ಆ್ಯಪ್ನಗರ

ತವರೂರುಗಳಿಗೆ ಮರಳಿದ ಕಾರ್ಮಿಕರು

ಹುಬ್ಬಳ್ಳಿ: ರಾಜ್ಯದ ಇತರೆ ಸ್ಥಳಗಳಿಂದ ಜಿಲ್ಲೆಗೆ ಆಗಮಿಸಿ ದುಡಿಯುತ್ತಿದ್ದ ವಲಸೆ ಕಾರ್ಮಿಕರು ಸೇರಿದಂತೆ, ಪ್ರವಾಸಿಗರು, ಯಾತ್ರಿಗಳು ಹಾಗೂ ವಿದ್ಯಾರ್ಥಿಗಳಿಗೆ ಅವರವರ ತವರೂರುಗಳಿಗೆ ತೆರಳಲು ಜಿಲ್ಲಾಡಳಿತದಿಂದ ವಿಶೇಷ ಬಸ್‌ ಸೌಲಭ್ಯ ಕಲ್ಪಿಸಲಾಗಿದೆ.

Vijaya Karnataka 5 May 2020, 5:00 am
ಹುಬ್ಬಳ್ಳಿ: ರಾಜ್ಯದ ಇತರೆ ಸ್ಥಳಗಳಿಂದ ಜಿಲ್ಲೆಗೆ ಆಗಮಿಸಿ ದುಡಿಯುತ್ತಿದ್ದ ವಲಸೆ ಕಾರ್ಮಿಕರು ಸೇರಿದಂತೆ, ಪ್ರವಾಸಿಗರು, ಯಾತ್ರಿಗಳು ಹಾಗೂ ವಿದ್ಯಾರ್ಥಿಗಳಿಗೆ ಅವರವರ ತವರೂರುಗಳಿಗೆ ತೆರಳಲು ಜಿಲ್ಲಾಡಳಿತದಿಂದ ವಿಶೇಷ ಬಸ್‌ ಸೌಲಭ್ಯ ಕಲ್ಪಿಸಲಾಗಿದೆ.
Vijaya Karnataka Web 4 SANTOSH- BUS-1_21
ಹುಬ್ಬಳ್ಳಿಯಲ್ಲಿಸಿಲುಕಿದ್ದ ಕಾರ್ಮಿಕರು, ಯಾತ್ರಾರ್ಥಿಗಳು, ವಿದ್ಯಾರ್ಥಿಗಳನ್ನು ಅವರವರ ಊರಿಗೆ ವಿಶೇಷ ಬಸ್‌ಗಳಲ್ಲಿಕಳುಹಿಸಲಾಯಿತು.

ಹೊಸ ಬಸ್‌ ನಿಲ್ದಾಣದಿಂದ ಸಂಜೆ 6 ಗಂಟೆಯವರೆಗೆ ಒಟ್ಟು 7 ಬಸ್‌ಗಳಲ್ಲಿ198 ಜನರು ತಮ್ಮ ಊರುಗಳಿಗೆ ಕಳುಹಿಸಿಕೊಡಲಾಯಿತು. ಬೆಂಗಳೂರು, ಗುಲ್ಬರ್ಗ, ಬೀದರ್‌, ಅಫಜಲಪುರ, ಮಂಗಳೂರು, ರಾಯಚೂರು ಮಾರ್ಗಗಳಲ್ಲಿವಿಶೇಷ ಬಸ್‌ ಮೂಲಕ ಪ್ರಯಾಣಿಕರನ್ನು ಕಳುಹಿಸಲಾಗಿದೆ.

ಎಸಿ ಮಹಮದ್‌ ಜುಬೇರ್‌ ನೇತೃತ್ವದ ಅಧಿಕಾರಿಗಳ ತಂಡ ಹೊರ ಜಿಲ್ಲೆಗಳ ಪ್ರಯಾಣಿಕರನ್ನು ಕಳುಹಿಸುವ ವ್ಯವಸ್ಥೆ ಮಾಡಿದರು.
ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಿ, ನೋಂದಣಿ ಮಾಡಿಕೊಂಡು, ಸಂಪೂರ್ಣ ವಿವರಗಳನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ