ಆ್ಯಪ್ನಗರ

ಇಂದು ಉದ್ಯಮಶೀಲತಾ ಜಾಗೃತಿ ಶಿಬಿರ

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಹೆಬ್ಬಳ್ಳಿ ಗ್ರಾಮ ಪಂಚಾಯತ್‌ ಹಾಗೂ ಗಿರಿ ಫೌಂಡೇಶನ್‌ ಸಂಯುಕ್ತಾಶ್ರಯದಲ್ಲಿ ಹೆಬ್ಬಳ್ಳಿ ಗ್ರಾಮ ಪಂಚಾಯತ್‌ ...

Vijaya Karnataka 18 Dec 2018, 5:00 am
ಧಾರವಾಡ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಹೆಬ್ಬಳ್ಳಿ ಗ್ರಾಮ ಪಂಚಾಯತ್‌ ಹಾಗೂ ಗಿರಿ ಫೌಂಡೇಶನ್‌ ಸಂಯುಕ್ತಾಶ್ರಯದಲ್ಲಿ ಹೆಬ್ಬಳ್ಳಿ ಗ್ರಾಮ ಪಂಚಾಯತ್‌ ಆವರಣದಲ್ಲಿ ಡಿ.18 ರಂದು ಬೆಳಿಗ್ಗೆ 10.30ಕ್ಕೆ ಉದ್ಯಮಶೀಲತಾ ಜಾಗೃತಿ ಶಿಬಿರವನ್ನು ಏರ್ಪಡಿಸಲಾಗಿದೆ.
Vijaya Karnataka Web today entrepreneurial awareness camp
ಇಂದು ಉದ್ಯಮಶೀಲತಾ ಜಾಗೃತಿ ಶಿಬಿರ


ಈ ಶಿಬಿರದಲ್ಲಿ ವಿವಿಧ ಸಂಪೂನ್ಮೂಲ ವ್ಯಕ್ತಿಗಳು ಭಾಗವಹಿಸಿ ಸ್ವ-ಉದ್ಯೋಗಾಕಾಂಕ್ಷಿ ಯುವಕ-ಯುವತಿಯರು ಸ್ವ-ಉದ್ಯೋಗ ಕೈಗೊಂಡು ಉದ್ಯಮಶೀಲರಾಗಿ ಹೊರಹೊಮ್ಮಲು ಇಲಾಖೆ ಮೂಲಕ ದೊರೆಯುವ ಸ್ವ-ಉದ್ಯೋಗ ಕಾರ್ಯಕ್ರಮಗಳಾದ ಪಿಎಂಇಜಿಪಿ, ಸಿಎಂಇಜಿಪಿ, ಸ್ಟಾರ್ಟಅಪ್‌, ಕೈಗಾರಿಕಾ ನೀತಿಯ ಪ್ರೋತ್ಸಾಹ ಮತ್ತು ರಿಯಾಯಿತಿಗಳ ಕುರಿತು ಮಾಹಿತಿ ನೀಡುತ್ತಾರೆ.

ಉದ್ಯಮಶೀಲತಾ ಗುಣಲಕ್ಷ ಣಗಳು, ಸಾಧನಾ ಪ್ರೇರಣೆ, ಬ್ಯಾಂಕ ಮೂಲಕ ದೊರೆಯುವ ಸಾಲ ಸೌಲಭ್ಯಗಳು, ಸ್ವ-ಉದ್ಯೋಗ ಕೈಗೊಳ್ಳಲು ಬೇಕಾದ ಪೂರಕ ತರಬೇತಿ ಕಾರ್ಯಕ್ರಮಗಳ ಕುರಿತು ಸಹ ಮಾಹಿತಿ ನೀಡಲಾಗುವುದು. ಹೆಬ್ಬಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಆಸಕ್ತ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಜಿಲ್ಲಾ ಕೈಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ