ಆ್ಯಪ್ನಗರ

ಎಸ್‌ಡಿಎಂ ಬೆನ್ನಲ್ಲೇ ಹುಬ್ಬಳ್ಳಿಯ ರೋಟರಿ ಶಾಲೆಯ ವಿದ್ಯಾರ್ಥಿಗೂ ಕೊರೊನಾ! ಶಾಲೆಗೆ ರಜೆ ಘೋಷಣೆ

ಕೊರೊನಾ ಪಾಸಿಟಿವ್ ದೃಢಪಟ್ಟ ವಿದ್ಯಾರ್ಥಿಯ ಅಕ್ಕ ಎಸ್‌ಡಿಎಂ ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿಯಾಗಿದ್ದು, ಆಕೆಯಿಂದ ವಿದ್ಯಾರ್ಥಿಗೆ ಕೋವಿಡ್‌ ಸೋಂಕು ಹರಡಿದೆ ಎನ್ನಲಾಗಿದೆ. ರೋಟರಿ ಶಾಲೆ ಆಡಳಿತ ಮಂಡಳಿ ಈಗಾಗಲೇ ಆದರ್ಶನಗರ ಹೈಸ್ಕೂಲ್ ವಿಭಾಗದ ಎಲ್ಲ ತರಗತಿಗಳ ವಿದ್ಯಾರ್ಥಿಗಳ ಪಾಲಕರಿಗೆ ಮಕ್ಕಳ ಆರ್‌ಟಿಪಿಸಿಆರ್ ಮಾಡಿಸುವಂತೆ ಸಹ ಮನವಿ ಮಾಡಿದೆ ಎಂದು ಎನ್‌ ಎಲ್‌ ಇ ಸಂಸ್ಥೆಯ ಗೌರವ ಕಾರ್ಯದರ್ಶಿ ರಾಜಾ ದೇಸಾಯಿ ತಿಳಿಸಿದ್ದಾರೆ.

Vijaya Karnataka Web 1 Dec 2021, 2:59 pm
ಹುಬ್ಬಳ್ಳಿ: ಧಾರವಾಡದ ಎಸ್‌ಡಿಎಂ ವೈದ್ಯಕೀಯ ಮೆಡಿಕಲ್ ಕಾಲೇಜಿನ ನೂರಾರು ವಿದ್ಯಾರ್ಥಿಗಳಿಗೆ ಕೋವಿಡ್‌ ಸೋಂಕು ದೃಢಪಟ್ಟ ಬೆನ್ನಲ್ಲೇ ಇತ್ತ ಹುಬ್ಬಳ್ಳಿಯ ಆದರ್ಶ ನಗರದ ರೋಟರಿ ಶಾಲೆಯ ವಿದ್ಯಾರ್ಥಿಗೆ ಕೂಡ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
Vijaya Karnataka Web coronavirus 6


ಕಳೆದ ಎರಡು ಮೂರು ದಿನಗಳಿಂದ ರೋಟರಿ ಶಾಲೆಗೆ ಗೈರಾಗಿದ್ದ 9ನೇ ತರಗತಿಯ ವಿದ್ಯಾರ್ಥಿಗೆ ಇಂದು ಕೋವಿಡ್ ಖಚಿತಪಟ್ಟಿದ್ದು ಈ ಹಿನ್ನೆಲೆಯಲ್ಲಿ ಪಾಲಕರು ಶಾಲೆಗೆ ಈ ವಿಷಯ ತಿಳಿಸಿದ ತಕ್ಷಣ ಆಡಳಿತ ಮಂಡಳಿ ಇಂದು ಎಲ್ಲ ವಿದ್ಯಾರ್ಥಿಗಳನ್ನು ವಾಪಸ್ ಮನೆಗೆ ಕಳುಹಿಸಿತಲ್ಲದೇ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ವಿಷಯ ತಿಳಿಸಿ ಮುಂದಿನ ಸೋಮವಾರದವರೆಗೆ ಎಲ್ಲ ತರಗತಿಗಳಿಗೂ ರಜೆ ನೀಡಲಾಗುವುದು ಎಂದು ಘೋಷಿಸಿದೆ.

ಕೊರೊನಾ ಪಾಸಿಟಿವ್ ದೃಢಪಟ್ಟ ವಿದ್ಯಾರ್ಥಿಯ ಅಕ್ಕ ಎಸ್‌ಡಿಎಂ ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿಯಾಗಿದ್ದು, ಆಕೆಯಿಂದ ವಿದ್ಯಾರ್ಥಿಗೆ ಕೋವಿಡ್‌ ಸೋಂಕು ಹರಡಿದೆ ಎನ್ನಲಾಗಿದೆ. ರೋಟರಿ ಶಾಲೆ ಆಡಳಿತ ಮಂಡಳಿ ಈಗಾಗಲೇ ಆದರ್ಶನಗರ ಹೈಸ್ಕೂಲ್ ವಿಭಾಗದ ಎಲ್ಲ ತರಗತಿಗಳ ವಿದ್ಯಾರ್ಥಿಗಳ ಪಾಲಕರಿಗೆ ಮಕ್ಕಳ ಆರ್‌ಟಿಪಿಸಿಆರ್ ಮಾಡಿಸುವಂತೆ ಸಹ ಮನವಿ ಮಾಡಿದೆ ಎಂದು ಎನ್‌ ಎಲ್‌ ಇ ಸಂಸ್ಥೆಯ ಗೌರವ ಕಾರ್ಯದರ್ಶಿ ರಾಜಾ ದೇಸಾಯಿ ತಿಳಿಸಿದ್ದಾರೆ.
ಧಾರವಾಡದ SDM ಮೆಡಿಕಲ್‌ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್!
ಎಸ್‌ಡಿಎಂ ಮೆಡಿಕಲ್ ಕಾಲೇಜಿನ 182 ಜನರಲ್ಲಿ ಸೋಂಕು
ಧಾರವಾಡದ ಎಸ್‌ಡಿಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ನವೆಂಬರ್‌ 25ರವರೆಗೆ ಒಟ್ಟು 182 ಜನರಲ್ಲಿ ಕಾಣಿಸಿಕೊಂಡಿತ್ತು. ನ.17 ರಂದು ಕಾಲೇಜಿನ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲವು ಪಾಲಕರು ಕೂಡ ಭಾಗಿಯಾಗಿದ್ದರು. ಎಸ್ ಡಿ ಎಂ ಆವರಣದ 690 ಜನರನ್ನು ಆರ್ ಟಿ ಪಿ ಸಿ ಆರ್ ಹಾಗೂ ಆರ್ ಎ ಟಿ ತಪಾಸಣೆಗೆ ಒಳಪಡಿಸಲಾಗಿದೆ. ಕಿಮ್ಸ್, ನಿಮ್ಹಾನ್ಸ್ ಹಾಗೂ ಎಸ್ ಡಿಎಂ ನ ಕೋವಿಡ್ ಪ್ರಯೋಗಾಲಯಗಳಲ್ಲಿ ಈ ಮಾದರಿಗಳನ್ನು ಪರೀಕ್ಷಿಸಲಾಗಿದೆ. 116 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿರುವುದರಿಂದ ಯಾರಲ್ಲಿಯೂ ರೋಗದ ಗಂಭೀರ ಸ್ವರೂಪದ ಲಕ್ಷಣಗಳಿಲ್ಲ ಎಂದು ತಿಳಿದು ಬಂದಿದೆ. ಸದ್ಯ ಕೋವಿಡ್ ಕಾಣಿಸಿಕೊಂಡಿರುವ ಅನೇಕ ವಿದ್ಯಾರ್ಥಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುತ್ತಿದ್ದರೆ, ಇನ್ನೂ ಅನೇಕ ಸೋಂಕಿತರನ್ನು ಐಸೋಲೇಷನ್‌ನಲ್ಲಿ ಇಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ