮಾರ ಪಡೆಪಣ್ಣನವರ ಸೇರಿದಂತೆ ಸಂಘದ ಪದಾಧಿಕಾರಿಗಳು, ಗ್ರಾಮ ಸಹಾಯಕ ಸಂಘದವರು ಪ್ರತಿಭಟನೆಯಲ್ಲಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ