ಆ್ಯಪ್ನಗರ

ಮಾದಕ ವಸ್ತು ವಿರೋಧಿ ಸಪ್ತಾಹ

ಗದಗ : ಜಿಲ್ಲಾಡಳಿತ, ಜಿಪಂ, ವೈದ್ಯಕೀಯ ಮಹಾವಿದ್ಯಾಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ( ಮಾನಸಿಕ ಆರೋಗ್ಯ ವಿಭಾಗ) ಜಿಲ್ಲಾ ಪೊಲೀಸ್‌ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಅಬಕಾರಿ ಇಲಾಖೆ,

Vijaya Karnataka 26 Jun 2019, 5:00 am
ಗದಗ : ಜಿಲ್ಲಾಡಳಿತ, ಜಿಪಂ, ವೈದ್ಯಕೀಯ ಮಹಾವಿದ್ಯಾಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ( ಮಾನಸಿಕ ಆರೋಗ್ಯ ವಿಭಾಗ) ಜಿಲ್ಲಾ ಪೊಲೀಸ್‌ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಅಬಕಾರಿ ಇಲಾಖೆ, ಜಿಲ್ಲಾ ಕಾರಾಗೃಹ, ಕೆವಿಎಸ್‌ಆರ್‌ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ತಾಲೂಕು ಆರೊಗ್ಯಾಧಿಕಾರಿಗಳ ಕಾರಾರ‍ಯಲಯದ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಣೆ ವಿರೋಧಿ ಸಪ್ತಾಹ ಕಾರ‍್ಯಕ್ರಮವನ್ನು ಜೂ.26 ರಂದು ಬೆಳಗ್ಗೆ 10ಕ್ಕೆ ನಗರದ ಕೆ.ವಿ.ಎಸ್‌.ಆರ್‌. ಪದವಿ ಪೂರ್ವ ಮಹಾವಿದ್ಯಾಲಯದ ಸಭಾಭವನದಲ್ಲಿ ಏರ್ಪಡಿಸಲಾಗುತ್ತಿದೆ.
Vijaya Karnataka Web an anti narcotic drug
ಮಾದಕ ವಸ್ತು ವಿರೋಧಿ ಸಪ್ತಾಹ


ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯಕ್‌ ಕಾರ‍್ಯಕ್ರಮ ಉದ್ಘಾಟಿಸುವರು. ಜಿಪಂ ಅಧ್ಯಕ್ಷ ಎಸ್‌.ಪಿ. ಬಳಿಗಾರ ಉಪಸ್ಥಿತರಿರುವರು. ಶಾಸಕ ಎಚ್‌.ಕೆ.ಪಾಟೀಲ ಅಧ್ಯಕ್ಷ ತೆ ವಹಿಸುವರು.

ಸಂಸದರಾದ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡರ, ಶಾಸಕ ಸಿ.ಸಿ.ಪಾಟೀಲ, ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಎಸ್‌.ವಿ. ಸಂಕನೂರ, ಪ್ರದೀಪ ಶೆಟ್ಟರ್‌, ಜಿಪಂ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ಶಿಕ್ಷ ಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ ನೀಲಗುಂದ, ತಾಪಂ ಅಧ್ಯಕ್ಷ ಮೋಹನ ದುರಗಣ್ಣವರ, ಉಪಾಧ್ಯಕ್ಷೆ ಸುಜಾತಾ ಖಂಡು, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ‍್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ‍್ಯದರ್ಶಿ ಜಿ.ಎಸ್‌. ಸಲಗರೆ ಆಗಮಿಸುವರು. ಕನಕದಾಸ ಶಿಕ್ಷ ಣ ಸಮಿತಿ ಅಧ್ಯಕ್ಷ ಡಾ.ಬಿ.ಎಫ್‌. ದಂಡಿನ ವಿಶೇಷ ಆಹ್ವಾನಿತರಾಗಿ ಆಗಮಿಸುವರು. ಮನೋವೈದ್ಯ ಡಾ.ಸೋಮಶೇಖರ ಬಿಜ್ಜಳ, ಡಾ.ವೈಶಾಲಿ ಹೆಗಡೆ ಉಪನ್ಯಾಸಕರಾಗಿ ಆಗಮಿಸುವರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ