ಆ್ಯಪ್ನಗರ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಅಳ್ನಾವರ: ಕುರುಬ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದರ ಜತೆಗೆ ಇನ್ನಿತರ ಹಲವಾರು ಬೇಡಿಕೆಗಳನ್ನು ಈಡೆರಿಸುವಂತೆ ಆಗ್ರಹಿಸಿ ಪಟ್ಟಣದ ಕುರುಬ ಸಮಾಜದವರು ತಹಸೀಲ್ದಾರ್‌ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

Vijaya Karnataka 18 Feb 2020, 5:00 am
ಅಳ್ನಾವರ: ಕುರುಬ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದರ ಜತೆಗೆ ಇನ್ನಿತರ ಹಲವಾರು ಬೇಡಿಕೆಗಳನ್ನು ಈಡೆರಿಸುವಂತೆ ಆಗ್ರಹಿಸಿ ಪಟ್ಟಣದ ಕುರುಬ ಸಮಾಜದವರು ತಹಸೀಲ್ದಾರ್‌ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
Vijaya Karnataka Web various demand demands fulfillment
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ


ಅಲೆಮಾರಿಗಳಾಗಿ ಬದುಕುತ್ತಿರುವ ಕುರುಬ ಜನಾಂಗದವರು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಅವರಿಗೆ ಪ.ಪಂ ಜಾತಿ ಪ್ರಮಾಣ ಪತ್ರ ವಿತರಿಸಬೇಕು. ಗೋಮಾಳಗಳ ಅತಿಕ್ರಮಣ ತೆರವುಗೊಳಿಸಿ ಕುರಿಗಾರರಿಗೆ ನೀಡಬೇಕು. ಕುರಿಗಳಿಗೆ ಉಚಿತ ಔಷಧೋಪಚಾರ ಒದಗಿಸಬೇಕು. ಮಳೆಗಾಲದಲ್ಲಿವಾಸಕ್ಕೆ ಶೆಡ್‌ ನಿರ್ಮಿಸಲು ಅನುದಾನ ನೀಡಬೇಕು ಹಾಗೂ ವಲಸೆ ಕುಟುಂಬದ ಮಕ್ಕಳಿಗೆ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸುವಂತೆ ಮನವಿಯಲ್ಲಿಒತ್ತಾಯಿಸಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ವೀರ ಸಂಗೊಳ್ಳಿ ರಾಯಣ್ಣನ ಹೆಸರು ನಾಮಕರಣ ಮಾಡಬೇಕು ಮತ್ತು ಕುರಿ ಸಾಕಣೆಗೆ ಪಡೆದಿರುವ ಸಾಲವನ್ನು ಮನ್ನಾ ಮಾಡುವಂತೆ ಮನವಿಯಲ್ಲಿಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿಕನಕ ಸೇವಾ ಸಂಘದ ಅಧ್ಯಕ್ಷ ಹನುಮಂತ ಅಡಗಲ್‌, ಪ್ರಧಾನ ಕಾಯದರ್ಶಿ ರವಿರಾಜ ಕಂಬಳಿ, ಶಿವಪ್ಪ ತುರಮರಿ, ಶಂಕರ ನರಗುಂದ, ಬಸವರಾಜ ರಾಜಾಪೂರ ಮತ್ತಿತರರು ಇದ್ದರು.

ಮನವಿ ಸ್ವೀಕರಿಸಿದ ಅಳ್ನಾವರ ತಹಸೀಲ್ದಾರ್‌ ಅಮರೇಶ ಪಮ್ಮಾರ ಮಾತನಾಡಿ, ಮನವಿಯನ್ನು ಸರಕಾರಕ್ಕೆ ಕಳುಹಿಸುವ ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ