ಆ್ಯಪ್ನಗರ

ಪ್ರಧಾನಿ ಮೋದಿ ಭೇಟಿಗೆ ದೆಹಲಿಗೆ ತೆರಳಿದ ಮಠಾಧೀಶರು

ಹುಬ್ಬಳ್ಳಿ : ಕಾಳಿ ನದಿ ನೀರನ್ನು ಏತ ನೀರಾವರಿ ಯೋಜನೆ ಮೂಲಕ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಿಗೆ ಹರಿಸುವ ಮಹತ್ವಾಕಾಂಕ್ಷೆಯ ಯೋಜನೆ ಜಾರಿಗೊಳಿಸುವಂತೆ ಜುಲೈ 4 ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯರನ್ನು ಭೇಟಿಯಾಗಿ ಮನವರಿಕೆ ಮಾಡಲಾಗುವುದು ಎಂದು ಕೂಡಲಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

Vijaya Karnataka 4 Jul 2019, 5:00 am
ಹುಬ್ಬಳ್ಳಿ : ಕಾಳಿ ನದಿ ನೀರನ್ನು ಏತ ನೀರಾವರಿ ಯೋಜನೆ ಮೂಲಕ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಿಗೆ ಹರಿಸುವ ಮಹತ್ವಾಕಾಂಕ್ಷೆಯ ಯೋಜನೆ ಜಾರಿಗೊಳಿಸುವಂತೆ ಜುಲೈ 4 ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯರನ್ನು ಭೇಟಿಯಾಗಿ ಮನವರಿಕೆ ಮಾಡಲಾಗುವುದು ಎಂದು ಕೂಡಲಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
Vijaya Karnataka Web the pontiff went to delhi for pm modis visit
ಪ್ರಧಾನಿ ಮೋದಿ ಭೇಟಿಗೆ ದೆಹಲಿಗೆ ತೆರಳಿದ ಮಠಾಧೀಶರು


ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದಿ. ಅಟಲ್‌ ಬಿಹಾರಿ ವಾಜಪೇಯಿ ಅವರ ಕನಸಾಗಿದ್ದ ನದಿಗಳ ಜೋಡಣೆಗೆ ಕೇಂದ್ರ ಸರಕಾರ ಮುಂದಾಗಿರುವುದು ಸಂತಸ ತಂದಿದೆ. ರಾಷ್ಟ್ರೀಯ ನದಿ ಜೋಡಿ ಯೋಜನೆಯಲ್ಲಿ ಉತ್ತರ ಕರ್ನಾಟಕ ಭಾಗದ ನದಿಗಳನ್ನು ಜೋಡಿಸಬೇಕು ಎಂದು ಪ್ರಧಾನಿಗೆ ಹಾಗೂ ಜಲ ಸಂಪನ್ಮೂಲ ಸಚಿವರಿಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಪೋಲು ತಡೆಯಿರಿ : ಮಳೆಗಾಲದಲ್ಲಿ ಕಾಳಿ ನದಿಯ 140 ಟಿಎಂಸಿ ನೀರು ವ್ಯರ್ಥವಾಗಿ ಸಮುದ್ರ ಪಾಲಾಗುತ್ತಿದ್ದು, ಕಾಳಿ ನದಿ ನೀರನ್ನು ಮಲಪ್ರಭೆಗೆ, ಕೃಷ್ಣಾ ನದಿ ನೀರನ್ನು ಘಟಪ್ರಭಾಗೆ ಹರಿಸಬೇಕೆಂದು ಸಂಗಮೇಶ ನಿರಾಣಿ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಮಹತ್ವದ ಯೋಜನೆ ಜಾರಿಗೊಳಿಸಬೇಕು ಎಂಬುದಕ್ಕೆ ಉತ್ತರ ಕರ್ನಾಟಕದ ಎಲ್ಲಾ ಮಠಾಧೀಶರು ಹಾಗೂ ರಾಜಕಾರಣಿಗಳು ಪಕ್ಷಾತೀತವಾಗಿ ಬೆಂಬಲ ನೀಡಿದ್ದಾರೆ. ಈ ಯೋಜನೆ ಅನುಷ್ಠಾನಗೊಂಡಲ್ಲಿ ಉತ್ತರ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ತಕ್ಕಮಟ್ಟಿಗೆ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಳಿ ನದಿ ಜೋಡಣೆಯಿಂದ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ಕುಡಿಯುವ ನೀರಿನ ಬವಣೆ ನೀಗಿಸಲು ಮತ್ತು ಈ ಭಾಗದ 500-600 ಕೆರೆಗಳ ಪುನಶ್ಚೇತನಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಲಾಗುವುದು ಎಂದರು.

ಮಹದಾಯಿ ಬಗ್ಗೆ ಚರ್ಚೆ : ಮಹಾದಾಯಿ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಮತ್ತು ಎರಡು ರಾಜ್ಯಗಳಿಗೆ ಸಂಬಂಧಿಸಿದ್ದರಿಂದ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಪ್ರಧಾನಿ ಮೋದಿ ಅವರಿಗೆ ತಿಳಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ದೆಹಲಿಗೆ ಪ್ರಯಾಣ ಬೆಳೆಸಿದ ಉತ್ತರ ಕರ್ನಾಟಕದ ಮಠಾಧೀಶರನ್ನು ಮಹಾದಾಯಿ ಹೋರಾಟ ಸಮಿತಿ ಹಾಗೂ ರೈತ ಮುಖಂಡರು ಸನ್ಮಾನಿಸಿ ಬೀಳ್ಕೊಟ್ಟರು.

ವಾಲ್ಮೀಕಿ ಪೀಠದ ಪ್ರಸನ್ನ ನಂದಪುರಿ ಸ್ವಾಮೀಜಿ , ಉಪ್ಪಾರ ಭಗೀರಥ ಪೀಠದ ಶ್ರೀ ಪುರುಷೋತ್ತಮ ಸ್ವಾಮೀಜಿ, ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಪೀಠದ ಶ್ರೀ ಶಾಂತವೀರ ಸ್ವಾಮೀಜಿ, ಮಡಿವಾಳ ಗುರು ಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ ಹಾಗೂ ಅಮೃತ ಇಜಾರಿ ಸೇರಿದಂತೆ ಅನೇಕರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ