ಆ್ಯಪ್ನಗರ

ಇಂದು ರಜತಮಹೋತ್ಸವ

ಹುಬ್ಬಳ್ಳಿ : ವಿಘ್ನೇಶ್ವರ ವಿದ್ಯಾವರ್ಧಕ ಸಂಘದ ರಜತ ಮಹೋತ್ಸವದ ಅಂಗವಾಗಿ ಡಿ.21ರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಇಲ್ಲಿನ ವಿಜಯನಗರದ ಸಂಸ್ಥೆಯ ಸಭಾಭವನದಲ್ಲಿ ಆಯೋಜಿಸಲಾಗಿದೆ.

Vijaya Karnataka 21 Dec 2018, 5:00 am
ಹುಬ್ಬಳ್ಳಿ : ವಿಘ್ನೇಶ್ವರ ವಿದ್ಯಾವರ್ಧಕ ಸಂಘದ ರಜತ ಮಹೋತ್ಸವದ ಅಂಗವಾಗಿ ಡಿ.21ರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಇಲ್ಲಿನ ವಿಜಯನಗರದ ಸಂಸ್ಥೆಯ ಸಭಾಭವನದಲ್ಲಿ ಆಯೋಜಿಸಲಾಗಿದೆ.
Vijaya Karnataka Web today is a silver jubilee
ಇಂದು ರಜತಮಹೋತ್ಸವ


ಡಿ.21ರಂದು ಬೆಳಗ್ಗೆ 9.30ರಿಂದ ಸಂಜೆ 5.30ರ ವರೆಗೆ ಅಂತರ್‌ ಶಾಲಾ ಮಟ್ಟದ ವಿಜ್ಞಾನ ಮತ್ತು ಗಣಿತ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದು, ತಾವು ತಯಾರಿಸಿದ ವಸ್ತುಗಳ ಪ್ರದರ್ಶನ ಮಾಡಲಿದ್ದಾರೆ.

ಡಿ.28ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಮಟ್ಟದ ಕನ್ನಡ ಭಾಷೆಯ ರಸ ಪ್ರಶ್ನೆ ಸ್ಪರ್ಧೆ ನಡೆಯಲಿದೆ. ಜನೇವರಿ 6ರಂದು ಅಂತರ್‌ ಶಾಲಾ ಚರ್ಚಾ ಸ್ಪರ್ಧೆಯನ್ನು ಜರುಗಲಿದೆ. ಜ.8ರಂದು ವಿದ್ಯಾರ್ಥಿಗಳ ಪಾಲಕ-ಪೋಷಕರಿಗೆ ವಿವಿಧ ಕ್ರೀಡೆಗಳು ನಡೆಯಲಿವೆ. ವಿಘ್ನೇಶ್ವರ ನರ್ಸಿಂಗ್‌ ಕಾಲೇಜಿನಿಂದ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಫೆಬ್ರುವರಿ ತಿಂಗಳ ಮೊದಲ ವಾರದಲ್ಲಿ ಸಂಸ್ಥೆಯ 25ನೇ ವರ್ಷದ ಅಂಗವಾಗಿ ಹಳೆಯ ವಿದ್ಯಾರ್ಥಿಗಳ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನದಲ್ಲಿ ಸಾಧಕರಿಗೆ ಸನ್ಮಾನ ಹಾಗೂ ಸಂಸ್ಥೆಯ ಕಿರು ಪುಸ್ತಕ ಬಿಡುಗಡೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ