ಆ್ಯಪ್ನಗರ

ಕೆಪಿಸಿಸಿ ಆಯ್ಕೆ ಹೈಕಮಾಂಡ್‌ಗೆ ಬಿಟ್ಟಿದ್ದು: ಎಸ್‌.ಆರ್‌. ಪಾಟೀಲ

ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಹೈಕಮಾಂಡ್‌ ಅಂಗಳದಲ್ಲಿದ್ದು, ಶೀಘ್ರ ತೀರ್ಮಾನ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ...

Vijaya Karnataka 6 Jan 2020, 7:07 pm
ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಹೈಕಮಾಂಡ್‌ ಅಂಗಳದಲ್ಲಿದ್ದು, ಶೀಘ್ರ ತೀರ್ಮಾನ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ ಹೇಳಿದರು.
Vijaya Karnataka Web the choice of kpcc is up to the high command sr patil
ಕೆಪಿಸಿಸಿ ಆಯ್ಕೆ ಹೈಕಮಾಂಡ್‌ಗೆ ಬಿಟ್ಟಿದ್ದು: ಎಸ್‌.ಆರ್‌. ಪಾಟೀಲ


ನಗರದಲ್ಲಿಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಅಧ್ಯಕ್ಷರ ಹುದ್ದೆಗೆ ಹಲವರು ಆಕಾಂಕ್ಷಿಗಳಿದ್ದಾರೆ. ಯಾರೂ ಸನ್ಯಾಸಿಗಳಲ್ಲ. ತ್ವರಿತ ಗತಿಯಲ್ಲಿನಾಯಕರ ಆಯ್ಕೆ ಪ್ರಕ್ರಿಯೆ ಮುಗಿಸುವಂತೆ ಒಮ್ಮತದ ಅಭಿಪ್ರಾಯಗಳನ್ನು ಹೈಕಮಾಂಡ್‌ಗೆ ತಿಳಿಸಲಾಗಿದೆ'' ಎಂದರು.

''ಪಕ್ಷದಲ್ಲಿಒಗ್ಗಟ್ಟಿದೆ. ಯಾರು ಯಾರ ಪರ ಹಾಗೂ ವಿರೋಧ ಇಲ್ಲ, ಮೂಲ ಮತ್ತು ವಲಸೆ ಕಾಂಗ್ರೆಸ್‌ ಎನ್ನುವ ಪ್ರಶ್ನೆಯೇ ಇಲ್ಲ'' ಎಂದು ಸ್ಪಷ್ಟಪಡಿಸಿದರು.

''ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಸ್ವೀಕಾರ ಮಾಡುವುದು ಬಿಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು, ಈ ನಿಟ್ಟಿನಲ್ಲಿಹೈಕಮಾಂಡ್‌ ಪರಿಶೀಲನೆ ನಡೆಸುತ್ತಿದೆ. ಏತನ್ಮಧ್ಯೆ ಸಿದ್ದರಾಮಯ್ಯ ಅವರನ್ನೇ ಮುಂದುವರಿಸುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. ಅಂತಿಮವಾಗಿ ಹೈಕಮಾಂಡ್‌ ತೀರ್ಮಾನ ಕೈಗೊಳ್ಳಲಿದೆ'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ