ಆ್ಯಪ್ನಗರ

ಹೆಸರು, ಉದ್ದು ಬೆಂಬಲ ಬೆಲೆಗೆ ಖರೀದಿ

ಧಾರವಾಡ: 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಹಾಗೂ ಉದ್ದಿನಕಾಳನ್ನು ಜಿಲ್ಲೆಯ ರೈತರಿಂದ ಖರೀದಿಸಲು ರಾಜ್ಯ ಸರಕಾರ ಅನುಮತಿ ನೀಡಿದೆ. ಸೆ.21ರಿಂದ ರೈತರಿಂದ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ತಿಳಿಸಿದರು.

Vijaya Karnataka 19 Sep 2020, 5:00 am
ಧಾರವಾಡ: 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಹಾಗೂ ಉದ್ದಿನಕಾಳನ್ನು ಜಿಲ್ಲೆಯ ರೈತರಿಂದ ಖರೀದಿಸಲು ರಾಜ್ಯ ಸರಕಾರ ಅನುಮತಿ ನೀಡಿದೆ. ಸೆ.21ರಿಂದ ರೈತರಿಂದ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ತಿಳಿಸಿದರು.
Vijaya Karnataka Web 16NIJAGUNI2_21
ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಬುಧವಾರ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಅವರು ಜಿಲ್ಲಾಮಟ್ಟದ ಟಾಸ್ಕ್‌ಫೋರ್ಸ್‌ ಸಮಿತಿ ಸಭೆ ನಡೆಸಿದರು.


ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಬುಧವಾರ ಜಿಲ್ಲಾಮಟ್ಟದ ಟಾಸ್ಕ್‌ಫೋರ್ಸ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಫ್‌ಎಕ್ಯೂ ಗುಣಮಟ್ಟದ ಹೆಸರು ಕಾಳನ್ನು ಪ್ರತಿ ಕ್ವಿಂಟಲ್‌ಗೆ 7,196 ರೂ.ಗಳಂತೆ ಪ್ರತಿ ರೈತರಿಂದ ಗರಿಷ್ಠ 4 ಕ್ವಿಂ. ಖರೀದಿಸಲಾಗುವುದು. ಎಫ್‌ಎಕ್ಯೂ ಗುಣಮಟ್ಟದ ಉದ್ದಿನ ಕಾಳನ್ನು ಪ್ರತಿ ಕ್ವಿಂಟಲ್‌ಗೆ 6,000 ರೂ.ಗಳಂತೆ ಪ್ರತಿ ರೈತರಿಂದ ಎಕರೆಗೆ 3 ಕ್ವಿಂಟಲ್‌ ಅಥವಾ ಗರಿಷ್ಠ 6 ಕ್ವಿಂಟಲ್‌ ಖರೀದಿಸಲು ಸರಕಾರ ಸೂಚಿಸಿದೆ ಎಂದು ಹೇಳಿದರು.

ಜಿಲ್ಲಾಟಾಸ್ಕ್‌ಫೋರ್ಸ್‌ ಸಮಿತಿಯು ನಾಫೆಡ್‌, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ, ಕೃಷಿ, ತೋಟಗಾರಿಕೆ, ರೇಷ್ಮೆ, ಸಹಕಾರ ಇಲಾಖೆಗಳು ಹಾಗೂ ಸಂಬಂಧಿಸಿದ ಖರೀದಿ ಏಜೆನ್ಸಿಗಳೊಂದಿಗೆ ಸೆ.18ರಂದು ಸಮನ್ವಯ ಸಭೆ ನಡೆಸಿ, ಗ್ರೇಡರ್‌ಗಳ ನಿಯೋಜನೆ, ತಂತ್ರಾಂಶ ಅಭಿವೃದ್ಧಿ ಮತ್ತಿತರ ವಿಷಯಗಳ ಕುರಿತು ಎಲ್ಲಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಕ್ತ ಸಲಹೆ, ಮಾರ್ಗದರ್ಶನ ನೀಡಿ ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ರೈತರಿಗೆ ಅಗತ್ಯವಿರುವ ಕಡೆ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಎಫ್‌ಎಕ್ಯೂ ಗುಣಮಟ್ಟದ ಫಸಲು ಹಾಗೂ ನೋಂದಣಿ, ಖರೀದಿ ಪ್ರಕ್ರಿಯೆ ಬಗ್ಗೆ ರೈತರಿಗೆ ಸಮರ್ಪಕವಾದ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕ ಡಾ.ಪ್ರಭಾಕರ ಅಂಗಡಿ ಮಾತನಾಡಿ, ಖರೀದಿ ಕೇಂದ್ರಗಳಲ್ಲಿಖರೀದಿಸುವ ಪೂರ್ವದಲ್ಲಿರೈತರ ನೋಂದಣಿಯನ್ನು ಎನ್‌ಐಸಿ ಸಂಸ್ಥೆಯು ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಬೆಳೆಗಳ ಉತ್ಪನ್ನವನ್ನು ಖರೀದಿಸಲು ಸಿದ್ಧಪಡಿಸಿರುವ ತಂತ್ರಾಂಶವನ್ನು ಸೂಕ್ತವಾಗಿ ಉನ್ನತೀಕರಿಸಿ ಹೆಸರುಕಾಳು ಹಾಗೂ ಉದ್ದಿನಕಾಳು ಬೆಂಬಲ ಬೆಲೆ ಯೋಜನೆಯಡಿ ನೋಂದಾಯಿಸಲು ಸರಕಾರ ಸೂಚಿಸಿದೆ. ಎನ್‌ಐಸಿ ಸಂಸ್ಥೆಯು ಅಭಿವೃದ್ಧಿಪಡಿಸಿರುವ ನೋಂದಣಿ ತಂತ್ರಾಂಶವು ಈಗಾಗಲೇ ಫಾರ್ಮರ್ಸ್‌ ರಿಜಿಸ್ಪ್ರೇಷನ್‌ ಮತ್ತು ಯುನಿಫೈಡ್‌ ಬೆನಿಫಿಸಿಯರಿ ಇನ್ಫಾರ್ಮೇಷನ್‌ ಸಿಸ್ಟಂ ತಂತ್ರಾಂಶದೊಅದಿಗೆ ಸಂಯೋಜಿಸಲಾಗಿದೆ. ಈ ದತ್ತಾಂಶದಲ್ಲಿರೈತರಿಗೆ ಸಂಬಂಧಿಸಿದ ಭೂಮಿ, ಆರ್ಧಾ, ಬೆಳೆ ಸಮೀಕ್ಷೆ ವಿವರಗಳನ್ನು ತಾಳೆ ಮಾಡಿ ಸಂಗ್ರಹಿಸಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಿದ ನಂತರ ಎನ್‌ಐಸಿ ತಂತ್ರಾಂಶದಿಂದ ನಾಫೆಡ್‌ ಸಂಸ್ಥೆಯ ತಂತ್ರಾಂಶಕ್ಕೆ ರೈತರ ನೋಂದಣಿ ಮಾಹಿತಿ ಒದಗಿಸಲಾಗುವುದು. ನಾಫೆಡ್‌ ಸಂಸ್ಥೆಯು ತಮ್ಮ ತಂತ್ರಾಂಶದಲ್ಲಿಈ ಮಾಹಿತಿಯನ್ನು ಬಳಸಿ ರೈತರಿಂದ ಹೆಸರು ಹಾಗೂ ಉದ್ದಿನ ಕಾಳನ್ನು ಖರೀದಿ ಕೇಂದ್ರಗಳ ಮೂಲಕ ಖರೀದಿಸಲಿದೆ. ಆಧಾರ್‌ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್‌ ಖಾತೆಗೆ ಉತ್ಪನ್ನದ ಮೌಲ್ಯವು ನೇರ ವರ್ಗಾವಣೆ ಮೂಲಕ ಜಮೆ ಆಗಲಿದೆ ಎಂದರು.

ಜಂಟಿ ಕೃಷಿ ನಿರ್ದೇಶಕ ರಾಜಶೇಖರ ಬಿಜಾಪುರ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಸದಾಶಿವ ಮರ್ಜಿ, ತೋಟಗಾರಿಕೆ ಉಪನಿರ್ದೇಶಕ ಕಾಶಿನಾಥ ಸೇರಿದಂತೆ ಸಹಕಾರ ಇಲಾಖೆ, ಕೃಷಿ ಮಾರಾಟ ಮಂಡಳಿಯ ಅಧಿಕಾರಿಗಳು ಸಭೆಯಲ್ಲಿಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ