ಆ್ಯಪ್ನಗರ

ಶೀರೂರು ಶ್ರೀಯವರದು ಸಹಜ ಸಾವು: ಪೇಜಾವರ ಶ್ರೀ

ಶೀರೂರು ಲಕ್ಷ್ಮೀವರತೀರ್ಥ ಶ್ರೀಗಳ ಅಗಲಿಕೆ ನೋವು ತಂದಿದೆ. ವಿಷ ಪ್ರಾಶನದ ಬಗ್ಗೆ ಮಾಹಿತಿಯಿಲ್ಲ ಎಂದು ಪೇಜಾವರ ಶ್ರೀ ಹೇಳಿದ್ದಾರೆ.

Vijaya Karnataka Web 19 Jul 2018, 2:43 pm
ಹುಬ್ಬಳ್ಳಿ: ಶೀರೂರು ಲಕ್ಷ್ಮೀವರತೀರ್ಥ ಶ್ರೀಗಳ ಅಗಲಿಕೆ ನೋವು ತಂದಿದೆ. ವಿಷ ಪ್ರಾಶನದ ಬಗ್ಗೆ ಮಾಹಿತಿಯಿಲ್ಲ ಎಂದು ಪೇಜಾವರ ಶ್ರೀ ಹೇಳಿದ್ದಾರೆ.
Vijaya Karnataka Web pejawatrsri 4


ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಕ್ಷ್ಮೀವರತೀರ್ಥ ಶ್ರೀ ಎಲ್ಲಿ ಆಹಾರ ಸ್ವೀಕಾರ ಮಾಡಿದ್ದಾರೋ ಏನೋ ಗೊತ್ತಿಲ್ಲ. ಲಿವರ್, ಕಿಡ್ನಿ ಫೇಲ್ ಆಗಿತ್ತು ಎಂದು ಮಾಹಿತಿ ಬಂದಿದೆ. ಅವರಿಗೆ ವಿಷ ಪ್ರಾಶನ ಯಾರು ಮಾಡುತ್ತಾರೆ ಎಂದು ಪ್ರಶ್ನಿಸಿದರು.

ಶೀರೂರು ಸ್ವಾಮೀಜಿಗಳಿಗೆ ವಿಷ ನೀಡುವ ಪ್ರಮೇಯವೇ ಇಲ್ಲ. ಸ್ವಾಮಿಗಳನ್ನು ಯಾರೂ ಕೊಲೆ ಮಾಡುವುದಿಲ್ಲ. ಅವರನ್ನು ಕೊಲೆ ಮಾಡಿ ಪಟ್ಟಕ್ಕೆ ಏರುವ ಉದ್ದೇಶ ಯಾರಿಗೂ ಇಲ್ಲ. ಕಾರಣ ಇಲ್ಲದೆ ಯಾರ ಮೇಲೂ ಆರೋಪ ಮಾಡಬಾರದು. ಅವರದು ಕೊಲೆ ಎಂಬುದು ಶುದ್ದ ಸುಳ್ಳು. ಅವರದು ಒಂದು ಸಹಜ ಸಾವು. ಅವರ ಸಾವಿನ ಬಗ್ಗೆ ಸಂಶಯಿಸುವುದು ಸರಿಯಲ್ಲ. ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯ ಪೀಡಿತರಾಗಿದ್ದರು ಎಂದರು.

ರಾತ್ರಿ ಉಡುಪಿಗೆ ಹೋಗುತ್ತೇನೆ, ಅಲ್ಲೇ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸುವ ಕುರಿತು ತೀರ್ಮಾನಿಸುತ್ತೇನೆ. ಶೀರೂರು ಮಠದ ಭಕ್ತರಿಂದ ನನಗೆ ಯಾವುದೇ ಕರೆ ಬಂದಿಲ್ಲ. ಸೋದೆ ಮಠದವರು ಉತ್ತರಾಧಿಕಾರಿಯನ್ನು ನೇಮಕ ಮಾಡುತ್ತಾರೆ. ಸಲಹೆ ಕೇಳಿದರೆ ಹೇಳುತ್ತೇನೆ ಎಂದು ಪೇಜಾವರ ಶ್ರೀ ಹೇಳಿದರು.

ಫುಡ್ ಪಾಯ್ಸನ್ ಆಗಿದೆ ಎಂದು ಅವರ ಅಣ್ಣ ನನಗೆ ಫೋನ್ ಮಾಡಿ ಹೇಳಿದ್ದಾರೆ. ಪಟ್ಟದ್ದೇವರ ವಿಷಯಕ್ಕೂ ಇದಕ್ಕೂ ಸಂಬಂಧವಿಲ್ಲ. ನಮಗೂ ಶೀರೂರು ಶ್ರೀಗಳ ಜತೆಗೂ ಸಂಪರ್ಕ ಇರಲಿಲ್ಲ. ಅವರ ಕೆಲವು ಹೇಳಿಕೆಗಳ ಬಗ್ಗೆ ನಮಗೆ ಭಿನ್ನಾಭಿಪ್ರಾಯವಿತ್ತು. ವೈಯಕ್ತಿಕವಾಗಿ ಪ್ರೀತಿ ವಿಶ್ವಾಸವಿತ್ತು ಎಂದು ಪೇಜಾವರ ಶ್ರೀ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ