ಆ್ಯಪ್ನಗರ

ಬಾಲಕಾರ್ಮಿಕ ಪದ್ಧತಿ ತಡೆಗೆ ಮುಂದಾಗಿ

ಗದಗ : ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಸಂಘಟಿತರಾಗಿ ಹೋರಾಟ ನಡೆಸಿ, ಎಲ್ಲ ಮಕ್ಕಳಿಗೆ ಉತ್ತಮ ಶಿಕ್ಷ ಣ ಒದಗಿಸಿ ಅವರ ಸರ್ವಾಂಗೀಣ ಅಭಿವೃದ್ಧಿಗೆ ಪ್ರತಿಯೊಬ್ಬರು ಮುಂದಾಗಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಜಿ.ಸಲಗೆರೆ ಹೇಳಿದರು.

Vijaya Karnataka 18 Jun 2019, 5:00 am
ಗದಗ : ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಸಂಘಟಿತರಾಗಿ ಹೋರಾಟ ನಡೆಸಿ, ಎಲ್ಲ ಮಕ್ಕಳಿಗೆ ಉತ್ತಮ ಶಿಕ್ಷ ಣ ಒದಗಿಸಿ ಅವರ ಸರ್ವಾಂಗೀಣ ಅಭಿವೃದ್ಧಿಗೆ ಪ್ರತಿಯೊಬ್ಬರು ಮುಂದಾಗಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಜಿ.ಸಲಗೆರೆ ಹೇಳಿದರು.
Vijaya Karnataka Web GDG-17SALIM8
ಗದಗನಲ್ಲಿ ನಡೆದ ಬಾಲಕಾರ್ಮಿಕ ವಿರೋಧಿ ಜಾಗೃತಿ ಜಾಥಾಕ್ಕೆ ನ್ಯಾಯಧೀಶ ಜಿ.ಎಸ್‌. ಸಂಗ್ರೇಶಿ ಚಾಲನೆ ನೀಡಿದರು.


ಸೋಮವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲ ಸಂಘ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷ ಣ ಇಲಾಖೆ ಹಾಗೂ ಜ.ತೋಂಟದಾರ್ಯ ಎಂಜನಿಯರಿಂಗ್‌ ಕಾಲೇಜಿನ ಆಶ್ರಯದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ನಾನಾ ಕಾರಣಗಳಿಂದ ಇಂದು ಸಾಕಷ್ಟು ಮಕ್ಕಳು ಶಿಕ್ಷ ಣದಿಂದ ವಂಚಿತರಾಗುತ್ತಿದ್ದಾರೆ. ಸಮಾಜದಲ್ಲಿನ ಪ್ರತಿ ಮಗುವಿಗೂ ಉತ್ತಮ ಶಿಕ್ಷ ಣ ಕಡ್ಡಾಯವಾಗಿ ದೊರಕುವಂತಾಗಬೇಕು. ಅದರಲ್ಲೂ ಶಾಲೆ ಬಿಟ್ಟ ಮಕ್ಕಳನ್ನೂ ಮರಳಿ ಶಾಲೆಗೆ ಕರೆತಂದು ಗುಣಮಟ್ಟದ ಶಿಕ್ಷ ಣ ಒದಗಿಸಲು ಪ್ರತಿಯೊಬ್ಬರು ಮುಂದಾಗಬೇಕೆಂದು ಹೇಳಿದರು.

ವಿ.ವಿ. ನಡವಲಮನಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಮಾರಿಕಾಂಬ ಹುಲಕೋಟಿ, ಸಹಾಯಕ ಕಾರ್ಮಿಕ ಆಯುಕ್ತೆ ಮೀನಾ ಪಾಟೀಲ, ಪ್ರಭಾವತಿ ಬೇಟಿಗೇರಿ. ವಕೀಲರ ಸಂಘದ ಅಧ್ಯಕ್ಷ ವಿ.ವಿ. ಹುಬ್ಬಳ್ಳಿ, ಜ್ಯೋತಿ ನಾಯಕ. ವಿವಿಧ ಇಲಾಖೆ ಅಧಿಕಾರಿಗಳು, ಶಿಕ್ಷ ಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಗೀತಾಂಜಲಿ ಗೌಡರ ನಿರೂಪಿಸಿದರು. ಕಾರ್ಯಕ್ರಮ ಮುನ್ನ ಜರುಗಿದ ಬಾಲಕಾರ್ಮಿಕ ವಿರೋಧಿ ಜಾಗೃತಿ ಜಾಥಾಕ್ಕೆ ಜಿಲ್ಲಾ ಸತ್ರ ನ್ಯಾಯಾಧೀಶ ಜಿ.ಎಸ್‌. ಸಂಗ್ರೇಶಿ ಚಾಲನೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ