ಆ್ಯಪ್ನಗರ

ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಪುರಸ್ಕಾರ

ಧಾರವಾಡ : ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಪ್ರತಿಷ್ಠಾನ ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿಸೆ. 22ರಂದು ಬೆಳಗ್ಗೆ 10ಕ್ಕೆ ಇಲ್ಲಿನ ಆಲೂರು ವೆಂಕಟರಾವ್‌ ಭವನದಲ್ಲಿಶಿಕ್ಷಕರ ದಿನಾಚರಣೆ ನಿಮಿತ್ತ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಟ್ರಸ್ಟ್‌ ಅಧ್ಯಕ್ಷ, ನಿವೃತ್ತ ಜಿಲ್ಲಾನ್ಯಾಯಾಧೀಶ ಶೇಖರಗೌಡ ಪಾಟೀಲ ತಿಳಿಸಿದರು.

Vijaya Karnataka 21 Sep 2019, 5:00 am
ಧಾರವಾಡ : ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಪ್ರತಿಷ್ಠಾನ ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿಸೆ. 22ರಂದು ಬೆಳಗ್ಗೆ 10ಕ್ಕೆ ಇಲ್ಲಿನ ಆಲೂರು ವೆಂಕಟರಾವ್‌ ಭವನದಲ್ಲಿಶಿಕ್ಷಕರ ದಿನಾಚರಣೆ ನಿಮಿತ್ತ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಟ್ರಸ್ಟ್‌ ಅಧ್ಯಕ್ಷ, ನಿವೃತ್ತ ಜಿಲ್ಲಾನ್ಯಾಯಾಧೀಶ ಶೇಖರಗೌಡ ಪಾಟೀಲ ತಿಳಿಸಿದರು.
Vijaya Karnataka Web reward for talented poor students
ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಪುರಸ್ಕಾರ

ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರ ಎಡಿಆರ್‌ ಸಭಾಂಗಣದಲ್ಲಿಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಡಾ.ಶಿವರಾಜ ವಿ.ಪಾಟೀಲ ಕಾಯಕಯೋಗಿ ಮತ್ತು ನ್ಯಾಯರತ್ನವೆಂದೇ ಹೆಸರುವಾಸಿ ಆಗಿದ್ದಾರೆ. ಮನುಕುಲಕ್ಕೆ ಆದರ್ಶಪ್ರಾಯವಾಗಿರುವ ಸಂದೇಶ ಸಾರಲು ಅವರ ಹೆಸರಿನ ಟ್ರಸ್ಟ್‌ ನಿರಂತರ ಚಟುವಟಿಕೆ ಹಮ್ಮಿಕೊಳ್ಳುತ್ತಿದೆ. ಈ ಬಾರಿ ಶಿವರಾಜ ಪಾಟೀಲ ಅವರಿಗೆ ವಿದ್ಯೆ ಕಲಿಸಿದ ನಿವೃತ್ತ ಶಿಕ್ಷಕ ಕುಷ್ಟಗಿ ತಾಲೂಕಿನ ಸಾಸ್ವಿಹಾಳ ಗ್ರಾಮದ 92 ವರ್ಷದ ಶರಣಯ್ಯ ಹಿರೇಮಠ ಅವರಿಗೆ ಸನ್ಮಾನ, ಐವರು ಬಡಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ 10,000ರೂ. ನಗದು ಪುರಸ್ಕಾರ ಹಾಗೂ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಮುರಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಇಳಕಲ್‌ನ ವಿಜಯ ಮಹಾಂತೇಶ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ನ್ಯಾ. ಶಿವರಾಜ ಪಾಟೀಲ ಅಧ್ಯಕ್ಷತೆ ವಹಿಸುವರು. ನ್ಯಾಯಮೂರ್ತಿಗಳಾದ ಕೆ. ನಟರಾಜನ್‌, ಪಿ.ಜಿ.ಎಂ. ಪಾಟೀಲ, ಕರ್ನಾಟಕ ಕಾನೂನು ವಿ.ವಿ. ಕುಲಪತಿ ಈಶ್ವರ ಭಟ್‌, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಬಿ. ಚೆಟ್ಟಿ, ಪ್ರಧಾನ ಜಿಲ್ಲಾಹಾಗೂ ಸತ್ರ ನ್ಯಾಯಾಧೀಶರಾದ ಈಶಪ್ಪ ಕೆ. ಭೂತೆ, ಜಿಲ್ಲಾಧಿಕಾರಿ ದೀಪಾ ಎಂ. , ಜಿಪಂ ಸಿಇಓ ಡಾ. ಬಿ.ಸಿ. ಸತೀಶ್‌ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್‌ ಚಿಣ್ಣನ್ನವರ, ಟ್ರಸ್ಟ್‌ ಸದಸ್ಯರಾದ ಬಿ.ಕೆ. ನಾಯಕ್‌, ಬಿ.ಎಸ್‌. ಸಂಗಟಿ, ಮಂಜುನಾಥ ಡೊಳ್ಳಿನ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ