ಆ್ಯಪ್ನಗರ

ರಾಷ್ಟ್ರಪ್ರಗತಿಗೆ ಕಾರ್ಮಿಕರ ಪಾತ್ರ ಹಿರಿದು

ಗದಗ:ದೇಶದ ಕೈಗಾರಿಕೆ ಹಾಗೂ ಆರ್ಥಿಕ ಪ್ರಗತಿಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ ಎಂದು ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ ಹೇಳಿದರು.

ವಿಕ ಸುದ್ದಿಲೋಕ 2 May 2016, 5:00 am

ಗದಗ:ದೇಶದ ಕೈಗಾರಿಕೆ ಹಾಗೂ ಆರ್ಥಿಕ ಪ್ರಗತಿಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ ಎಂದು ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ ಹೇಳಿದರು.

ಕಟ್ಟಡ ನಿರ್ಮಾಣ ಕಾರ್ಮಿಕ ಮಹಾ ಸಂಘದ ವತಿಯಿಂದ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರಕಾರಗಳು ಕಾರ್ಮಿಕರಿಗಾಗಿ ಕನಿಷ್ಠ ಕೂಲಿ, ಸೇವಾ ಭದ್ರತೆ, ವೈದ್ಯಕೀಯ ಸೇವೆ, ರಜೆ ಸೌಲಭ್ಯಕ್ಕಾಗಿ ಹಲವು ಕಾನೂನುಗಳನ್ನು ಜಾರಿಗೊಳಿಸಿದೆ. ಬಡ ಕಾರ್ಮಿಕರ ಅಭಿವೃದ್ಧಿ, ಕಲ್ಯಾಣಕ್ಕಾಗಿ ಬಜೆಟ್‌ನಲ್ಲಿ ಕೋಟ್ಯಂತರ ರೂ. ಮೀಸಲಿಡಲಾಗಿದೆ. ಕಾರ್ಮಿಕರು ಸಂಘಟಿತರಾಗಿ ತಮ್ಮ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಗದಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗುರಣ್ಣ ಬಳಗಾನೂರ ಮಾತನಾಡಿ, ಕಾರ್ಮಿಕರಿಗೆ ಈಗಾಗಲೇ 1.40 ಲಕ್ಷ ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಆದರೆ, ಬಹುತೇಕ ಕಾರ್ಮಿಕರು ಅದರ ಸದುಪಯೋಗ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಜಿಪಂ ಸದಸ್ಯ ವಾಸಣ್ಣ ಕುರಡಗಿ ಮಾತನಾಡಿದರು. ಕಟ್ಟಡ ನಿರ್ಮಾಣ ಕಾರ್ಮಿಕರ ಮಹಾಸಂಘದ ಅಧ್ಯಕ್ಷ ಎಂ.ಐ. ನವಲೂರ ಅಧ್ಯಕ್ಷ ತೆ ವಹಿಸಿದ್ದರು. ಕಟ್ಟಡ ಕಾರ್ಮಿಕರ ಕೈಪಿಡಿಯನ್ನು ಇದೇ ಸಂದರ್ಭ ಬಿಡುಗಡೆ ಮಾಡಲಾಯಿತು. ಕಟ್ಟಡ ನಿರ್ಮಾಣ ಕಾರ್ಮಿಕರ ಪತ್ತಿನ ಸಹಕಾರ ಸಂಘದ ಷೇರುಪತ್ರ ಹಾಗೂ ಕಾರ್ಮಿಕ ಕಾರ್ಡ್‌ಗಳನ್ನು ವಿತರಿಸಲಾಯಿತು.

ಸಭಾ ಕಾರ್ಯಕ್ರಮಕ್ಕೂ ಮೊದಲು ಕಟ್ಟಡ ನಿರ್ಮಾಣ ಕಾರ್ಮಿಕರ ಪತ್ತಿನ ಸಹಕಾರ ಸಂಘದ ಬ್ಯಾಂಕ್‌ ಆವರಣದಲ್ಲಿ ಕಾರ್ಮಿಕರ ರಾರ‍ಯಲಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಚಾಲನೆ ನೀಡಿದರು. ನೂರಾರು ಕಾರ್ಮಿಕರು ಪಾಲ್ಗೊಂಡಿದ್ದ ಮೆರವಣಿಗೆ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ವೀರೇಶ್ವರ ಪುಣ್ಯಾಶ್ರಮ ತಲುಪಿತು.

ನಗರಸಭೆ ಉಪಾಧ್ಯಕ್ಷ ಕೃಷ್ಣಾ ಪರಾಪುರ, ಜಿಲ್ಲಾ ಕಾರ್ಮಿಕ ಅಧಿಕಾರಿ ಮಾರಿಕಾಂಬಾ ಹುಲಕೋಟಿ, ಕನ್ಸಲ್ಟಿಂಗ್‌ ಎಂಜಿನಿಯರ್‌ ಬಿ.ಎ.ಬ್ಯಾಳಿ, ಪಿ.ಟಿ. ದಾಸಪ್ಪನವರ, ಎಂ.ಸಿ. ಐಲಿ, ಯೇಸುಜಾನ್‌ ಶೌರಿ, ಭೀಮಪ್ಪ ಪೂಜಾರ, ಜಾನಿಸಾಬ್‌ ಹಣಗಿ, ಶಬ್ಬಿರ ಕಾಗದಗಾರ ಇತರರು ಇದ್ದರು.

ಕಾರ್ಮಿಕರಿಗೆ ಸನ್ಮಾನ:

ಜೈ ಭೀಮ ಸೇನಾ ಸಂಘರ್ಷ ಸಮಿತಿ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕರ ದಿನಾಚರಣೆಯಲ್ಲಿ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಯಲ್ಲಪ್ಪ ಹುಬ್ಬಳ್ಳಿ ಮಾತನಾಡಿ, ಯಾವುದೇ ಕೆಲಸ ಸುಗಮವಾಗಿ ನಡೆಯಲು ಹಣವೊಂದೆ ಮುಖ್ಯವಲ್ಲ. ಕಾರ್ಮಿಕರ ಶ್ರಮವೂ ಮುಖ್ಯವಾಗಿದೆ ಎಂದರು.

ಜೈ ಭೀಮ ಸೇನಾ ಜಿಲ್ಲಾಧ್ಯಕ್ಷ ಗಣೇಶ ಹುಬ್ಬಳ್ಳಿ ಮಾತನಾಡಿದರು. ಜೈ ಭೀಮ ಸೇನಾ ರಾಜ್ಯ ಉಪಾಧ್ಯಕ್ಷ ರಾಘವೇಂದ್ರ ಪರಾಪುರ, ಜಿಲ್ಲಾ ಉಪಾಧ್ಯಕ್ಷ ರಾದ ಮಂಜುನಾಥ ತೌಜಲ್‌, ಪರಶುರಾಂ ಸಂಗಾಪುರ, ರಾಷ್ಟ್ರೀನ್‌ ಜೋಸೆಪ್‌, ಹೇಮಂತ್‌ ಹುಬ್ಬಳ್ಳಿ, ವೆಂಕಟೇಶ ರಾಮಗಿರಿ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ