ಆ್ಯಪ್ನಗರ

ಆ.3ರವರೆಗೆ ಟಾಟಾ ಮಾರ್ಕೊಪೊಲೊ ಬಂದ್‌

ಆ3ರವರೆಗೆ ಟಾಟಾ ಮಾರ್ಕೊಪೊಲೊ ಬಂದ್‌ವಿಕ ಸುದ್ದಿಲೋಕ ಧಾರವಾಡನಗರದ ಹೊರವಲಯದ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿಇರುವ ಟಾಟಾ ಮಾರ್ಕೊಪೊಲೊ ಕಂಪನಿಯನ್ನು ಜು...

Vijaya Karnataka 27 Jul 2020, 5:00 am
ಧಾರವಾಡ: ನಗರದ ಹೊರವಲಯದ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿಇರುವ ಟಾಟಾ ಮಾರ್ಕೊಪೊಲೊ ಕಂಪನಿಯನ್ನು ಜು. 26ರಿಂದ ಆಗಸ್ಟ್‌ 3 ರವರೆಗೆ ಮುಚ್ಚಲು ಕಾರ್ಖಾನೆ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಕುರಿತು ಶನಿವಾರ ರಾತ್ರಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಅವರೊಂದಿಗೆ ಕಂಪನಿಯ ಸಿಇಓ ಸಭೆ ನಡೆಸಿದ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ.
Vijaya Karnataka Web 26MALLU1_21
ಧಾರವಾಡ ಡಿಮ್ಹಾನ್ಸ್‌ನಲ್ಲಿಆರಂಭಿಸಿರುವ ವಿಡಿಯೋ ಸಂವಾದದ ಮೂಲಕ ಆಪ್ತ ಸಮಾಲೋಚನಾ ಕೇಂದ್ರ.


ಕಂಪನಿಯ ಕಾರ್ಮಿಕರಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಸ್ಯಾನಿಟೈಸೇಷನ್‌, ಕೋವಿಡ್‌ ತಪಾಸಣೆ ನಿರಂತರವಾಗಿ ನಡೆಸಲಾಗುತ್ತಿದೆ. ಕಾರ್ಮಿಕರು, ಸಿಬ್ಬಂದಿ ಹಾಗೂ ಕಂಪನಿಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಎಂಟು ದಿನಗಳ ಕಾಲ ಕೈಗಾರಿಕಾ ಘಟಕದ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ಕಾರ್ಖಾನೆ ಆಡಳಿತ ಮಂಡಳಿಯು ಸ್ವಯಂ ಪ್ರೇರಿತರಾಗಿ ನಿರ್ಣಯಿಸಿದ್ದಾರೆ.

ಧೃತಿಗೆಡದಿರಲು ಮನವಿ:
ಕೊರೊನಾ ಒಂದು ದುರ್ಬಲ ವೈರಾಣುವಾಗಿದೆ, ಸರಳ ಚಿಕಿತ್ಸೆ ಮೂಲಕ ಸೋಂಕು ನಿವಾರಿಸಿಕೊಳ್ಳಬಹುದಾಗಿದೆ. ಕೊರೊನಾ ಭಯದಿಂದ ಯಾರೊಬ್ಬರೂ ಧೃತಿಗೆಡಬಾರದು, ಆತ್ಮಸೈ್ಥರ್ಯ ಕಳೆದುಕೊಳ್ಳಬಾರದು. ಸೋಂಕಿತರಿಗೆ ಮತ್ತು ಪ್ರಾಥಮಿಕ ಸಂಪರ್ಕ ಹೊಂದಿದವರಿಗೆ ನಿರಂತರವಾಗಿ ದೂರವಾಣಿ ಆಪ್ತಸಮಾಲೋಚನೆ ನಡೆಸಲಾಗುತ್ತಿದೆ. ದೂರವಾಣಿ ಸಂಪರ್ಕ ಲೈನ್‌ಗಳ ಸಂಖ್ಯೆ ಇನ್ನಷ್ಟು ಹೆಚ್ಚಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ತಿಳಿಸಿದ್ದಾರೆ.

ಧಾರವಾಡ ಮಾನಸಿಕ ಆರೋಗ್ಯ ವಿಜ್ಞಾನ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾನಸಿಕ ಆರೋಗ್ಯ ಮತ್ತು ಆಯುಷ್‌ ವಿಭಾಗಗಳ ಮೂಲಕ ಮನೋ ಸ್ವಾಸ್ಥ್ಯ ನಿರ್ವಹಣೆಗೆ ವಿಡಿಯೋ ಸಂವಾದದ ಮೂಲಕ ಅಗತ್ಯ ಸಲಹೆಗಳನ್ನು ನೀಡಲಾಗುತ್ತಿದೆ. ಜೊತೆಗೆ ಯೋಗಾಭ್ಯಾಸ ಮಾಡಿಸಲಾಗುತ್ತಿದೆ. ಜಿಲ್ಲೆಯ ಜನತೆ ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ